ದಾವಣಗೆರೆ (Davanagere): ಮಕ್ಕಳು ಹಾಗೂ ಮಹಿಳೆಯರ ಪರವಾಗಿ ಕಾಯ್ದೆಗಳಿದ್ದರೂ ದೌರ್ಜನ್ಯ ತಡೆಗಟ್ಟಲು ಸಾಧ್ಯವಾಗಿಲ್ಲ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ಬೇಸರ ವ್ಯಕ್ತಪಡಿಸಿದರು.
ನಗರದ ಆರ್.ಎಲ್ ಕಾನೂನು ಕಾಲೇಜಿನಲ್ಲಿ ಏರ್ಪಡಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಹಿಳೆಯರು ಹಾಗೂ ಪುರುಷರಲ್ಲಿನ ಅಸಮಾನತೆ, ಸಾಮಾಜಿಕ ಅಂತರ ಕಡಿಮೆ ಮಾಡುವ ಮೂಲಕ ತಾರತಮ್ಯ ನಿವಾರಣೆ ಮಾಡಬೇಕಾಗಿದೆ. ಇಂತಹ ಮಹಿಳೆಯರ ದಿನಾಚರಣೆ ಮೂಲಕ ಕೆಲವು ಅನಿಷ್ಠ ಗಳನ್ನು ಹೋಗಲಾಡಿಸಲು ಮಹಿಳೆಯರು, ಪುರುಷರು ಮುಂದಾಗಬೇಕೆಂದು ಸಲಹೆ ನೀಡಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣನವರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್. ಅರುಣಕುಮಾರ್, ಜೆ.ಜೆ.ಎಂ. ಮೆಡಿಕಲ್ ಕಾಲೇಜು ಪ್ರಾಂಶುಪಾಲರಾದ ಡಾ.ಶುಕ್ಲಶೆಟ್ಟಿ, ಸಂಚಾರಿ ಪೊಲೀಸ್ ಅಧಿಕಾರಿ ಶೈಲಜಾ, ನಿವೃತ್ತ ಪ್ರಾಧ್ಯಾಪಕಿ ಡಾ.ಅನುರಾಧ ಬಕ್ಕಪ್ಪ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Read also : ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆಗೆ ಒತ್ತಾಯಿಸಿ : ನೌಕರರ ಪ್ರತಿಭಟನಾ ಮತಪ್ರದರ್ಶನ
ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಸ್.ಯತೀಶ್ ಅಧ್ಯಕ್ಷತೆ ವಹಿಸಿದ್ದರು.