ಹರಿಹರ (Harihara): ಹರಿಹರ ಶಾಖಾ ಗ್ರಂಥಾಲಯದಲ್ಲಿ 76ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಡಾ. ಬಿ. ಆರ್. ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿಯವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿದರು.
ಶಾಖಾ ಮುಖ್ಯಸ್ಥ ರವಿಕುಮಾರ್ ಅವರು ದ್ವಜಾರೋಹಣವನ್ನು ನೆರವೇರಿಸಿ ಮಾತನಾಡಿ, ನಮ್ಮ ಬಲಿಷ್ಠ ಪ್ರಜಾಪ್ರಭುತ್ವ ವ್ಯವಸ್ಥೆಗೆ ನಮ್ಮ ಶ್ರೇಷ್ಠ ಸಂವಿಧಾನವೇ ಆಧಾರ. ಸಂವಿಧಾನದ ಸದಾಶಯಗಳನ್ನು ಪಾಲಿಸುವ ಜೊತೆಗೆ ಭಾರತದ ಏಕತೆ, ವೈವಿಧ್ಯತೆ, ಅನನ್ಯತೆಗಳನ್ನು ಎತ್ತಿ ಹಿಡಿಯೋಣ ಎಂದು ಹಾರೈಸುವೆ ಎಂದು ಹೇಳಿದರು.
Read also : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕ : ಸಿಎಂ ಸಿದ್ದರಾಮಯ್ಯ