ದಾವಣಗೆರೆ ನ. 11 (Davanagere); ಹರಿಹರ ತಾಲ್ಲೂಕಿನ, ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿಗೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿಯೋಜನೆಯಡಿ ಹೊಸದಾಗಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ನರೇಗಾದಡಿ ಸಣ್ಣ, ಅತಿಸಣ್ಣ, ರೈತರು ಅರ್ಜಿ ಸಲ್ಲಿಸಬೇಕು. ಆಸಕ್ತ ರೈತರು ನವಂಬರ್ 30 ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಹರಿಹರ ಕಚೇರಿಗೆ ಅಥವಾ ಆಯಾ ಗ್ರಾಮ ಪಂಚಾಯತಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಹೋಬಳಿ ಮಟ್ಟದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದೆಂದು ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
Read aslo : Political analysis | ಜಮೀರಣ್ಣ ಬಂದ್ರು ಕುಮಾರಣ್ಣ ಖುಷಿಯಾದ್ರು