ದಾವಣಗೆರೆ : ಸಂವಿಧಾನದಿಂದ “ಜಾತ್ಯತೀತ” ಮತ್ತು “ಸಮಾಜವಾದಿ” ಪದಗಳನ್ನು ತೆಗೆಯಬೇಕೆಂದು ಹೇಳಿಕೆ ನೀಡಿದ ಆರ್ ಎಸ್‍ಎಸ್ ಮುಖಂಡರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಮಂಗಳವಾರ ಜಿಲ್ಲಾಧಿಕಾರಿಗಳಿಗೆ ಯುವ ಕಾಂಗ್ರೆಸ್ ಕಾರ್ಯಕರ್ತರು ಮನವಿ ಸಲ್ಲಿಸಿದರು.
ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‍ಎಸ್‍ಎಸ್) ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ಭಾರತೀಯ ಸಂವಿಧಾನದಿಂದ “ಜಾತ್ಯತೀತ” ಮತ್ತು “ಸಮಾಜವಾದಿ” ಎಂಬ ಪದಗಳನ್ನು ತೆಗೆಯಬೇಕೆಂದು ವಿವಾದಾಸ್ಪದ ಹೇಳಿಕೆಯನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು ಖಂಡಿಸಿದ್ದಾರೆ. ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಯುವ ಕಾಂಗ್ರೆಸ್ ಕಾರ್ಯದರ್ಶಿ ತಾಹಿರ್ ಸಮೀರ್ ಮಾತನಾಡಿ, ಈ ಹೇಳಿಕೆ ಸಂವಿಧಾನ ವಿರೋಧಿ ಮತ್ತು ದೇಶದ ಮೂಲ ತತ್ವಕ್ಕೆ ವಿರುದ್ಧವಾಗಿದೆ. ಸರ್ಕಾರ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಯುವ ಕಾಂಗ್ರೆಸ್ ತೀವ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು.
Read also : ದಾವಣಗೆರೆಯಲ್ಲಿ ಯಪಿಎಸ್ ಬ್ಲಾಸ್ಟ್ ಶಂಕೆ : ರೂಮಿನಲ್ಲಿದ್ದ ತಾಯಿ, ಮಗ ಧಾರುಣ ಸಾವು
ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಚಿರಂಜೀವಿ ಮಾತನಾಡಿ, ಇಂತಹ ಹೇಳಿಕೆಗಳು ರಾಷ್ಟ್ರ ವಿರೋಧಿಯಾಗಿದ್ದು. ಕ್ಷಮಿಸಲು ಸಾಧ್ಯವಿಲ್ಲ. ಸಂವಿಧಾನದ ಮೂಲ ಸಿದ್ಧಾಂತಗಳಿಗೆ ಧಕ್ಕೆ ತರುವ ಈ ರೀತಿಯ ಹೇಳಿಕೆಯನ್ನು ಖಂಡಿಸಬೇಕು ಮತ್ತು ಕಾನೂನು ಕ್ರಮ ಅಗತ್ಯವಿದೆ ಎಂದು ಹೇಳಿದರು.
ಈ ವೇಳೆ ಉಪಾಧ್ಯಕ್ಷ ಬಿಲಾಲ್ ಖಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ ಪಿಸಾಲೆ, ಉತ್ತರ ವಿಧಾನಸಭಾ ಅಧ್ಯಕ ಗಣೇಶ್ ಕೆ, ಸಯ್ಯದ ಅಹಮದ್, ಅಭಿ, ಹಾಲೇಶ್, ನವೀನ್ ನಳವಾಡಿ ಉಪಸ್ಥಿತರಿದ್ದರು.