ದಾವಣಗೆರೆ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವಿಷಯಕ್ಕೆ ಸಂಬಂಧಿಸಿದಂತೆ ಜಗಳ ನಡೆದು ಮಹಿಳೆಯೊಬ್ಬಳು ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಹೂವಿನಮಡು ಗ್ರಾಮದಲ್ಲಿ ಭಾನುವಾರ ನಡೆದಿದೆ.
ಗ್ರಾಮದ ಗಂಗಮ್ಮ (48) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ಗ್ರಾಮದಲ್ಲಿನ ಮಹಿಳೆಯೊಬ್ಬರು ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದರು. ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದಿಂದ ಪುರುಷರು, ಮಕ್ಕಳು, ಮಹಿಳೆಯರು ಮದ್ಯ ವ್ಯಸನಿಗಳಾಗಿ ಬದುಕು ಸರ್ವ ನಾಶವಾಗುತ್ತಿದೆ. ಯಾವುದೇ ಕಾರಣಕ್ಕೂ ಅಕ್ರಮವಾಗಿ ಮದ್ಯ ಮಾರಾಟ ಮಾಡಬಾರದು ಎಂದು ವಿರೋಧ ವ್ಯಕ್ತಪಡಿಸಿದ್ದರು.
Read also : Muharram | ಮೊಹರಂ ಕೆಂಡದ ನೆನಪು
ಇದಕ್ಕೆ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಮಹಿಳೆ ಗಂಗಮ್ಮ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದರು. ಇದರಿಂದ ಬೇಸತ್ತು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಈ ಘಟನೆ ಕುರಿತು ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.