ದಾವಣಗೆರೆ : ಕರ್ನಾಟಕ ಕಾಂಗ್ರೆಸ್ ಯುವ ಘಟಕದ ವತಿಯಿಂದ ದಾವಣಗೆರೆಯಲ್ಲಿ ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಆಯೋಜಿಸಲಾಗಿದ್ದು, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮತ್ತು ಪದಾಧಿಕಾರಿಗಳು ಹಾಗೂ ಜಿಲ್ಲಾ ಪದಾಧಿಕಾರಿಗಳು ದಾವಣಗೆರೆ ನಗರದ ಜಯದೇವ ವೃತ್ತದಿಂದ ಸಂವಿಧಾನ ಶಿಲ್ಪಿ ಡಾ.ಬಿಆರ್ ಅಂಬೇಡ್ಕರ್ ವೃತ್ತದವರೆಗೆ ಸುಮಾರು ನೂರು ಮೀಟರ್ ಉದ್ದದ ರಾಷ್ಟ್ರಧ್ವಜ ತಿರಂಗಾ ಯಾತ್ರೆ ನಡೆಸಿದರು.

ಬೆಳಿಗ್ಗೆ 12.30ಕ್ಕೆ ನಗರದ ಕೇಂದ್ರಭಾಗ ಜಯದೇವ ವೃತ್ತದಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ , ಉಪಾಧ್ಯಕ್ಷೆ ದೀಪಿಕಾ ರೆಡ್ಡಿ, ಕಾರ್ಯದರ್ಶಿ ನಿಗಮ್ ಭಂಡಾರಿ, ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ, ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವರುಣ್ ಬೆಣ್ಣಿಹಳ್ಳಿ, ಉಪಾಧ್ಯಕ್ಷ ಅಲಿ ರೆಹಮತ್ ಮತ್ತು ಪದಾಧಿಕಾರಿಗಳು, ಜವಾಹರ್ ಬಾಲ್ ಮಂಚ್ ರಾಜ್ಯ ಕಾರ್ಯದರ್ಶಿ ಲಿಯಾಖತ್ ಅಲಿ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು. ಪ್ರಥಮ ಬಾರಿಗೆ ಆಗಮಿಸಿದ ರಾಜ್ಯ ಯುವ ಕಾಂಗ್ರೆಸ್ ಪದಾಧಿಕಾರಿಗಳಿಗೆ ಶುಭಕೋರಿದರು.

ನೂರಾರು ವಿದ್ಯಾರ್ಥಿಗಳು ತಿರಂಗಾ ಯಾತ್ರೆಯಲ್ಲಿ ಪಾಲ್ಗೊಂಡು ಅಂಬೇಡ್ಕರ್ ವೃತ್ತದಲ್ಲಿ ವೃತ್ತಾಕಾರದ ತಿರಂಗಾ ಮತ್ತು ಮಾನವ ಸರಪಳಿ ರಚಿಸಿ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ರವರಿಗೆ ಹಾರ ಹಾಕಿ ಪುಷ್ಪ ವೃಷ್ಟಿ ಸುರಿಸುವ ಮೂಲಕ ಗೌರವ ಸಮರ್ಪಿಸಿದರು.