ದಾವಣಗೆರೆ (Davanagere ): ವರದಕ್ಷಿಣೆ ತರುವಂತೆ ಕಿರುಕುಳ ನೀಡಿ ಪತ್ನಿ ಸಾವಿಗೆ ಕಾರಣರಾದ ಪತಿ ಮಂಜುನಾಥಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ ನೀಡಿ ನ್ಯಾಯಾಲಯ ಆದೇಶ ನೀಡಿದೆ.
15-12-2020 ರಂದು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಮೃತಳ ತಾಯಿ ಶ್ರೀಮತಿ ನಿಂಗಮ್ಮ ಮಗಳ ಶೋಭಾ ರಾಣೆಗೆ ಚನ್ನಗಿರಿ ತಾಲೂಕಿನ ಮೇದುಗೊಂಡನಹಳ್ಳಿಗೆ 5 ತೊಲ ಬಂಗಾರ, 15 ತೊಲ ಬೆಳ್ಳಿ, 3 ಲಕ್ಷ ಖರ್ಚು ಮಾಡಿ ಮದುವೆ ಮಾಡಿಕೊಡಲಾಗಿತ್ತು. ಅದರೂ ಪತಿ ವರದಕ್ಷಿಣೆ ತರುವಂತೆ ಕಿರುಕುಳ ನೀಡಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿದ್ದರಿಂದ ಶೋಭಾರಾಣೆ ನೇಣಿಗೆ ಶರಣಾಗಿದ್ದಾರೆ. ಈ ಹಿನ್ನಲೆಯಲ್ಲಿ ಕ್ರಮ ಕೈಗೊಳ್ಳುವಂತೆ ದೂರು ದಾಖಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖಾಧಿಕಾರಿ ಡಿವೈಎಸ್ಪಿ ಪ್ರಶಾಂತ್ ಮುನ್ನೋಳ್ಳಿ ಆರೋಪಿತರ ವಿರುದ್ಧ ನ್ಯಾಯಾಲಯಕ್ಕೆ ದೋಷರೋಪಣಾಪಟ್ಟಿಯನ್ನು ಸಲ್ಲಿಸಿದ್ದರು.
01 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಮಂಜಪ್ಪ ಹನುಮಂತಪ್ಪ ಅಣ್ಣಯ್ಯನವರ್ ರವರು ಆರೋಪಿ ಮಂಜುನಾಥ ಆರೋಪ ಸಾಬೀತಾಗಿದ್ದರಿಂದ ದಿನಾಂಕ:15-10-2024 ರಂದು 07 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 40,000/ರೂ ದಂಡ ವಿಧಿಸಿ ಆದೇಶಿಸಿದ್ದಾರೆ.
READ ALSO : Davanagere | ಕಾಲುಬಾಯಿ ರೋಗ ತಡೆಗೆ 6 ನೇ ಸುತ್ತಿನ ಲಸಿಕಾ ಅಕ್ಟೋಬರ್ 21 ರಿಂದ ಕಾರ್ಯಕ್ರಮ :ಡಿಸಿ
ದಂಡದ ಮೊತ್ತದ ಹಣದಲ್ಲಿ 35,000/- ರೂ ಹಣವನ್ನು ಪ್ರಕರಣದ ಸಂತ್ರಸ್ಥೆ ಕುಟುಂಬದವರಿಗೆ ನೀಡುವಂತೆ ಹಾಗೂ ಉಳಿದ 5,000/-ರೂ ಮೊತ್ತ ಹಣವನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳುವಂತೆ ಸೂಚಿಸಿದ್ದಾರೆ. ಸರ್ಕಾರಿ ವಕೀಲರಾದ ಕೆ.ಎಸ್ ಸತೀಶ್ ನ್ಯಾಯ ಮಂಡನೆ ಮಾಡಿದ್ದಾರೆ.
ಪ್ರಕರಣದಲ್ಲಿ ತನಿಖೆ ಕೈಗೊಂಡು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ ತನಿಖಾಧಿಕಾರಿ ಡಿವೈಎಸ್ಪಿ ಪ್ರಶಾಂತ್ ಮುನ್ನೋಳ್ಳಿ, ಸಿಬ್ಬಂದಿಗಳನ್ನು ಹಾಗೂ ಸರ್ಕಾರಿ ವಕೀಲರಾದ ಕೆ.ಎಸ್ ಸತೀಶ್ ರವರನ್ನು ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ ಎಂ. ಸಂತೋಷ & ಮಂಜುನಾಥ. ಜಿ ರವನ್ನು ಶ್ಲಾಘೀಸಿದ್ದಾರೆ.