ದಾವಣಗೆರೆ (Davanagere) : ಪ.ಜಾತಿಯ ಸಮಗ್ರ ಸಮೀಕ್ಷೆ ಕಾರ್ಯದ ವೈಜ್ಞಾನಿಕ ದತ್ತಾಂಶವನ್ನು ಸಂಗ್ರಹಿಸಲು ಮೇ.5 ರಿಂದ ಮನೆ ಮನೆ ಭೇಟಿ ಮೂಲಕ ರಾಜ್ಯಾದ್ಯಂತ ಈಗಾಗಲೇ ಸಮೀಕ್ಷೆಯನ್ನು ಕೈಗೊಳ್ಳಲಾಗಿದ್ದು ಜೂನ್ 9 ರಿಂದ 22ರವರೆಗೆ ಸಮೀಕ್ಷಾ ಅವಧಿಯನ್ನು ವಿಸ್ತರಿಸಲಾಗಿದೆ.
ಸಮೀಕ್ಷೆಯಲ್ಲಿ ಇದುವರೆಗೂ ಭಾಗವಹಿಸದೇ ಇರುವ ಕರ್ನಾಟಕ ರಾಜ್ಯಕ್ಕೆ ಸೇರಿದ ಪರಿಶಿಷ್ಟ ಜಾತಿ ಕುಟುಂಬದವರು ನಾಗರೀಕ ಸೇವಾ ಕೇಂದ್ರಗಳಾದ ಕರ್ನಾಟಕ ಒನ್, ಬೆಂಗಳೂರು ಒನ್ ಮತ್ತು ಗ್ರಾಮ ಒನ್ ಕೇಂದ್ರಗಳು, ಬಾಪೂಜಿ ಸೇವಾ ಕೇಂದ್ರ ಬಿ.ಬಿ.ಎಂ.ಪಿ ವ್ಯಾಪ್ತಿಯ 198 ಬಿ.ಬಿ.ಎಂ.ಪಿ ವಾರ್ಡ್ ಕಚೇರಿಗಳಲ್ಲಿ ವ್ಯವಸ್ಥೆಮಾಡಿಕೊಂಡಿರುವ ಪ್ರತ್ಯೇಕವಾದ ಶಿಬಿರಗಳಲ್ಲಿ ಸಮೀಕ್ಷೆಗೆ ಅವಕಾಶವನ್ನು ಕಲ್ಪಿಸಲಾಗಿದೆ.
Read also : ಪೊಲೀಸರ ಸೋಗಿನಲ್ಲಿ ಹಣ ವಸೂಲಿ : 24 ಗಂಟೆಯೊಳಗೆ ಕೈಗೆ ಬಿತ್ತು ಕೋಳ
ಆನ್ ಲೈನ್ https://schedulecastesurvey.karnataka.gov.in/selfdeclaration ಲಿಂಕ್ ಮೂಲಕ ಸ್ವಯಂ ಘೋಷಣೆ ಮಾಡಿಕೊಳ್ಳುವ ವಿಧಾನವನ್ನು ಸಹ ಜೂನ್ 22 ರವರೆಗೆ ವಿಸ್ತರಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ತಿಳಿಸಿದ್ದಾರೆ.