Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯ : ಡಿಸಿ
ತಾಜಾ ಸುದ್ದಿ

Davanagere | ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯ : ಡಿಸಿ

Dinamaana Kannada News
Last updated: March 12, 2025 2:26 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere )ಮಾ.12: ಯುವ ಜನತೆ ಈ ದೇಶದ ಆಸ್ತಿ, ದೇಶ ಭವಿಷ್ಯ ನಿಮ್ಮ ಕೈಯಲ್ಲಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಪ್ರಾಯೋಗಿಕವಾಗಿ ಅನುಕರಣೆ ಮಾಡಲು ಹೋಗಿ ವ್ಯಸನಗಳಿಗೆ ದಾಸರಾಗುತ್ತಿರುವುದು ಹೆಚ್ಚಾಗಿದೆ. ಇದನ್ನು ತಡೆಗಟ್ಟುವ ಮೂಲಕ ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ಪ್ರತಿಯೊಬ್ಬರ ಜವಾಬ್ದಾರಿ ಇದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದರು.

ಬುಧವಾರ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಚಿಗಟೇರಿ ಜಿಲ್ಲಾ ಆಸ್ಪತ್ರೆ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಇವರ ಸಹಯೋಗದಲ್ಲಿ ಏರ್ಪಡಿಸಲಾದ “ಮದ್ಯ ಹಾಗೂ ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳ ಕುರಿತ ವಿಚಾರ ಸಂಕಿರಣ ಹಾಗೂ ಜಾಗೃತಿ ಕಾರ್ಯಕ್ರಮ” ಉದ್ಘಾಟಿಸಿ ಅವರು ಮಾತಾಡಿದರು.

ಕೆಲವರು ಮಾದಕ ವಸ್ತುಗಳ ಸೇವನೆಗೆ ಪ್ರಚೋದನೆ ಮಾಡುತ್ತಿದ್ದು, ಇದರಿಂದ ಯುವಕರು ದಾರಿ ತಪ್ಪುತ್ತಿದ್ದಾರೆ. ಪೋಷಕರು ನಮ್ಮ ಹುಟ್ಟು, ಬೆಳವಣಿಗೆ ನೋಡಿ ಸಂಭ್ರಮಿಸುತ್ತಾರೆ. ಆದರೆ ನಾವು ಅವರ ಪ್ರೀತಿ, ನಂಬಿಕೆ ಉಳಿಸಿಕೊಳುವುದರಲ್ಲಿ ವಿಫಲರಾಗುತ್ತಿದ್ದೇವೆ. ಕೇವಲ ಮಾದಕ ವಸ್ತುಗಳ ವ್ಯಸನವಷ್ಟೇ ಮಾದಕವಲ್ಲ. ಅತಿಯಾದ ಮೊಬೈಲ್ ಗೀಳು ಕೂಡ ಒಂದು ರೀತಿಯ ವ್ಯಸನ. ತಮ್ಮ ಎಲ್ಲಾ ಹುಚ್ಚುತನದ ವ್ಯಸನಗಳಿಂದ ಹೊರಬರಬೇಕು.  ಆಗಾದಾಗ ಮಾತ್ರ ದೇಶ, ನಾಡು, ಕುಟುಂಬ ಹಾಗೂ ಸಮಾಜಕ್ಕೆ ಉತ್ತಮ ವ್ಯಕ್ತಿಯಾಗಿ ಬದುಕಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಯುವ ಜನರಿಗೆ ಹೆಚ್ಚಿನ ಜಾಗೃತಿ ಮೂಡಿಸಬೇಕಾಗಿದೆ ಎಂದರು.

ಜಿಲ್ಲಾ ಸರ್ಜನ್ ಡಾ; ನಾಗೇಂದ್ರಪ್ಪ ಮಾತನಾಡಿ, ಮಾದಕ ವಸ್ತುಗಳ ಸೇವನೆಯು ಒಂದು ಸಾಮಾಜಿಕ ಪಿಡುಗು. ಇದನ್ನು ತೊಲಗಿಸುವ ಸಲುವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಸಮಾಜವನ್ನು ಪರಿವರ್ತನೆ ಮಾಡುವ ಶಕ್ತಿ ಹೆಣ್ಣಿಗಿದೆ. ಹಾಗಾಗಿ ಮಹಿಳಾ ಕಾಲೇಜಿನಲ್ಲಿ ಆಯೋಜನೆ ಮಾಡಿರುವುದು ಸಫಲವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಚಿಗಟೇರಿ ಆಸ್ಪತ್ರೆಯ ಮನೋವೈದ್ಯ ಡಾ; ಮರುಳಸಿದ್ದಪ್ಪ ಉಪನ್ಯಾಸ ನೀಡಿ ಆಸ್ಪತ್ರೆಯಲ್ಲಿ ದಿನನಿತ್ಯ ಬರುವ ಅಪಘಾತಗಳಲ್ಲಿ ಶೇ 60 ಕ್ಕಿಂತಲೂ ಹೆಚ್ಚು ಮದ್ಯ ಸೇವನೆ ಮಾಡಿ ವಾಹನ ಚಲಾಯಿಸಿದ್ದು ಕಂಡು ಬರುತ್ತದೆ. ಯುವ ಜನರು ಮಾದಕ ವಸ್ತುಗಳಿಗೆ ಹೆಚ್ಚು ಬಲಿಯಾಗುತ್ತಿದ್ದು ಇದರಿಂದ ಹೊರಬರುವುದು ಕಷ್ಟಕರವಾಗಿದೆ. ಮದ್ಯ ಹಾಗೂ ಮಾದಕ ವಸ್ತುಗಳ ವ್ಯಸನದಿಂದ ಸಾಮಾಜಿಕ, ಆರ್ಥಿಕ, ದೈಹಿಕ, ಮಾನಸಿಕವಾಗಿ ಅನಾರೋಗ್ಯವಾಗುತ್ತಾರೆ. ಇಂತಹ ವ್ಯಸನಗಳಿಂದ ಮುಕ್ತರಾಗಲು ಚಿಗಟೇರಿ ಆಸ್ಪತ್ರೆ ಸೇರಿದಂತೆ ಬಾಪೂಜಿಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಜೊತೆಗೆ ವ್ಯಸನ ಮುಕ್ತ ಕೇಂದ್ರಗಳಿವೆ ಎಂದರು.

ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪ್ರಾಂಶುಪಾಲರಾದ ಎಂ.ಮಂಜಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ತೊಪ್ಪಲ ಮಲ್ಲಿಕಾರ್ಜುನ ಸ್ವಾಗತಿಸಿದರು. ಕಾವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಬಿ.ಧನಂಜಯ ಪ್ರಾಸ್ತಾವಿಕವಾಗಿ ಮಾತನಾಡಿದರು.

Read also : ಮಹಿಳೆಯರು ಸಂಕೋಲೆಗಳನ್ನು ಬದಿಗೊತ್ತಿ ಸಾಧನೆಗಷ್ಟೆ ಗಮನವಿರಲಿ : ರಾಜೇಶ್ವರಿ.ಎನ್ ಹೆಗಡೆ

ಈ ಸಂದರ್ಭದಲ್ಲಿ  ಐಕ್ಯೂಎಸಿ ಸಂಚಾಲಕ ಭೀಮಪ್ಪ, ಎನ್.ಶಿವರಾಜ್ ಸೇರಿದಂತೆ ವಿದ್ಯಾರ್ಥಿಗಳು, ಸಿಬ್ಬಂದಿಯವರು ಉಪಸ್ಥಿತರಿದ್ದರು.ಕಲಾವಿದರಾದ ಐರಣಿ ಚಂದ್ರ, ಬನಪ್ಪ ಜಾಗೃತಿ ಗೀತೆಗಳನ್ನು ಹಾಡಿದರು.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಮಹಿಳೆಯರು ಸಂಕೋಲೆಗಳನ್ನು ಬದಿಗೊತ್ತಿ ಸಾಧನೆಗಷ್ಟೆ ಗಮನವಿರಲಿ : ರಾಜೇಶ್ವರಿ.ಎನ್ ಹೆಗಡೆ
Next Article Davanagere ಕರ್ನಾಟಕದಲ್ಲಿ ಅಡಿಕೆ ಮಂಡಳಿ ಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಇವಿಎಂ ಹಾಗೂ ಚುನಾವಣಾ ಆಯೋಗದ ಸಹಕಾರದಿಂದ ಬಿಜೆಪಿ ಅಧಿಕಾರಕ್ಕೆ

ದಾವಣಗೆರೆ (Davanagere):  ಸೋಲಾಪುರದ ಮರ್ಕಡವಾಡಿ ಗ್ರಾಮದ ಕೆಲವರನ್ನು ಬಂಧಿಸಿರುವುದು ಮತ್ತು ಗ್ರಾಮದಲ್ಲಿ ನಿಷೇಧಾಜ್ಞೆ ಹೇರಿರುವುದು ಬಿಜೆಪಿಯ  ಇವಿಎಂ ಹಾಗೂ ಚುನಾವಣಾ…

By Dinamaana Kannada News

ನಿಸ್ವಾರ್ಥತೆಯಿಂದ ಕೆಲಸ ಮಾಡುವವರ ಸಂಖ್ಯೆ ಕಡಿಮೆ : ನ್ಯಾ.ರಾಜೇಶ್ವರಿ ಎನ್.ಹೆಗಡೆ

ದಾವಣಗೆರೆ:   ಸಾರ್ವಜನಿಕ ಜೀವನದಲ್ಲಿ ಸ್ಥಾನಮಾನಗಳು ಸಮಾಜ ಸೇವೆಗೆ ದೊರೆತ ಅವಕಾಶ ಎಂದು ಭಾವಿಸಿ, ಕರ್ತವ್ಯ ನಿರ್ವಹಿಸಿದಾಗ ಮಾತ್ರ ದೇಶದ ಅಭಿವೃದ್ದಿಯಾಗಲು…

By Dinamaana Kannada News

ಆಟೋದಲ್ಲಿ ಕಳೆದುಕೊಂಡಿದ್ದ 1.50 ಲಕ್ಷ ಮೌಲ್ಯದ ಸ್ವತ್ತು ವಾರಸುದಾರರಿಗೆ ಒಪ್ಪಿಸಿದ ಪೊಲೀಸರು

ದಾವಣಗೆರೆ  (Davanagere):  ಆಟೋದಲ್ಲಿ ಕಳೆದುಕೊಂಡಿದ್ದ 1.50 ಲಕ್ಷ ಮೌಲ್ಯದ ಸ್ವತ್ತು ಪತ್ತೆ ಮಾಡಿ ವಾರಸುದಾರರಿಗೆ ಬಸವನಗರ ಠಾಣೆ ಪೊಲೀಸರು ಒಪ್ಪಿಸಿದ್ದಾರೆ.…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?