ದಾವಣಗೆರೆ (Davanagere) : ಸಚಿವ ಸ್ಥಾನದಿಂದ ಪ್ರಿಯಾಂಕ್ ಖರ್ಗೆಯನ್ನು ವಜಾ ಮಾಡಬೇಕು. ಅಲ್ಲದೇ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು, ಕಲಬುರಗಿಯಲ್ಲಿ ಪ್ರಿಯಾಂಕ್ ಖರ್ಗೆ ಅವರ ಸರ್ವಾಧಿಕಾರದಲ್ಲಿದೆ. ಕಾಂಗ್ರೆಸ್ ಕಾರ್ಯಕರ್ತರು ತಾವು ಮಾಡಿದ್ದೇ ಕಾನೂನು ಎಂದುಕೊಂಡಿದ್ದಾರೆ. ಪೊಲೀಸರು ಅಸಹಾಯಕರಾಗಿದ್ದಾರೆಂದು ಪ್ರಕಟಣೆಯಲ್ಲಿ ಕಿಡಿಕಾರಿದ್ದಾರೆ. ಕಾಂಗ್ರೆಸ್ ಗೂಂಡಾ ಬೆಂಬಲಿಗರ ದಿಗ್ಭಂದನ ಅನುಭವಿಸಿದ್ದು, ಕರ್ನಾಟಕದಲ್ಲಿ ಪಾಳೆಗಾರಿಕೆ ಸಂಸ್ಕೃತಿಯ ಜೀವಂತಿಕೆಯನ್ನು ಪ್ರತಿಬಿಂಬಿಸಿದೆ ಎಂದು ತಿಳಿಸಿದ್ದಾರೆ.
ವಿಪಕ್ಷದ ನಾಯಕರೊಬ್ಬರಿಗೆ ರಕ್ಷಣೆ ನೀಡಲಾರದ ಪರಿಸ್ಥಿತಿ ತುರ್ತು ಪರಿಸ್ಥಿತಿಯನ್ನು ನೆನಪಿಸುತ್ತಿದೆ. ಟೀಕೆ- ಟಿಪ್ಪಣಿಗಳನ್ನು ಆರೋಗ್ಯಕರ ಮನಸ್ಸಿನಿಂದ ಸ್ವೀಕರಿಸಬೇಕು, ಅದಕ್ಕೆ ಸಮರ್ಥವಾಗಿ ಪ್ರತ್ಯುತ್ತರ ನೀಡಬೇಕು ಇದು ಪ್ರಜಾಪ್ರಭುತ್ವದ ಸುಂದರತೆ ಹಾಗೂ ರಾಜಕಾರಣ ಸಂಸ್ಕೃತಿಯ ಧ್ಯೋತಕವಾಗುತ್ತದೆ. ಕಲಬುರ್ಗಿ ಜಿಲ್ಲೆ ಇಂದಿರಾ ಗಾಂಧಿಯವರ ತುರ್ತು ಪರಿಸ್ಥಿತಿಯ ಸರ್ವಾಧಿಕಾರಿ ನೆರಳಿನಲ್ಲಿ ಬಂದವರ ಕಪಿಮುಷ್ಠಿಯಲ್ಲಿದೆ. ಇಲ್ಲಿ ಪ್ರಜಾಪ್ರಭುತ್ವವೂ ಇಲ್ಲ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯದ ಸಂವಿಧಾನಕ್ಕೆ ಗೌರವವೂ ಇಲ್ಲ ಎನ್ನುವುದು ನಾರಾಯಣಸ್ವಾಮಿಯವರ ದಿಗ್ಬಂಧನ ಸಾಕ್ಷಿ ಹೇಳುತ್ತಿದೆ.
Read also : Davanagere | ಸುಯೆಜ್ ಕಂಪನಿಯ ವತಿಯಿಂದ ಅಂತರರಾಷ್ಟ್ರೀಯ ಜೈವಿಕ ವೈವಿಧ್ಯತೆ ದಿನಾಚರಣೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇದ್ದರೆ ಸಾಂವಿಧಾನಿಕ ಹುದ್ದೆ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಗೌರವವಿದ್ದರೆ ಈ ಕೂಡಲೇ ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಛಲವಾದಿ ನಾರಾಯಣ ಸ್ವಾಮಿ ಅವರಿಗೆ ಸೂಕ್ತ ಭದ್ರತೆ ಒದಗಿಸಿ ದಿಬ್ಬಂದನ ವಿಧಿಸಿದ ಗೂಂಡಾಗಳ ಮೇಲೆ ಕ್ರಮ ಜರುಗಿಸಲಿ. ಅವರು ನಿರ್ಲಿಪ್ತರಾದರೆ ತಾವೂ ಪಾಳೇಗಾರಿಕೆ ಸಂಸ್ಕೃತಿಯ ಭಾಗ ಎಂದು ನಿರೂಪಿಸಿಕೊಂಡಂತಾಗುತ್ತದೆ. ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಹಾಗೂ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ್ ಖರ್ಗೆ. ಅವರು ಸಂಸತ್ತಿನಲ್ಲಿ ಉತ್ತರ ಕುಮಾರರಂತೆ ಪ್ರಧಾನ ಮಂತ್ರಿ ಮೋದಿಜಿ ಹಾಗೂ ದೇಶದಲ್ಲಿ ಭದ್ರತೆ ವೈಫಲ್ಯದ ಬಗ್ಗೆ ಮಾತನಾಡುತ್ತಾರೆ. ತಮ್ಮದೇ ಕ್ಷೇತ್ರವಾದ ರಿಪಬ್ಲಿಕ್ ಆಫ್ ಕಲಬುರ್ಗಿಯ ದಹನೀಯ ಸ್ಥಿತಿಯ ಬಗ್ಗೆ ಕೂಡ ಮಾತನಾಡಬೇಕಾಗಿ ಒತ್ತಾಯ ಮಾಡಿದ್ದಾರೆ.
ಖರ್ಗೆ ಕುಟುಂಬದ ಸೇಡಿನ ರಾಜಕಾರಣ
ಮೇಲ್ಮನೆ ವಿರೋಧ ಪಕ್ಷದ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿಯವರು ಈ ಹಿಂದೆ ಖರ್ಗೆ ಕುಟುಂಬದ ಅಕ್ರಮ ಆಸ್ತಿಗಳ ಬಗ್ಗೆ ಸದನದಲ್ಲಿ ಹೋರಾಟ ನಡೆಸಿದ್ದರ ಪರಿಣಾಮವಾಗಿ KIADBಯು ಸಿದ್ದಾರ್ಥ ವಿಹಾರ ಟ್ರಸ್ಟ್ಗೆ ನೀಡಿದ್ದ ಐದು ಎಕರೆ ಭೂಮಿಯನ್ನು ಹಿಂದಿರುಗಿಸಬೇಕಾಯಿತು. ಅಕ್ರಮ ಆಸ್ತಿಗಳ ವಿರುದ್ಧ ಸದನದಲ್ಲಿ ಧ್ವನಿ ಎತ್ತಿದ್ದಕ್ಕಾಗಿ, ಆಸ್ತಿ ಹಿಂದಿರುಗಿಸಬೇಕಾದ ಸ್ಥಿತಿ ಉಂಟಾಗಿತ್ತು. ಛಲವಾದಿ ನಾರಾಯಣಸ್ವಾಮಿಯವರ ಮೇಲೆ ಹಲ್ಲೆ ನಡೆಸಿ, ಕೊಲೆ ಮಾಡುವ ಯತ್ನ ನಡೆದಿದೆ. ಚಿತ್ತಾಪುರದಲ್ಲಿ ನಡೆದ ಈ ಘಟನೆಯು ಪೂರ್ವ ನಿಯೋಜಿತ ಮತ್ತು ರಾಜಕೀಯ ಪ್ರೇರಿತ ದಾಳಿ ಎಂದು ದಾವಣಗೆರೆ ಜಿಲ್ಲಾ ಬಿಜೆಪಿ ಮುಖಂಡರಾದ ಆಲೂರು ನಿಂಗರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.