ದಾವಣಗೆರೆ (Davanagere): ಸ್ನೇಹಿತನನ್ನು ಕೊಲೆ ಮಾಡಿದ ಆರೋಪಿಗೆ 6 ವರ್ಷ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ದಂಡ ವಿಧಿಸಿ ನ್ಯಾಯಾಲಯ ತೀಪು ನೀಡಿದೆ.
ಘಟನೆ ವಿವರ : 11.12.22 ರಂದು ಮುನೀರಾ ಇವರು ಬೆಂಗಳೂರಿನ ದೊಡ್ಡಬೊಮ್ಮಸಂದ್ರ ಠಾಣೆಗೆ ದೂರು ನೀಡಿ ಹನುಮಂತಪ್ಪ ಎಂಬುವವರು ನನ್ನ ಗಂಡ ಬಾಷಾ(ಬಾಬು) ಹೊನ್ನಾಳ್ಳಿಯಲ್ಲಿ ಗಾರೆ ಕೆಲಸಕ್ಕೆ ಹೋದ ಸಂದರ್ಭದಲ್ಲಿ ಜಗಳ ನಡೆದು ಹನುಮಂತಪ್ಪ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದು, ಕ್ರಮ ಕೈಗೊಳ್ಳುವಂತೆ ಹೊನ್ನಾಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಹೊನ್ನಾಳ್ಳಿಯ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟೆರ್ ಸಿದ್ದೇಗೌಡ ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಪ್ರವೀಣಕುಮಾರ್ ಆರ್.ಎನ್ ಅಪರಾಧಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ಸರಕಾರಿ ವಕೀಲ ಜಯಪ್ಪ ವಾದ ಮಾಡಿದ್ದರು.
Read also : ಡಿ.10 ರಂದು ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ