ದಾವಣಗೆರೆ : ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಜುಲೈ 4 ಮತ್ತು 5 ರಂದು ಕೋಳಿ ಸಾಕಾಣಿಕೆ ತರಬೇತಿಯನ್ನು ಆಯೋಜಿಸಲಾಗಿದೆ. ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು.
Read also : ದಾವಣಗೆರೆ | ಪ್ರಧಾನಮಂತ್ರಿಅವಾಸ್ 2.0 ಯೋಜನೆಯಡಿ ಅರ್ಜಿ ಆಹ್ವಾನ
ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ತರಬೇತಿಯು ದಾವಣಗೆರೆ ಜಿಲ್ಲೆಯ ರೈತರಿಗೆ ಮಾತ್ರ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.