Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಆರಂಭಿಸಿ : ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯ
ತಾಜಾ ಸುದ್ದಿ

ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಆರಂಭಿಸಿ : ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯ

Dinamaana Kannada News
Last updated: March 19, 2025 12:11 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere): : ಕ್ಷೇತ್ರದ ವ್ಯಾಪ್ತಿಯ ಕಲ್ಪನಹಳ್ಳಿ ಬಳಿ ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಸ್ಥಾಪಿಸಲು ಭೂಮಿ ಖರೀದಿಸಿದ್ದು, ಈ ಬಗ್ಗೆ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೂಡಲೇ ಅನುದಾನ ಬಿಡುಗಡೆ ಮಾಡಬೇಕೆಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯಿಸಿದರು.

ವಿಧಾನಸಭೆಯಲ್ಲಿ ಬುಧವಾರ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶಿವಮೊಗ್ಗ ಹಾಲು ಒಕ್ಕೂಟದಿಂದ ಬೇರ್ಪಡಿಸಿ ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಒಳಗೊಂಡ ಮೆಗಾ ಡೈರಿ ಆರಂಭಿಸಲು ನನ್ನ ಕ್ಷೇತ್ರದ ವ್ಯಾಪ್ತಿಯ ಕಲ್ಪನಹಳ್ಳಿಯಲ್ಲಿ ಭೂಮಿ ಖರೀದಿಸಿದ್ದೇವೆ. ಸರ್ಕಾರ ಕೂಡಲೇ ಅನುದಾನ ಬಿಡುಗಡೆ ಮಾಡಿ ಡೈರಿ ಆರಂಭಿಸಿದರೆ ಈ ಭಾಗದ ರೈತರು ಆರ್ಥಿಕವಾಗಿ ಸಬಲರಾಗಲಿದ್ದಾರೆ ಎಂದು ಸದನದ ಗಮನ ಸೆಳೆದರು.

ಹೈನುಗಾರಿಕೆಯಲ್ಲಿ ಮಹಿಳೆಯರಿಗೆ ಶೇ.50ರಷ್ಟು ಸಬ್ಸಿಡಿ ಕೊಡುವುದನ್ನು ಶೇ.75ರಷ್ಟು ಹೆಚ್ಚಳ ಮಾಡಿದರೆ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಿ ಉತ್ತಮ ಬದುಕು ಕಟ್ಟಿಕೊಳ್ಳುತ್ತಾರೆ. ಈ ಬಗ್ಗೆ ಸರ್ಕಾರ ಗಮನ ಹರಿಸಬೇಕೆಂದರು.

ಮಧ್ಯ ಕರ್ನಾಟಕದ ಕೇಂದ್ರ ಬಿಂದು, ಹಿಂದುಳಿದ ಜಿಲ್ಲೆ ದಾವಣಗೆರೆ. ಅದರಲ್ಲೂ ಅತೀ ಹಿಂದುಳಿದ ಮೀಸಲು ಕ್ಷೇತ್ರ ಮಾಯಕೊಂಡ. ಸಿರಿಗೆರೆ ತರಳಬಾಳು ಜಗದ್ಗುರುಗಳ ಹೋರಾಟದ ಫಲವಾಗಿ ನನ್ನ ಕ್ಷೇತ್ರದಲ್ಲಿ 22 ಕೆರೆಗಳ ಯೋಜನೆ ಜಾರಿಗೊಂಡು ಎಲ್ ಅಂಡ್ ಟಿ ಕಂಪನಿ ಕಾಮಗಾರಿ ನಡೆಸಿತ್ತು. ಕಳಪೆ ಕಾಮಗಾರಿಯಿಂದ 100 ಹಳ್ಳಿಗಳಿಗೆ ಕುಡಿಯುವ ನೀರು, ನೀರಾವರಿ ಕಲ್ಪಿಸಬೇಕೆಂಬ ಉದ್ದೇಶ ಈಡೇರಿಲ್ಲ. ಪುನಃ ಹೊಸ ಪೈಪ್‌ಲೈನ್ ಕಾಮಗಾರಿಗೆ ಹಣ ನೀಡಿ ಕಾಮಗಾರಿ ಆರಂಭಿಸುವಂತೆ ಈಗಾಗಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಕೂಡಲೇ ಸರ್ಕಾರ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.

ನನ್ನ ಕ್ಷೇತ್ರದಲ್ಲಿ ಹೆಚ್ಚು ಗುಡ್ಡಗಾಡು ಪ್ರದೇಶ ಹೊಂದಿದ್ದು, ಈ ಪ್ರದೇಶಗಳಲ್ಲಿ ಅತೀ ಹೆಚ್ಚು ಕೆರೆಗಳನ್ನು ನಿರ್ಮಾಣ ಮಾಡಿದರೆ ಜನಜಾನುವಾರುಗಳಿಗೆ ಕುಡಿಯುವ ನೀರು, ಅಂತರ್ಜಲ ಮಟ್ಟ ವೃದ್ಧಿಗೆ ಅನುಕೂಲವಾಗುತ್ತದೆ. ಅಲ್ಲದೇ ಬ್ರಿಟಿಷರು ನಿರ್ಮಿಸಿದ ಕೆರೆ ಇದೆ. ಅದನ್ನು ಜೀರ್ಣೋದ್ಧಾರ ಮಾಡಿದರೆ ಇಡೀ ಪಕ್ಷಿ ಸಂಕುಲ, ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸಬಹುದು ಎಂದು ಸದನ ಗಮನ ಸೆಳೆದರು.

ಎಸ್ಸಿ-ಎಸ್ಟಿ ಅಭಿವೃದ್ಧಿ ನಿಗಮಗಳಿಗೆ ಅನೇಕ ಸೌಲಭ್ಯ ಒದಗಿಸಲು ಅನುದಾನದ ಕೊರತೆ ಇದೆ. ಹೆಚ್ಚಿನ ಅನುದಾನ ನೀಡಬೇಕು. ಎಸ್ಸಿ-ಎಸ್ಟಿ ಸಮುದಾಯ ಆರ್ಥಿಕವಾಗಿ ಸಬಲರಾಗಲು ಭೂ ಒಡೆತನ ಯೋಜನೆ ಜಾರಿಗೊಳಿಸಿದ್ದು, ಕ್ಷೇತ್ರಕ್ಕೆ ಕೇವಲ ಒಂದೇ ಕೊಟ್ಟರೆ ಸಾಧ್ಯವಾಗುವುದಿಲ್ಲ. ಇದಕ್ಕೆ ಹೆಚ್ಚು ಒತ್ತು ಕೊಡಬೇಕು. ಖಾಸಗಿ ಕಾಲೇಜುಗಳಲ್ಲಿ ಡಿಪ್ಲೊಮಾ, ನರ್ಸಿಂಗ್, ಪ್ಯಾರಾ ಮೆಡಿಕಲ್ ಸೇರಿದಂತೆ ವೃತ್ತಿಪರ ಕೋರ್ಸ್ನಲ್ಲಿ ಅಭ್ಯಾಸ ಮಾಡುವ ಎಸ್ಸಿ-ಎಸ್ಟಿ ಮಕ್ಕಳಿಗೆ 2013-18ರಲ್ಲಿ ಹಾಸ್ಟೆಲ್ ಸೌಲಭ್ಯ ಇತ್ತು, ಈಗ ಇಲ್ಲ. ಕೂಡಲೇ ಈ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿದರು.

Read aslo : crime news | ವರದಕ್ಷಿಣೆ ಆಸೆಗಾಗಿ ಹೆಂಡತಿ ಉಸಿರುಗಟ್ಟಿಸಿ ಸಾಯಿಸಿದ ಗಂಡ

ಹೊರ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಪೌರ ಕಾರ್ಮಿಕರಿಗೆ ಹಗಲು ದರೋಡೆ ಮಾಡಲಾಗುತ್ತಿದೆ. ಹೊರ ಗುತ್ತಿಗೆ ತೆಗೆದು ನೇರವಾಗಿ ನೇಮಕಾತಿ ಮಾಡಿಕೊಂಡರೆ ಅವರ ಬದುಕು ಉಜ್ವಲವಾಗುತ್ತದೆ. ಶೋಷಿತ ಸಮುದಾಯಗಳಿಗೆ ತ್ವರಿತ ನ್ಯಾಯ ಒದಗಿಸಲು ಎಸ್ಸಿ-ಎಸ್ಟಿ ದೌರ್ಜನ್ಯ ಕಾಯ್ದೆಯಡಿ ರಾಜ್ಯದಲ್ಲಿ 33 ವಿಶೇಷ ಪೊಲೀಸ್ ಠಾಣೆ ತೆರೆಯಲು ಕ್ರಮ, ಅಲ್ಲದೇ ಎಸ್ಸಿ-ಎಸ್ಟಿ ಗುತ್ತಿಗೆದಾರರಿಗೆ 2 ಕೋಟಿ ಮೀಸಲು, ಅದರಂತೆ ಒಬಿಸಿ, ಅಲ್ಪಸಂಖ್ಯಾತರಿಗೂ 2 ಕೋಟಿ ಮೀಸಲಿಡುವ ಮೂಲಕ ರೈತರು, ಕಾಯಕ ಜೀವಿಗಳು, ವಿಶೇಷವಾಗಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಎಸ್‌ಸಿಪಿ-ಎಸ್‌ಟಿಪಿ ಯೋಜನೆಯಡಿ 48,018 ಕೋಟಿ ರೂ. ಬಜೆಟ್‌ನಲ್ಲಿ ಮೀಸಲಿಟ್ಟಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದರು.

ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಿ

ಮಳೆಗಾಲದಲ್ಲಿ ತುಂಗಾ ಜಲಾಯಶದಿಂದ ಭದ್ರಾ ಜಲಾಶಯಕ್ಕೆ ನೀರು ತುಂಬಿಸಿ ಅಪರ್ ಭದ್ರಾ ಯೋಜನೆ ನೀರು ನೀಡುವ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಿದರೆ ಭದ್ರಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ರೈತರಿಗೆ ಅನುಕೂಲವಾಗಲಿದೆ. ಇಲ್ಲದಿದ್ದರೆ, ನಮ್ಮ ಭಾಗದ ರೈತರಿಗೆ ಅನಾನುಕೂಲವಾಗಲಿದೆ. ಕೂಡಲೇ ಸರ್ಕಾರ ಈ ಯೋಜನೆಯ ಕಾಮಗಾರಿ ಪೂರ್ಣಗೊಳಿಸಬೇಕು. ರಾಗಿ, ಭತ್ತ, ತೊಗರಿ ಬೆಂಬಲ ಬೆಲೆಯಡಿ ಖರೀದಿಸಿದಂತೆ ಮೆಕ್ಕೆಜೋಳವನ್ನು ಬೆಂಬಲ ಬೆಲೆಯಡಿ ಖರೀದಿಸಬೇಕೆಂದು ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯಿಸಿದರು.

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Davanagere crime news | ವರದಕ್ಷಿಣೆ ಆಸೆಗಾಗಿ ಹೆಂಡತಿ ಉಸಿರುಗಟ್ಟಿಸಿ ಸಾಯಿಸಿದ ಗಂಡ
Next Article ಜಿ. ಬಿ. ವಿನಯ್ ಕುಮಾರ್ ಆರುಂಡಿ ಗ್ರಾಮಕ್ಕೆ ಅಧಿಕಾರಿಗಳ ಭೇಟಿ: ಅಕ್ರಮ ಗಣಿಗಾರಿಕೆ, ಕ್ರಷರ್ ಸ್ಥಗಿತಕ್ಕೆ ಜಿ. ಬಿ. ವಿನಯ್ ಕುಮಾರ್ ಆಗ್ರಹ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

DAVANAGERE NEWS : ಹರ್ ಘರ್ ತಿರಂಗಾ-2024 -ಸ್ವಾತಂತ್ರ ಹೋರಾಟಗಾರ ನೆನೆಯುವ ಅವಕಾಶ

ಹರಿಹರ (DAVANAGERE) :  ಹರ್ ಘರ್ ತಿರಂಗಾ-2024 ಅಭಿಯಾನವು ಸ್ವಾತಂತ್ರ್ಯ ಹೋರಾಟಗಾರರನ್ನು ನೆನೆಯುವ ಒಂದು ಉತ್ತಮ ಅವಕಾಶದ  ಕಾರ್ಯಕ್ರಮವಾಗಿದೆ ಎಂದು…

By Dinamaana Kannada News

Davanagere news | ಆಟೋದಲ್ಲಿ ಮರೆತು ಹೋಗಿದ್ದ ಅಭರಣ ಹಿಂದಿರುಗಿಸಿದ ಪೊಲೀಸರು

ದಾವಣಗೆರೆ  (Davanagere) : ಆಟೋದಲ್ಲಿ  ಕಳೆದುಕೊಂಡಿದ್ದ ಬಂಗಾರ & ಬೆಳ್ಳಿಯ ಆಭರಣಗಳನ್ನು ಪತ್ತೆ ಮಾಡುವಲ್ಲಿ ಬಸವನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಹರಿಹರದ ನವೀನತಾಜ್…

By Dinamaana Kannada News

Davangere University | ಮುಂದೂಡಿದ್ದ ಪರೀಕ್ಷೆ ಆ.24 ರಂದು : ಕುಲಸಚಿವ ಪ್ರೊ.ಸಿ.ಕೆ.ರಮೇಶ್

ದಾವಣಗೆರೆ (DAVANAGERE)  : ತಾಂತ್ರಿಕ ಕಾರಣಗಳಿಂದ ಮುಂದೂಡಲಾಗಿದ್ದ ಸ್ನಾತಕ ಬಿ.ಕಾಂ (ಎನ್‌ಇಪಿ) ಪದವಿಯ ಇ-ಕಾಮರ್ಸ್ ವಿಷಯದ ಪರೀಕ್ಷೆಯನ್ನು ಆಗಸ್ಟ್  24…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಕಂಪ್ಯೂಟರ್ ಆಧಾರಿತ ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ ಪರೀಕ್ಷೆಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಿಮ್ಮೊಂದಿಗೆ ನಾವಿದ್ದೇವೆ ಧೈರ್ಯದಿಂದಿರಿ : ರೈತರಿಗೆ ಸಚಿವರಿಂದ ಅಭಯ

By Dinamaana Kannada News
Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?