ದಾವಣಗೆರೆ (Davanagere) : ಜಿಲ್ಲಾಡಳಿತ ಭವನದಲ್ಲಿ ಸಾರ್ವಜನಿಕರಿಗಾಗಿ ಅಳವಡಿಸಲಾಗಿರುವ ವಾಚನಾಲಯದ ಉದ್ಘಾಟನೆಯನ್ನು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ನೆರವೇರಿಸಿದರು.
ಈ ವೇಳೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ, ಜಿ.ಪಂ ಸಿಇಒ ಸುರೇಶ್ ಇಟ್ನಾಳ್,ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್,ದೂಡಾ ಅಧ್ಯಕ್ಷ ದಿನೇಶ್ ಕೆ ಶೆಟ್ಟಿ ಮತ್ತಿತರರಿದ್ದರು.