ದಾವಣಗೆರೆ (Davanagere): ಅತೀ ಹೆಚ್ಚು ಯುವ ಸೇನಾನಿಗಳನ್ನು ದೇಶದ ಗಡಿ ಕಾಯಲು ಕಳುಹಿಸಿರುವ ಗ್ರಾಮದಲ್ಲಿ ಕ್ರೀಡೆಗೆ ಹೆಚ್ಚು ಒತ್ತು ನೀಡುತ್ತಿರುವುದು ಸಂತಸದ ಸಂಗತಿ ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.
ತಾಲೂಕಿನ ತೋಳಹುಣಿಸೆ ಗ್ರಾಮದಲ್ಲಿ ಶನಿವಾರ ಗ್ರಾಮದಲ್ಲಿ ಆಯೋಜಿಸಿದ್ದ ಕ್ರಿಕೆಟ್ ಪ್ರಿಮಿಯರ್ ಲೀಗ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ದೈಹಿಕವಾಗಿ ಸದೃಢಗೊಳ್ಳಲು ಕ್ರೀಡೆಗಳು ಸಹಕಾರಿಯಾಗಿದ್ದು, ಗ್ರಾಮದ ಯುವಕರು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಗ್ರಾಮೀಣ ಕ್ರೀಡೆಗಳು ಬದುಕಿನ ಅವಿಭಾಜ್ಯ ಅಂಗವಾಗಿವೆ. ವಾಲಿಬಾಲ್, ಕಬಡ್ಡಿ, ಚಿನ್ನಿದಾಂಡು, ಹಗ್ಗಜಗ್ಗಾಟ ಸೇರಿದಂತೆ ಇನ್ನಿತರೆ ಗ್ರಾಮೀಣ ಕ್ರೀಡೆಗಳು ನಶಿಸುತ್ತಿವೆ. ಗ್ರಾಮದ ಯುವಕರು ಅವುಗಳಿಗೆ ಉತ್ತೇಜನ ನೀಡಬೇಕು ಎಂದು ಸಲಹೆ ನೀಡಿದರು.
ಕ್ರಿಕೆಟ್ ಆಟದೊಂದಿಗೆ ನಶಿಸುತ್ತಿರುವ ಗ್ರಾಮೀಣ ಕ್ರೀಡೆಗಳಿಗೆ ಪ್ರತಿಯೊಬ್ಬರೂ ಪ್ರೋತ್ಸಾಹ ನೀಡಬೇಕು. ಗ್ರಾಮೀಣ ಪ್ರದೇಶದಲ್ಲಿ ಕ್ರೀಡೆಗಳು ಹೆಚ್ಚಾಗಿ ನಡೆದಿರುವುದರಿಂದ ಇಂತಹ ಪ್ರತಿಭೆಗಳು ಬೆಳಕಿಗೆ ಬಾರದಂತಾಗಿದೆ. ಅದರಲ್ಲೂ ದೇಸೀಯ ಕ್ರೀಡೆಗಳಿಗೆ ಪ್ರೋತ್ಸಾಹದ ಕೊರತೆಯಿಂದ ನಶಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಗ್ರಾಮದಲ್ಲಿ ಹೆಚ್ಚು ಕ್ರೀಡಾ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಮಕ್ಕಳಿಗೆ ಉತ್ತೇಜನ ನೀಡಬೇಕು. ಇದರಿಂದ ಕ್ರೀಡಾಪಟುಗಳು ತಾಲೂಕು, ಜಿಲ್ಲೆ, ರಾಜ್ಯ, ದೇಶ ಹಾಗೂ ಅಂತಾರಾಷ್ಟಿçಯ ಮಟ್ಟದಲ್ಲಿ ಗುರುತಿಸಿಕೊಳ್ಳಳು ಸಾಧ್ಯವಾಗಲಿದೆ ಎಂದರು.
ಮಾಯಕೊAಡ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದು, ಅದರಂತೆ ತೋಳಹುಣಿಸೆ ಗ್ರಾಮಕ್ಕೂ ಹೆಚ್ಚಿನ ಅನುದಾನ ತಂದು ಗ್ರಾಮ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಲೋಕ್ಯಾನಾಯ್ಕ್, ಪಾರ್ಥ, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರು ಕ್ರಿಕೆಟ್ ಪಂದ್ಯಾವಳಿಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Read also : ದೂರದೃಷ್ಟಿತ್ವ, ಯೋಜನೆಗಳು ಅಜರಾಮರ: ಸೈಯದ್ ಖಾಲಿದ್ ಅಹ್ಮದ್