ದಾವಣಗೆರೆ (Davanagere): ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕಗಳ ಸಮರ್ಪಕ ವಸೂಲಾತಿಗಾಗಿ ಡೇ-ನಲ್ಮ್ ಅಭಿಯಾನದಡಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ರಚಿಸಲಾಗಿರುವ ಅರ್ಹ ಮಹಿಳಾ ಸ್ವ-ಸಹಾಯ ಸಂಘಗಳನ್ನು ತೊಡಗಿಸಿಕೊಂಡು ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕವನ್ನು ವಸೂಲಾತಿ, ಸಂಗ್ರಹಣೆ ಮಾಡಲು ಮಹಿಳಾ ಸ್ವ-ಸಹಾಯ ಗುಂಪುಗಳ ಸದಸ್ಯರ ನೇಮಕಾತಿಗಾಗಿ ಆಸಕ್ತಿಯುಳ್ಳ ಸದಸ್ಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನೀರಿನ ಬಳಕೆಯ ಶುಲ್ಕದ ಹಿಂದಿನ ಬಾಕಿ ಮೊತ್ತ ಬಡ್ಡಿ ಸಹಿತವಾಗಿ ಮತ್ತು ಪ್ರಸ್ತುತ ವಾರ್ಷಿಕ ಬೇಡಿಕೆಯ ಸಹಿತ ವಸೂಲಿ ಮಾಡುವುದು ಹಾಗೂ ಬಹುದಿನಗಳಿಂದ ಬಾಕಿ ಇರುವ ಆಸ್ತಿ ತೆರಿಗೆಯನ್ನು ಸಮರ್ಪಕವಾಗಿ ವಸೂಲಿ ಮಾಡಲು ಸ್ಥಳೀಯ ಮಹಿಳಾ ಸ್ವಸಹಾಯ ಗುಂಪುಗಳ ಸೇವೆಯನ್ನು ಪಡೆಯಲು ಮತ್ತು ಮಹಿಳಾ ಸ್ವಸಹಾಯ ಗುಂಪುಗಳಿಗೆ ವಸೂಲಾದ ಮೊತ್ತದಲ್ಲಿ ಶೇಕಡ 5ರಷ್ಟನ್ನು ಪೆÇ್ರೀತ್ಸಾಹಧನದ ರೂಪದಲ್ಲಿ ನೀಡಲು ಸರ್ಕಾರದಿಂದ ಆದೇಶಿಸಲಾಗಿರುತ್ತದೆ.
Read also : ಕ್ರಾಂತಿಕಾರಿ ರಥಯಾತ್ರೆಗೆ ಅಡ್ಡಿ ಖಂಡಿಸಿ ಪ್ರತಿಭಟನೆ
ಆಸಕ್ತ ಮಹಿಳಾ ಸ್ವ-ಸಹಾಯ ಗುಂಪುಗಳ ಸದಸ್ಯರುಗಳು ತಮ್ಮ ವೈಯಕ್ತಿಕ ವಿವರಗಳನ್ನು ಡೇ-ನಲ್ಮ್ ಹಿಂಬರಹದೊಂದಿಗೆ www.davanagerecity.mrc.gov.in ವೆಬ್‍ಸೈಟ್‍ನಲ್ಲಿ ನಿಗದಿತ ನಮೂನೆಯಲ್ಲಿ ಜೂನ್ 20 ಒಳಗಾಗಿ ಸಲ್ಲಿಸಬೇಕು ಎಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.