Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮಾದಾಪುರ ಕೆರೆಯಲ್ಲಿ ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ
ತಾಜಾ ಸುದ್ದಿ

ಮಾದಾಪುರ ಕೆರೆಯಲ್ಲಿ ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ

Dinamaana Kannada News
Last updated: April 29, 2025 4:57 pm
Dinamaana Kannada News
Share
Davanagere
ಒಂದನೇ ವಿಕ್ರಮಾದಿತ್ಯನ ಕಾಲದ ಶಿಲಾಶಾಸನ ಪತ್ತೆ
SHARE

ದಾವಣಗೆರೆ (Davanagere ): ನ್ಯಾಮತಿ ತಾಲ್ಲೂಕಿನ ಮಾದಾಪುರ ಕೆರೆಯಲ್ಲಿ ಬಾದಾಮಿ ಚಾಲುಕ್ಯರ ಒಂದನೇ ವಿಕ್ರಮಾದಿತ್ಯನ ಕಾಲದ ಶಿಲಾಶಾಸನ ಪತ್ತೆಯಾಗಿದೆ ಎಂದು ಕಮಲಾಪುರದಲ್ಲಿನ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ನಿರ್ದೇಶಕರಾದ ಡಾ;ಆರ್.ಶೇಜೇಶ್ವರ ತಿಳಿಸಿದ್ದಾರೆ.

ಮಾದಾಪುರ ಕೆರೆಯಲ್ಲಿ ಸ್ಥಳೀಯರು ಜೆಸಿಬಿಯಿಂದ ಮಣ್ಣನ್ನು ತೆಗೆಯುವಾಗ ಶಿಲಾ ಶಾಸನ ಪತ್ತೆಯಾಗಿದೆ. ಇಲ್ಲಿಗೆ ಪುರಾತತ್ವ ಇಲಾಖೆ ನಿರ್ದೇಶಕರು ಭೇಟಿ ನೀಡಿ ಪರಿಶೀಲಿಸಿದ ನಂತರ ಇದು ಬಾದಾಮಿ ಚಾಲುಕ್ಯರ ಶಿಲಾಶಾಸನವಾಗಿದೆ ಎಂದು ತಿಳಿದುಬಂದಿದೆ.

ಶಾಸನವು 5 ಅಡಿ ಉದ್ದವಿದ್ದು ಹಳೆಗನ್ನಡದ 17 ಸಾಲು ಶಾಸನವನ್ನು ಒಳಗೊಂಡಿದೆ. ಇದು ಕ್ರಿ.ಶ 7 ನೇ ಶತಮಾನದ ಬಾದಾಮಿ ಚಾಲುಕ್ಯರ ಒಂದನೇ ವಿಕ್ರಮಾದಿತ್ಯನ ಕ್ರಿ.ಶ.654-681 ಕಾಲದ ಶಾಸನವಾಗಿದೆ. ಒಂದನೇ ವಿಕ್ರಮಾದಿತ್ಯನು ರಾಜ್ಯವಾಳುವಾಗ ಅವನ ಅಧಿಕಾರಿ ಸಿಂಘವೆಣ್ಣನು ಬಳ್ಳಾವಿ ನಾಡನ್ನು ಆಳುತ್ತಿದ್ದಾಗ ಪೂರ್ವ ಮರ್ಯಾದೆಯಿಂದ ಪ್ರಜೆಗಳಿಗಾಗಿ ಊರ ಮೇಲಿನ ಕೆಲವು ತೆರಿಗೆಗಳನ್ನು ಮನ್ನಾ ಮಾಡಿರುವುದನ್ನು ಹಾಗೂ ಕೆರೆಯನ್ನು ನಿರ್ಮಿಸಿದ ಓಜರಿಗೆ ಆರು ಮತ್ತರು ಭೂಮಿಯನ್ನು ದಾನ ನೀಡಿರುವುದನ್ನು ಹಾಗೂ ಈ ಭೂಮಿಯು ಬಳ್ಳಾವಿ ಎಪ್ಪತ್ತರ ಒಕ್ಕಲುಗಳಿಗೆ ಸಲ್ಲುತ್ತೆಂದು ಉಲ್ಲೇಖಿಸಲಾಗಿದೆ.

Read also : Education Loan | ವಿದ್ಯಾಭ್ಯಾಸ ಸಾಲಕ್ಕಾಗಿ ಅರ್ಜಿ ಆಹ್ವಾನ

ಈ ಶಾಸನ ಶೋಧನೆಯಿಂದ ಬಳ್ಳಾವಿ ಎಪ್ಪತ್ತು ಎಂಬ 70 ಗ್ರಾಮಗಳಿದ್ದ ಆಡಳಿತ ವಿಭಾಗದ ಪ್ರಾಚೀನತೆಯನ್ನು ಹಾಗೂ ಶಾಸನವು 1344 ವರ್ಷಗಳ ಪುರಾತನವಾದದು ಎಂದು ತಿಳಿಸುತ್ತದೆ. ಈ ಶಾಸನದ ಮುಂಭಾಗ ಹಾಗೂ ಹಿಂಭಾಗದಲ್ಲಿ ಕ್ರಿ.ಶ.17 ನೇ ಶತಮಾನದಲ್ಲಿ ಅಪೂರ್ಣ ಉಬ್ಬು ಶಿಲ್ಪವಿದೆ.

ಈ ಶಾಸನ ಓದಿಕೊಟ್ಟ ಪ್ರೊ.ಶ್ರೀನಿವಾಸ ಪಾಡಿಗರ, ರಮೇಶ ಹಿರೇಜಂಬೂರು, ಕ್ಷೇತ್ರ ಕಾರ್ಯದಲ್ಲಿ ಸಹಕರಿಸಿದ ಡಾ;ರವಿಕುಮಾರ ನವಲಗುಂದ, ಮಂಜಪ್ಪ ಚುರ್ಚಿಗುಂಡಿ, ಮಾದಾಪುರ ಗ್ರಾಮ ಆಡಳಿತಾಧಿಕಾರಿ ವಿಶ್ವನಾಥ, ಗ್ರಾಮಸ್ಥರಾದ ಬುಜಂಗ, ವೀರೇಶ್ ಹಾಗೂ ಇತರರ ಕಾರ್ಯವನ್ನು ಪುರಾತ್ವತ ಇಲಾಖೆ ನಿರ್ದೇಶಕರು ಶ್ಲಾಘಿಸಿದ್ದಾರೆ.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Education Loan | ವಿದ್ಯಾಭ್ಯಾಸ ಸಾಲಕ್ಕಾಗಿ ಅರ್ಜಿ ಆಹ್ವಾನ
Next Article ranebennuru Ranebennur | ರಷ್ಯಾದಲ್ಲಿ ಡಾ. ನಾಗರಾಜ ಎಸ್. ಕೆ ಅವರಿಗೆ ಗ್ಲೋಬಲ್‌ ಅಚಿವರ್ಸ್ ಪ್ರಶಸ್ತಿ  

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಕರ್ತವ್ಯ ಲೋಪ : ಮೂವರು ಪೊಲೀಸರ ಅಮಾನತು

ದಾವಣಗೆರೆ (Davanagere): ನಗರದ ಬಂಗಾರದ ಅಂಗಡಿಯಲ್ಲಿ ನಡೆದಿದ್ದ 18 ಲಕ್ಷ ಮೌಲ್ಯದ ಬೆಳ್ಳಿ ಬಂಗಾರ ಕಳ್ಳತನ ಪ್ರಕರಣದಲ್ಲಿ ಕರ್ತವ್ಯ ಲೋಪ…

By Dinamaana Kannada News

Davanagere | ದರೋಡೆ  ಪ್ರಕರಣ : ಆರೋಪಿಗಳಿಗೆ ಕಾರಾಗೃಹ ಶಿಕ್ಷೆ

ದಾವಣಗೆರೆ (Davanagere) : ದರೋಡೆ  ಮಾಡಲು ಪ್ರಯತ್ನಿಸಿದ 05 ಜನ ಆರೋಪಿಗಳಿಗೆ 08 ತಿಂಗಳು ಸಾಧಾ ಕಾರಾಗೃಹ ಶಿಕ್ಷೆ ಹಾಗೂ ತಲಾ…

By Dinamaana Kannada News

Davangere news : ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

 ದಾವಣಗೆರೆ (Davangere District)  ಆ.13  : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ(Department of Minority Welfare) ಯ ಮೆಟ್ರಿಕ್ ನಂತರದ  ವಿದ್ಯಾರ್ಥಿ…

By Dinamaana Kannada News

You Might Also Like

World No Tobacco Day
ತಾಜಾ ಸುದ್ದಿ

World No Tobacco Day | ದುಶ್ಚಟಗಳಿಂದ ದೂರವಿರಿ : ನ್ಯಾ.ವೇಲಾ ಡಿ.ಕೆ

By Dinamaana Kannada News
ವೀರಣ್ಣ ಮಡಿವಾಳರ
Blog

ಕನ್ನಡ ಸಾಲಿ ಮಾಸ್ತರ ಗೆಳೆಯ ವೀರಣ್ಣನ ನೆಪದಲ್ಲಿ….

By Dinamaana Kannada News
Davanagere
ತಾಜಾ ಸುದ್ದಿ

Davanagere | ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?