ದಾವಣಗೆರೆ (Davanagere): ಅಪ್ರಾಪ್ತ ಬಾಲಕಿ ಮೇಲೆ ಬಲತ್ಕಾರ ಮಾಡಿದ ಪ್ರಕರಣದ ಆರೋಪಿಗೆ 21 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 30 ಸಾವಿರ ರೂ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ದಿನಾಂಕ-20.03.2021 ರಂದು ಪಿರ್ಯಾದಿಯಾದ 15 ವರ್ಷದ ಅಪ್ರಾಪ್ತ ವಯಸ್ಸಿನ ಸಂತ್ರಸ್ಥೆಯು ಸಂತೋಷ ಎಂಬುವವನು ಬಲವಂತವಾಗಿ ದೈಹಿಕ ಸಂಪರ್ಕ ನಡೆಸಿದ್ದು ಈತನ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಹೊನ್ನಾಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಪೋಕ್ಸೋ ಕಾಯ್ದೆಯಡಿ ಹೊನ್ನಾಳ್ಳಿಯ ತನಿಖಾಧಿಕಾರಿ ದೇವರಾಜ್ ಟಿ.ವಿ ತನಿಖೆ ನಡೆಸಿ ಆರೋಪಿ ಸಂತೋಷ್ ಅಪ್ರಾಪ್ತ ವಯಸ್ಸಿನ ಪಿರ್ಯಾದಿ ಬೇಡವೆಂದರು ಕೇಳದೆ ಬಲವಂತವಾಗಿ 03-04 ಬಾರಿ ದೈಹಿಕ ಸಂಪರ್ಕ ನಡೆಸಿರುವುದು ತನಿಖೆಯಿಂದ ಹಾಗೂ ದಾಖಲೆಗಳಿಂದ ದೃಢಪಟ್ಟಿದೆ ಎಂದು ನ್ಯಾಯಾಲಯಕ್ಕೆ ದೋಷರೋಪಣಾಪಟ್ಟಿ ಸಲ್ಲಿಸಿದ್ದರು.
ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‍ಟಿಎಸ್‍ಸಿ-1 ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಶ್ರೀರಾಮ ನಾರಾಯಣ ಹೆಗಡೆ ರವರು ಆರೋಪಿತನ ಮೇಲೆ ಆರೋಪ ಸಾಬೀತಾಗಿದ್ದರಿಂದ ಜ.22 ರಂದು ಆರೋಪಿ ಸಂತೋಷ್ 21 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 30,000/-ರೂ ದಂಡ ವಿಧಿಸಿ ಆರೋಪಿತನು ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದುದ್ದರಿಂದ ಸದರಿ ಬಂಧನದ ಅವಧಿಯನ್ನು ಪರಿಗಣಿಸಿ ಶಿಕ್ಷಾ ಅವಧಿಯನ್ನು ಸೆಟ್‍ಆಪ್ ಮಾಡಲಾಗಿದೆ. ಆರೋಪಿತನಿಂದ ವಸೂಲು ಮಾಡಿದ ದಂಡದ ಒಟ್ಟು ಮೊತ್ತ 30,000/-ರೂಗಳನ್ನು ಪ್ರಕರಣದ ಸಂತ್ರಸ್ಥೆಗೆ ನೀಡುವಂತೆ ಹಾಗೂ ಸಂತ್ರಸ್ಥೆಗೆ ಸರ್ಕಾರದಿಂದ 5 ಲಕ್ಷ ರೂ ಪರಿಹಾರ ನೀಡುವಂತೆ ತೀರ್ಪು ನೀಡಿದ್ದಾರೆ.
ಪಿರ್ಯಾದಿಯವರ ಪರವಾಗಿ ಸರ್ಕಾರಿ ವಕೀಲರಾದ ಸುನಂದಾ ಮಡಿವಾಳರ್ ರವರು ನ್ಯಾಯ ಮಂಡನೆ ಮಾಡಿದ್ದಾರೆ.
ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ ತನಿಖಾಧಿಕಾರಿಯಾದ ದೇವರಾಜ್ ಟಿ.ವಿ, & ಸಿಬ್ಬಂದಿಗಳನ್ನು, ನ್ಯಾಯಾಮಂಡನೆ ಮಾಡಿದ ಸರ್ಕಾರಿ ವಕೀಲರಾದ ಸುನಂದಾ ಮಡಿವಾಳರ್ ಅವರನ್ನು ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ ಎಂ. ಸಂತೋಷ & ಮಂಜುನಾಥ. ಜಿ ರವರು ಶ್ಲಾಘೀಸಿದ್ದಾರೆ.
Read also : ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಅಧಿಕಾರಿಗಳ ಮೇಲೆ ಹಲ್ಲೆ ಯತ್ನ : ಆರೋಪಿಗಳಿಗೆ ಕಾರಾಗೃಹ ಶಿಕ್ಷೆ, ದಂಡ