Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere news | ಗಾಂಧೀಜಿ ಅವರ ಸಿದ್ದಾಂತ ಪ್ರಪಂಚಕ್ಕೆ ಮಾದರಿ : ಕೆ.ಎಸ್.ಬಸವಂತಪ್ಪ
ತಾಜಾ ಸುದ್ದಿ

Davanagere news | ಗಾಂಧೀಜಿ ಅವರ ಸಿದ್ದಾಂತ ಪ್ರಪಂಚಕ್ಕೆ ಮಾದರಿ : ಕೆ.ಎಸ್.ಬಸವಂತಪ್ಪ

Dinamaana Kannada News
Last updated: October 2, 2024 1:47 pm
Dinamaana Kannada News
Share
davanagere
davanagere
SHARE

ದಾವಣಗೆರೆ ಅ. 2 (Davanagere)  :  ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ತಮ್ಮ ಸರಳತೆಯಿಂದಲೇ ಇತರರಿಗೆ ಮೇಲ್ಪಂಕ್ತಿಯಾಗಿದ್ದು ಶಾಂತಿ ಮತ್ತು ಅಂಹಿಸಾ ಮಂತ್ರದಿಂದಲೇ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟರು. ಅವರ ಈ ನಡೆ ಇಡೀ ಪ್ರಪಂಚಕ್ಕೆ ಮಾದರಿಯಾಗಿದೆ ಎಂದು ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ರಾಮನಗರದಲ್ಲಿನ ಗಾಂಧಿಭವನದಲ್ಲಿ ಏರ್ಪಡಿಸಲಾದ ಸ್ವಚ್ಛತಾ ನಡಿಗೆ ಹಾಗೂ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ  155 ನೇ ಜನ್ಮ ದಿನಾಚರಣೆ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರೀಜಿಯವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಭಾರತವಲ್ಲದೇ ಹೊರದೇಶಗಳಲ್ಲಿ ಗಾಂಧೀಜಿಯವರ ಶಾಂತಿ ಮತ್ತು ಅಹಿಂಸಾ ತತ್ವಗಳನ್ನೇ ಅನುಸರಿಸಿದರು. ಜಾಗತಿಕವಾಗಿ ಗಾಂಧಿ ತತ್ವಾದರ್ಶಗಳು ಇಂದಿಗೂ ಪ್ರಸ್ತುತವೆನಿಸಿದ್ದು ಇಂತಹ ಮಹಾನ್ ವ್ಯಕ್ತಿಯ ಜಯಂತಿ ಆಚರಿಸುತ್ತಿರುವ ನಾವುಗಳು ಮಾನವೀಯ ಹೃದಯಗಳನ್ನು ಹೊಂದಿದಾಗ ಮಾತ್ರ ಇಂತಹ ಕಾರ್ಯಕ್ರಮಗಳಿಗೆ ಅರ್ಥ ಬರುತ್ತದೆ ಎಂದರು.

ಗಾಂಧಿಜೀಯವರ ಸರಳತೆ, ಸ್ವಚ್ಛತೆ, ಭಾವನಾತ್ಮಕ ಸಂದೇಶಗಳನ್ನು ನಾವೇಲ್ಲರೂ ಅಳವಡಿಸಿಕೊಳ್ಳಬೇಕು. ಸ್ವಚ್ಛತೆ ಎನ್ನುವ ಕೆಲಸ ಮೊದಲು ನಮ್ಮ ಮನೆ, ಸುತ್ತಮುತ್ತಲಿನ ವಾತಾವರಣದಿಂದ ಆರಂಭ ಆಗಬೇಕಿದೆ. ಎಲ್ಲಿಯವರೆಗೆ ಮಾನವ ಧರ್ಮ ಇರುತ್ತದೆಯೋ ಅಲ್ಲಿಯವರೆಗೆ ಗಾಂಧಿಜೀಯವರ ತತ್ವ ಆದರ್ಶಗಳು ಇರಲಿವೆ. ಎಲ್ಲಾ ಧರ್ಮಗಳ ಸಾರವೇ ಶಾಂತಿ ಮತ್ತು ಅಹಿಂಸೆ, ಇದನ್ನು ಎಲ್ಲರೂ ಅರಿತುಕೊಳ್ಳಬೇಕೆಂದು ಕಿವಿಮಾತು ಹೇಳಿದರು.

ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಜಯಂತಿ ಅಂಗವಾಗಿ ಏರ್ಪಡಿಸಲಾದ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಸ್ವಚ್ಛತಾ ನಡಿಗೆ ಹಾಗೂ ವೇದಿಕೆ ಕಾರ್ಯಕ್ರಮದಲ್ಲಿ ಮಹಾನಿಯರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ ಚರಕ ನೂಲುವ ಮೂಲಕ ಸರ್ವಧರ್ಮ ಪ್ರಾರ್ಥನೆ, ಭಜನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಕಲ್ಪನೆಯಂತೆ ದೇಶವನ್ನು ಸುಶಿಕ್ಷಿತ, ಸುಸಂಸ್ಕøತ ದೇಶವನ್ನಾಗಿಸಲು ಗಾಂಧಿಜೀಯವರ ತತ್ವ, ಆದರ್ಶ, ಸರಳತೆಯನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕೆಂದು ಕರೆ ನೀಡಿದರು.

ಸ್ವಚ್ಛ ಭಾರತ ಗಾಂಧಿಜೀಯವರ ಕನಸಾಗಿತ್ತು. ಸ್ವಚ್ಛತೆಗೆ ಆದ್ಯತೆ ನೀಡುತ್ತಿದ್ದ ಅವರ ಸರಳತೆ, ಸಜ್ಜನಿಕೆ ಕೇವಲ ಭಾರತಕ್ಕೆ ಮಾತ್ರವಲ್ಲದೇ ಇತರೆ ದೇಶಗಳಿಗೆ ಅನುಕರಣಿಯವಾಗಿತ್ತು. ಕೇವಲ ಶಾಂತಿ ಮತ್ತು ಅಹಿಂಸೆಯಿಂದ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಮಹಾನ್ ಚೇತನ ಅವರು ಎಂದು ಬಣ್ಣಿಸಿದರು.

Read also : Davanagere | ಗಾಂಧಿಜೀ ತತ್ವಗಳು ಇಂದಿಗೂ ಪ್ರಸ್ತುತ: ರಾಜೇಶ್ವರಿ ಎನ್.ಹೆಗಡೆ

ಗಾಂಧಿ ಭವನದಲ್ಲಿ ನಿರಂತರವಾಗಿ ಚಟುವಟಿಕೆ ನಡೆಯಲು ಈಗಾಗಲೇ ವಿವಿಧ 12 ಇಲಾಖೆಗಳಿಂದ ಕಾರ್ಯಕ್ರಮ ಆಯೋಜಿಸಲು ಮತ್ತು ಸರ್ಕಾರದಿಂದ ಆಚರಿಸಲಾಗುವ ಬಹುತೇಕ ಜಯಂತಿಗಳನ್ನು ಇಲ್ಲಿಯೇ ಆಚರಣೆ ಮಾಡಲು ಆದೇಶಿಸಲಾಗಿದೆ. ಮುಂದಿನ ದಿನಗಳಲ್ಲಿ ಸ್ವ ಸಹಾಯ ಸಂಘದಿಂದ ತಯಾರಿಸುವ ವಿವಿಧ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲು ಉದ್ದೇಶಿಸಲಾಗಿದ್ದು ಗಾಂಧಿ ಭವನ ನಿರ್ವಹಣೆಗಾಗಿ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಶಾಸಕರ ಸಹಯೋಗದೊಂದಿಗೆ ನಿರ್ವಹಣಾ ಸಮಿತಿ ರಚನೆ ಮಾಡಿ ಗಾಂಧಿ ಚಟುವಟಿಕೆಗಳಿಗೆ ಇನ್ನಷ್ಟು ಮಹತ್ವ ಕಲ್ಪಿಸಲಾಗುತ್ತದೆ ಎಂದರು.

ಮಹಾನಗರ ಪಾಲಿಕೆಯ ಮಹಾಪೌರರಾದ ಕೆ.ಚಮನ್ ಸಾಬ್ ಮಾತನಾಡಿ, ಹಿಂದು, ಇಸ್ಲಾಂ ಮತ್ತು ಕ್ರೈಸ್ತ ಧರ್ಮಗಳು ಶಾಂತಿ ಮತ್ತು ಅಹಿಂಸೆಯನ್ನೇ ಬೋಧಿಸಿವೆ. ಎಲ್ಲಾ ಧರ್ಮಗಳ ದೇವರುಗಳು ಹೇಳುವ ಸಾರವೇ ಇನ್ನೊಂದು ಧರ್ಮವನ್ನು ದ್ವೇಷಿಸದೇ ಪ್ರೀತಿ ವಿಶ್ವಾಸದಿಂದ ಕಾಣಬೇಕೆನ್ನುವುದಿದೆ. ಆದರೆ, ಇಂದಿನ ದಿನಮಾನಗಳಲ್ಲಿ ಯುವಕರು ಧರ್ಮ, ದೇವರ ಕಲ್ಪನೆಗಳನ್ನು ತಪ್ಪಾಗಿ ಅರ್ಥೈಸಿಕೊಂಡು ಸಂಘರ್ಷದ ಹಾದಿ ತುಳಿಯುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ನಾವು ಶಾಂತಿ ಮತ್ತು ಅಹಿಂಸೆ ಪಾಲಿಸದಿದ್ದರೆ ದೇಶಕ್ಕೆ ಗಂಡಾಂತರ ಎದುರಾಗಲಿದೆ ಎಂದು ಅಸಮಾಧಾನ ವ್ಯಕ್ತ ಪಡಿಸಿದರು.

ದಾವಣಗೆರೆ ಹರಿಹರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ದಿನೇಶ್ ಕೆ.ಶೆಟ್ಟಿ ಮಾತನಾಡಿ, ಸದಾ ಶಾಂತಿ ಮತ್ತು ಅಹಿಂಸೆಯನ್ನು ಪಾಲನೆ ಮಾಡುತ್ತಿದ್ದ ಗಾಂಧೀಜಿ ಇತರೆ ಚಳುವಳಿಗಳ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ವೈಯಕ್ತಿಕ ಲಾಭಕ್ಕಾಗಿ ಅವರು ಎಂದು ಚಳವಳಿ ಮಾಡಲಿಲ್ಲ ಎಂದು ಹೇಳಿದರು.

ಗಾಂಧಿ ಜಯಂತಿ ಅಂಗವಾಗಿ ಪ್ರತ್ಯೇಕ ವಿಭಾಗಗಳಲ್ಲಿ ವಿದ್ಯಾರ್ಥಿಗಳಿಗೆ ಏರ್ಪಡಿಸಲಾದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ ರೂ.3000, ದ್ವಿತೀಯ ರೂ.2000 ಹಾಗೂ ತೃತೀಯ ಬಹುಮಾನ ರೂ.1000 ನಗದು ಹಾಗೂ ಪ್ರಶಸ್ತಿಪತ್ರ ವಿತರಣೆ ಮಾಡಲಾಯಿತು.
ಪ್ರೌಢಶಾಲಾ ವಿಭಾಗ; ದಾವಣಗೆರೆ ತಾ; ಮೆಳ್ಳೆಕಟ್ಟೆ ಸರ್ಕಾರಿ ಪ್ರೌಢಶಾಲೆ 10 ನೇ ತರಗತಿ ಧನುಷ್ ಬಿ.ಎನ್. ಪ್ರಥಮ, ಜಗಳೂರು ತಾ; ದೊಣೆಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿಯ ಕೆ.ಆರ್.ಕಾವ್ಯ ದ್ವಿತೀಯ, ದಾವಣಗೆರೆ ತಾ; ಕಬ್ಬೂರು ಸರ್ಕಾರಿ ಪ್ರೌಢಶಾಲೆ 10 ನೇ ತರಗತಿ ಬಿಂದುಶ್ರೀ ತೃತೀಯ ಸ್ಥಾನ.
ಪದವಿ ಪೂರ್ವ ಶಿಕ್ಷಣ ವಿಭಾಗ; ದಾವಣಗೆರೆ ಅಂಜುಂ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ಪ್ರಥಮ ಪಿಯುಸಿ ಕೈಫಿಯಾ ಮಸ್ರೂರ್ ಪ್ರಥಮ, ಇದೇ ಕಾಲೇಜಿನ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ರಬಿಯಾ ಬಸ್ರಿ ದ್ವಿತೀಯ, ಮೋತಿ ವೀರಪ್ಪ ಸರ್ಕಾರಿ   ಪದವಿ ಪೂರ್ವ ಕಾಲೇಜಿನ ಪಿ.ಯು.ಸಿ.ಯ ಗುರುಕೀರ್ತಿ ಎಂ.ಹೆಚ್.ತೃತೀಯ ಸ್ಥಾನ.
ಪದವಿ ವಿಭಾಗ; ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತೃತೀಯ ಬಿ.ಕಾಂ. ಹನುಮಂತ ನಾಯಕ್ ಡಿ.ಪ್ರಥಮ, ತೃತೀಯ ಬಿ.ಎಸ್ಸಿ ವಿನುತ ಎಂ. ದ್ವಿತೀಯ, ದ್ವಿತೀಯ ಬಿ.ಎ. ಕೆ.ಸುದೀಪ್ ತೃತೀಯ ಸ್ಥಾನ ಪಡೆದಿದ್ದು ಬಹುಮಾನ ವಿತರಣೆ ಮಾಡಲಾಯಿತು.

ಇದಕ್ಕೂ ಮುನ್ನ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿಗಳಾದ ಜಿ.ಎಂ.ಗಂಗಾಧರಸ್ವಾಮಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ನಂತರ ಮಹಾತ್ಮ ಗಾಂಧಿ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದರು. ಇದೇ ವೇಳೆ ಗಾಂಧಿಜೀ ವೇಷಧಾರಿಯೊಂದಿಗೆ ಜಿಲ್ಲಾಡಳಿತ ಅಧಿಕಾರಿಗಳು ಭಾವಚಿತ್ರ ತೆಗೆಸಿಕೊಂಡರು. ನಂತರ ಜಿಲ್ಲಾಧಿಕಾರಿಗಳು ಸ್ವಚ್ಛತಾ ನಡಿಗೆಗೆ ಚಾಲನೆ ನೀಡಿದರು. ಸ್ವಚ್ಛತಾ ನಡಿಗೆಯ ನಂತರ ಸ್ವಚ್ಛತೆಯ ಶ್ರಮಾದಾನ ನಡೆಯಿತು.

ಇದೇ ವೇಳೆ ಸ್ವಚ್ಛತೆ ಕುರಿತು ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು. ಇದಾದ ನಂತರ ಗಾಂಧಿ ಭವನದ ಸಭಾಂಗಣದಲ್ಲಿ ಸರ್ವಧರ್ಮ ಪ್ರಾರ್ಥನೆ, ಭಜನ್ ಗೀತಗಾಯನ ನಡೆಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾಪ್ರಶಾಂತ್, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಪಾಲಿಕೆಯ ಉಪ ಮಹಾಪೌರರಾದ ಸೋಗಿ ಶಾಂತಕುಮಾರ್, ಪಾಲಿಕೆ ಸದಸ್ಯರಾದ ಎ.ನಾಗರಾಜ್, ಆಶಾ ಉಮೇಶ್, ಉಪ ವಿಭಾಗಾಧಿಕಾರಿ ಸಂತೋಷ್ ಪಾಟೀಲ್, ದೂಡಾ ಆಯುಕ್ತ ಹುಲ್ಲುಮನಿ ತಿಮ್ಮಣ್ಣ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೊಟ್ರೇಶ್, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ, ಅವರಗೆರೆ ರುದ್ರಮುನಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಬಿ.ಧನಂಜಯ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿದೇರ್ಶಕ ರವಿಚಂದ್ರ, ನಜ್ಮಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere | ಗಾಂಧಿಜೀ ತತ್ವಗಳು ಇಂದಿಗೂ ಪ್ರಸ್ತುತ: ರಾಜೇಶ್ವರಿ ಎನ್.ಹೆಗಡೆ
Next Article davanagere Davanagere | ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ ಇದೇ ಆರ್ಥಿಕ ವರ್ಷದಲ್ಲಿ ಕಾಮಗಾರಿ ಪ್ರಾರಂಭ : ರೈಲ್ವೆ ಸಚಿವ ವಿ.ಸೋಮಣ್ಣ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davangere | ಹಾಡುಹಗಲೇ ವಕೀಲ ಕಣ್ಣನ ಹತ್ಯೆ ಖಂಡಿಸಿ ಪ್ರತಿಭಟನೆ

ದಾವಣಗೆರೆ (Davangere)  : ಹೊಸೂರಿನಲ್ಲಿ ಹಾಡುಹಗಲೇ ವಕೀಲ ಕಣ್ಣನ ಅವರ ಕೊಲೆಯನ್ನು ಖಂಡಿಸಿ ದಾವಣಗೆರೆ ಜಿಲ್ಲಾ ವಕೀಲರ ಸಂಘದ ನೇತೃತ್ವದಲ್ಲಿ…

By Dinamaana Kannada News

ತಾಪಮಾನ ಹೆಚ್ಚಳ: ಗರ್ಭಿಣಿಯರ ಮೇಲೆ ದುಷ್ಪರಿಣಾಮ ಗರ್ಭಿಣಿ  ಮಹಿಳೆಯರಿಗೆ ಕೆಲವು ಟಿಪ್ಸ್ ನೀಡಿದ  ಆರೋಗ್ಯ ಇಲಾಖೆ

ಈ ಬಾರಿ ಬೇಸಿಗೆ ಕಾಲದಲ್ಲಿ ಜಾಗತಿಕ ತಾಪಮಾನ ಹೆಚ್ಚಳ ಹೆಚ್ಚಾಗಿದ್ದು, ಗರ್ಭಿಣಿ ಮಹಿಳೆಯರು ಭಾರೀ ಜಾಗೃತಿ ವಹಿಸಬೇಕೆಂದು ಆರೋಗ್ಯ ಇಲಾಖೆ…

By Dinamaana Kannada News

LG Havanur | ಅರಸು ಸಂಪುಟದಲ್ಲಿ ಹಾವನೂರು

Kannada News | Dinamaana.com | 06-09-2024  ಹಾವನೂರು, ಬಸವಲಿಂಗಪ್ಪ ಮತ್ತು ಕೆ.ಎಚ್. ರಂಗನಾಥ್ ರಂತಹ ಜನಪರ ಕಾಳಜಿಯುಳ್ಳಂತವರು ದೇವರಾಜ…

By Dinamaana Kannada News

You Might Also Like

Applications invited
ತಾಜಾ ಸುದ್ದಿ

ದೀನ್ ದಯಾಳ್ ಸ್ಪರ್ಶ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ಜಿ.ಪಂ ಸಿಇಓ

By Dinamaana Kannada News
Davanagere
ತಾಜಾ ಸುದ್ದಿ

ಬಡ ಮಕ್ಕಳ ಶಿಕ್ಷಣಕ್ಕೆ ಸರ್ಕಾರಿ ಶಾಲೆಗಳು ದೊಡ್ಡ ಕೊಡುಗೆ :ಶಾಸಕ ಕೆ.ಎಸ್.ಬಸವಂತಪ್ಪ

By Dinamaana Kannada News
Applications invited
ತಾಜಾ ಸುದ್ದಿ

ದಾವಣಗೆರೆ|ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?