Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅರ್ಜಿ ಆಹ್ವಾನ > ಮಾ.15ರಿಂದ ಉದ್ಯೋಗ ಮೇಳ | 50ಕ್ಕೂ ಹೆಚ್ಚು ಕಂಪನಿಗಳು ಭಾಗಿ | ಸುರ್ವಣ ಅವಕಾಶ
ಅರ್ಜಿ ಆಹ್ವಾನ

ಮಾ.15ರಿಂದ ಉದ್ಯೋಗ ಮೇಳ | 50ಕ್ಕೂ ಹೆಚ್ಚು ಕಂಪನಿಗಳು ಭಾಗಿ | ಸುರ್ವಣ ಅವಕಾಶ

Dinamaana Kannada News
Last updated: March 11, 2025 1:31 pm
Dinamaana Kannada News
Share
davangere-district-level-job-fair-2025
SHARE

ದಾವಣಗೆರೆ: ನಗರದಲ್ಲಿ ಇದೇ ಮಾರ್ಚ್‌ 10ರಿಂದ ಜಿಲ್ಲಾಮಟ್ಟದ ಬೃಹತ್‌ ಉದ್ಯೂಗ ಮೇಳ 2025 (Level Job Fair 2025) ಆಯೋಜಿಸಿದ್ದು, ಜಿಲ್ಲೆಯ ನಿರುದ್ಯೋಗಿಗಳಿಗೆ ಸುರ್ವಣ ಅವಕಾಶ ಕಲ್ಪಿಸಲಾಗಿದೆ. 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಮೇಳದಲ್ಲಿ ಭಾಗವಹಿಸಲಿದ್ದು, ನೇರ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಕಳೆದ ಬಾರಿ ಆಯೋಜಿಸಿದ್ದ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ ನೂರಾರು ಯುವಜನತೆ ಕೆಲಸ ಗಿಟ್ಟಿಸಿಕೊಂಡು ಸ್ವಾವಲಭಿ ಜೀವನ ನಡೆಸುತ್ತಿದ್ದಾರೆ. ಈ ಬಾರಿ ಕೂಡ ಯಶ್ವಸ್ವಿ ಉದ್ಯೋಗ ಮೇಳಕ್ಕೆ ದಾವಣಗೆರೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

ದಾವಣಗೆರೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಹೇಳಿದ್ದಿಷ್ಟು

ಜಿಲ್ಲಾಡಳಿತ ಮತ್ತು ಪಂಚಾಯತ್, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಹಾಗೂ ಕೌಶಲ್ಯ ಮಿಷನ್ ಸಹಯೋಗದಲ್ಲಿ ನಗರದ ಹದಡಿ ರಸ್ತೆಯಲ್ಲಿರುವ ಐಟಿಐ ಕಾಲೇಜು ಆವರಣದಲ್ಲಿ ಮಾ.15ರಂದು ಬೆಳಗ್ಗೆ 10ರಿಂದ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿವರ್ಷ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣ ಪಡೆದು ಸ್ವಾವಲಂಬಿಗಳಾಗಿ ಬದುಕಲು ಉದ್ಯೋಗವನ್ನರಿಸಿ ಜಿಲ್ಲೆಯನ್ನು ತೊರೆದು ದೇಶ ಮತ್ತು ವಿದೇಶದ ಮಹಾನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳೀಯವಾಗಿ ಉದ್ಯೋಗ ನೀಡಲು ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ ಎಂದು ತಿಳಿಸಿದರು.

ಹಿಂದಿನ ಉದ್ಯೋಗ ಮೇಳದಲ್ಲಿ 3000ಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜಿಸುವ ಮೂಲಕ ಅಭ್ಯರ್ಥಿಗಳಿಗೆ ಸ್ಥಳೀಯವಾಗಿ ಕಲ್ಪಿಸಲು ಅನುದಾನ ಬಿಡುಗಡೆ ಮಾಡುತ್ತಿದ್ದು, ಈ ನಿಟ್ಟಿನಲ್ಲಿ ಕಳೆದ 3 ವರ್ಷದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ ಸುಮಾರು 3000ಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗವಹಿಸಿ 550ಕ್ಕೂ ಹೆಚ್ಚು ಅಭ್ಯರ್ಥಿಗಳು ಉದ್ಯೋಗ ಪಡೆದು ಸ್ವಾವಲಂಬಿಗಳಾಗಿದ್ದಾರೆ ಎಂದು ಮಾಹಿತಿ ನೀಡಿದರು.

ಮಾ.15ರಂದು ನಡೆಯಲಿರುವ ಜಿಲ್ಲಾ ಮಟ್ಟದ ಉದ್ಯೋಗ ಮೇಳಕ್ಕೆ 50ಕ್ಕೂ ಹೆಚ್ಚು ಅನೇಕ ಬಹುರಾಷ್ಟ್ರೀಯ ಖಾಸಗಿ ಕಂಪನಿಗಳು, ಕೈಗಾರಿಕೆಗಳು ಭಾಗವಹಿಸಲಿದ್ದು, ಎಲ್ಲಾ ಸ್ತರಗಳಲ್ಲಿ 5000ಕ್ಕೂ ಹೆಚ್ಚು ಉದ್ಯೋಗಗಳು ಖಾಲಿ ಇವೆ. ಹುದ್ದೆಗೆ ಅನುಗುಣವಾಗಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಲು ಅಭ್ಯರ್ಥಿಗಳನ್ನು ಆಹ್ವಾನಿಸಲಾಗಿದೆ ಎಂದು ತಿಳಿಸಿದರು.

ಉದ್ಯೋಗ ಮೇಳದಲ್ಲಿ ಕಳೆದ ವರ್ಷ 1000 ಅಭ್ಯರ್ಥಿಗಳು ಭಾಗವಹಿಸುವ ನಿರೀಕ್ಷೆ ಇತ್ತು. ಆದರೆ 2000ಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗವಹಿಸಿದ್ದಾರೆ. ಈಗಾಗಲೇ ಈ ಬಾರಿ 1000ಕ್ಕೂ ಹೆಚ್ಚು ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನೋಂದಣಿ ಮಾಡಿದ್ದು, ಸುಮಾರು 5000ಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ. ಹೀಗಾಗಿ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಉದ್ಯೋಗ ಮೇಳಕ್ಕೆ ನೋಂದಣಿ ವಿಧಾನ

ಎನ್‌ಐಸಿ ಮೂಲಕ ಯುವನಿಧಿ ಫಲಾನುಭವಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಸೂಚಿಸಿ ಸಂದೇಶ ರವಾನಿಸಲಾಗಿದೆ. ಆನ್‌ಲೈನ್ ನೋಂದಣಿಗೆ ಗೂಗಲ್ ಲಿಂಕ್ ರಚಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಪ್ರಚಾರ ಮಾಡಲಾಗಿದೆ. ಸಂದರ್ಶನಕ್ಕಾಗಿ ಸುಮಾರು 40 ಕೊಠಡಿ ಸಿದ್ಧತೆ ಮಾಡಿದ್ದು, ಜಿಲ್ಲಾ ಮಟ್ಟದ ಅಧಿಕಾರಿಗಳ ವಿಶೇಷ ತಂಡ ರಚಿಸಲಾಗಿದೆ. ಸ್ವಚ್ಛತೆ, ಕುಡಿಯುವ ನೀರು, ಆರೋಗ್ಯ ಸುರಕ್ಷತೆ, ಲಘು ಉಪಹಾರಕ್ಕೆ ಎಲ್ಲಾ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ. ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಚಾಲನೆ ನೀಡಲಿದ್ದು, ಜಿಲ್ಲೆಯ ಎಲ್ಲಾ ಶಾಸಕರು, ಜನಪ್ರತಿನಿಧಿಗಳು ಭಾವಹಿಸಲಿದ್ದಾರೆ ಎಂದು ತಿಳಿಸಿದರು.

ಆಸಕ್ತ ಯುವಕ ಯುವತಿಯರು ತಮ್ಮ ವಿದ್ಯಾರ್ಹತೆಯ ದಾಖಲಾತಿಗಳೊಂದಿಗೆ  ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮೊ, ಪದವಿ, ಸ್ನಾತಕೋತ್ತರ ಪದವಿ ಪಡೆದವರು ಉದ್ಯೋಗಮೇಳದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕ್ಯೂ.ಆರ್ ಕೋಡ್ ಲಿಂಕ್, Google Form Link: https://tinyurl.com/mnm8vykz , ಇಮೇಲ್ ಐಡಿ  : dsmodvg@gmail.com  ದೂ.ಸಂ: 08192-259447, 7892956667 ಸಂಪರ್ಕಿಸಲು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಹಾಗೂ ಜಿ.ಪಂ ಸಿಇಓ ಸುರೇಶ್.ಬಿ.ಇಟ್ನಾಳ್ ತಿಳಿಸಿದ್ದಾರೆ.
TAGGED:Level Job Fair 2025ಉದ್ಯೂಗ ಮೇಳಉದ್ಯೂಗ ಮೇಳ 2025ಜಿಲ್ಲಾಮಟ್ಟದ ಬೃಹತ್‌ ಉದ್ಯೂಗ ಮೇಳ
Share This Article
Twitter Email Copy Link Print
Previous Article Meeting of the Untouchables and Oppressed Classes ಸಂಘಟಿತರಾಗಲು ನಿ. ಪೊಲೀಸ್‌ ವರಿಷ್ಠಾಧಿಕಾರಿ ಎನ್. ರುದ್ರಮುನಿ ಯುವಕರಿಗೆ ಕರೆ
Next Article Davanagere ವಿಶೇಷಚೇತನರ ಮಾಸಿಕ ಪಿಂಚಣಿ :  ಸಂಸತ್ತಿನಲ್ಲಿ ಗಮನಸೆಳೆದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ 

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ  

ಹರಿಹರ: ಹರಿಹರದಲ್ಲಿ  ನಡೆದ ಅಂಜುಮನ್ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವದಲ್ಲಿ ಪ್ರಥಮ ಪಿಯುಸಿ ವಿಭಾಗದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.…

By Dinamaana Kannada News

ಜಾಗೃತಿ ಇದ್ದಾಗ ರೋಗ ನಿಯಂತ್ರಣ : ಡಾ.ಷಣ್ಮುಖಪ್ಪ

ದಾವಣಗೆರೆ.ಮೇ.17 ;  ಡೆಂಗ್ಯೂ ನಿಯಂತ್ರಣದ ಬಗ್ಗೆ ಜನರಿಗೆ ಜಾಗೃತಿ ಇದ್ದಾಗ ರೋಗವನ್ನು ನಿಯಂತ್ರಣದಲ್ಲಿಡಲು ಸಾಧ್ಯವಾಗಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು…

By Dinamaana Kannada News

DAVANAGERE JOB NEWS : ಗ್ರಾಮ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಆ.05 (DAVANAGERE)  : ದಾವಣಗೆರೆ ತಾಲ್ಲೂಕು ಆನಗೋಡು ಹೋಬಳಿಯ ಆಲೂರು ವೃತ್ತದ ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.…

By Dinamaana Kannada News

You Might Also Like

Davanagere
ತಾಜಾ ಸುದ್ದಿಅರ್ಜಿ ಆಹ್ವಾನ

Davanagere | ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ಅರ್ಜಿ ಆಹ್ವಾನ

ಟಿವಿ ರಿಪೇರಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ

By Dinamaana Kannada News
Davanagere
ಅರ್ಜಿ ಆಹ್ವಾನತಾಜಾ ಸುದ್ದಿ

Davanagere | ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿಅರ್ಜಿ ಆಹ್ವಾನ

Davanagere | ಸ್ನಾತಕೋತ್ತರ ಪದವಿ ಹಾಗೂ ಪಿಹೆಚ್‌ಡಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?