ದಾವಣಗೆರೆ (Davanagere): ಅಕ್ರಮ ಪಡಿತರ ಅಕ್ಕಿ ದಾಸ್ತಾನು ಗೋಡಾನ್ ಮೇಲೆ ದಾಳಿ ಮಾಡಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ ಪ್ರಕರಣದ ಆರೋಪಿಗಳಿಗೆ 01 ವರ್ಷ ಕಾರಾಗೃಹ ಶಿಕ್ಷೆ ಹಾಗೂ ಒಟ್ಟು 60 ಸಾವಿರ ರೂ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
08/04/2017 ರಂದು ಹಳೇಬಾತಿ ಗ್ರಾಮದ ಆರೋಪಿ ಉಮಾಪತಯ್ಯನವರ ಗೋಡಾನ್ ಹತ್ತಿರ ಅಕ್ರಮವಾಗಿ ಅನ್ನಭಾಗ್ಯ ಯೋಜನೆಯ 550 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ದಾಸ್ತಾನು ಮಾಡಿರುವ ಮಾಹಿತಿ ಮೇರೆಗೆ ದಾಳಿ ಮಾಡಲು ಹೋದಾಗ ಎ1-ಉಮಾಪತಯ್ಯ, ಎ2-ಪ್ರಶಾಂತ್, ಎ3-ಕಿರಣ್ ಹಾಗೂ ಇತರರು ಸೇರಿಕೊಂಡು ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನಿಸಿದ್ದು ಹಾಗೂ ಸ್ಥಳದಲ್ಲಿದ್ದ 02 ಲಾರಿ ಮತ್ತು ಟ್ರ್ಯಾಕ್ಟರ್ ಟ್ರ್ಯಾಲಿಯನ್ನು ತಡೆಯಲು ಹೋದಾಗ ಕೆಎ-17, ಎ-5022 ನೇ ಲಾರಿ ಚಾಲಕನು ಪಿರ್ಯಾದಿ ಮತ್ತು ಅಧಿಕಾರಿಗಳ ಮೇಲೆ ಲಾರಿಯನ್ನು ಚಾಲಾಯಿಸಿ ಕೊಲೆ ಮಾಡಲು ಪ್ರಯತ್ನಮಾಡಿ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿ ಅವಾಚ್ಯ ಶಬ್ದಗಳಿಂದ ಬೈದಾಡಿ 500/- ರೂ ನೋಟಿನ ಕಟ್ಟನ್ನು ತೆಗೆದುಕೊಂಡು ಬಂದು ಅಧಿಕಾರಿಗಳಿಗೆ ನಿಂದಿಸಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.
ಪ್ರಕರಣ ದಾಖಲಿಸಿಕೊಂಡು ತನಿಖಾಧಿಕಾರಿ ಕಿರಣ್‍ಕುಮಾರ್ ತನಿಖೆ ನಡೆಸಿ ಆರೋಪಿತರ ವಿರುದ್ಧ ನ್ಯಾಯಾಲಯಕ್ಕೆ ದೋಷರೋಪಣಾಪಟ್ಟಿ ಸಲ್ಲಿಸಿದ್ದರು.
02 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ಗೌರವಾನ್ವಿತ ನ್ಯಾಯಾಧೀಶ ಪ್ರವೀಣ್ ಕುಮಾರ್ ಆರ್.ಎನ್ ಅವರು ಆರೋಪಿತರಾದ ಎ1-ಉಮಾಪತಯ್ಯ ಎ2-ಪ್ರಶಾಂತ್, ಎ3-ಕಿರಣ್ ಇವರ ಮೇಲೆ ಆರೋಪ ಸಾಬೀತಾಗಿದ್ದರಿಂದ ಜ 22ರಂದು ಆರೋಪಿತರಿಗೆ 01 ವರ್ಷ ಸಾದಾ ಕಾರಾಗೃಹ ಶಿಕ್ಷೆ, ತಲಾ 20,000/- ರೂ ದಂಡ ಒಟ್ಟು ದಂಡದ ಮೊತ್ತ 60,000/- ರೂ ದಂಡ ವಿಧಿಸಿ ತೀರ್ಪು ನೀಡಿದೆ.
ಪ್ರಕರಣದಲ್ಲಿ ಪಿರ್ಯಾದಿಯವರ ಪರವಾಗಿ ಸರ್ಕಾರಿ ವಕೀಲ ಜಯ್ಯಪ್ಪ ಕೆ.ಜಿ ರವರು ನ್ಯಾಯ ಮಂಡನೆ ಮಾಡಿದ್ದಾರೆ.
ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ ತನಿಖಾಧಿಕಾರಿ ಕಿರಣ್‍ಕುಮಾರ್ ಹಾಗೂ ಸಿಬ್ಬಂದಿಗಳನ್ನು, ಸರ್ಕಾರಿ ವಕೀಲ ಜಯ್ಯಪ್ಪ ಕೆ.ಜಿ ರವರನ್ನು ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ ಎಂ. ಸಂತೋಷ & ಮಂಜುನಾಥ. ಜಿ ರವರು ಶ್ಲಾಘೀಸಿದ್ದಾರೆ.
Read also : ಶಿಕ್ಷಕರನ್ನು ಕಲಿಕೇತರ ಕೆಲಸಗಳಿಂದ ಮುಕ್ತಗೊಳಿಸಲು ಒತ್ತಾಯ