Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಗಿಗ್, ಸಿನಿ ಹಾಗೂ ಮನೆಗೆಲಸ ಕಾರ್ಮಿಕರ ಕಲ್ಯಾಣಕ್ಕಾಗಿ ಅಧಿನಿಯಮ ಜಾರಿಗೆ ಕ್ರಮ: ಸಚಿವ ಸಂತೋಷ್ ಲಾಡ್
ತಾಜಾ ಸುದ್ದಿ

ಗಿಗ್, ಸಿನಿ ಹಾಗೂ ಮನೆಗೆಲಸ ಕಾರ್ಮಿಕರ ಕಲ್ಯಾಣಕ್ಕಾಗಿ ಅಧಿನಿಯಮ ಜಾರಿಗೆ ಕ್ರಮ: ಸಚಿವ ಸಂತೋಷ್ ಲಾಡ್

Dinamaana Kannada News
Last updated: July 12, 2025 2:12 pm
Dinamaana Kannada News
Share
Minister Santosh Lad
SHARE
ದಾವಣಗೆರೆ  :  ದೇಶದಲ್ಲೇ ಪ್ರಥಮ ಬಾರಿಗೆ ಕರ್ನಾಟಕ ರಾಜ್ಯ ಸರ್ಕಾರ ಇ-ಕಾಮರ್ಸ್ ಫ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರು, ಸಿನಿಮಾ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಲಾ ಕಾರ್ಮಿಕರು ಹಾಗೂ ಮನೆಗೆಲಸದಲ್ಲಿ ತೊಡಗಿರುವ ಗೃಹ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ಪ್ರತ್ಯೇಕ ಅಧಿನಿಯಮಗಳನ್ನು ರೂಪಿಸಿದೆ. ಮುಂಬರುವ ದಿನಗಳಲ್ಲಿ ಸದನದಲ್ಲಿ ಈ ಅಧಿಸೂಚನೆಗಳನ್ನು ಮಂಡಿಸಿ, ಅನುಮೋದನೆ ಪಡೆದು, ಕಾಯ್ದೆಗಳನ್ನಾಗಿ ಜಾರಿ ಮಾಡುವುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.
ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಶನಿವಾರ ನಗರದ ದೊಡ್ಡಬೂದಿಹಾಳ್ ರಸ್ತೆಯ ತಾಜ್ ಪ್ಯಾಲೇಸ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾದ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದೆ. ಈಗಾಗಲೇ ಇ-ಕಾಮರ್ಸ್ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ ಜಾರಿಗೊಳಿಸಲಾಗಿದೆ. ಗಿಗ್ ಕಾರ್ಮಿಕರನ್ನು ನೋಂದಾಯಿಸಿ, ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಲು ಹಾಗೂ ಸಂಪನ್ಮೂಲ ಕ್ರೂಢೀಕರಣಕ್ಕಾಗಿ ‘ಕರ್ನಾಟಕ ಫ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕ ಅಧಿನಿಯಮ-2025’ ಜಾರಿ ಮಾಡಲಾಗುವುದು. ರಾಜ್ಯದಲ್ಲಿ ವರ್ಷಕ್ಕೆ ಸುಮಾರು 4 ಕೋಟಿ ಸಿನಿಮಾ ಟಿಕೆಟ್‌ಗಳು ಮಾರಾಟವಾಗುತ್ತವೆ. ಈ ಟಿಕೆಟ್‌ಗಳ ಮೇಲೆ ಸೆಸ್ ವಿಧಿಸುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚೆಸಲಾಗುತ್ತಿದೆ. ಇದಕ್ಕಾಗಿ ‘ಕರ್ನಾಟಕ ಸಿನಿಮಾ ಮತ್ತು ಚಟುವಟಿಕೆಗಳಲ್ಲಿ ತೊಡಗಿದ ಕಾರ್ಮಿಕರ ಸುಂಕ ಅಧಿನಿಯಮ-2024’ ಅನ್ನು ರಚಿಸಲಾಗಿದೆ. ಇದರೊಂದಿಗೆ ಮನೆಗೆಲಸ ನಿರ್ವಹಿಸುತ್ತಿರುವ ಕಾರ್ಮಿಕರ ಕಲ್ಯಾಣಕ್ಕಾಗಿ ‘ಕರ್ನಾಟಕ ಗೃಹ ಕಾರ್ಮಿಕರ ಅಧಿನಿಯಮ-2025’ ರಚಿಸಲಾಗಿದೆ. ಈ ಎಲ್ಲಾ ಅಧಿನಿಯಮಗಳ ನಿಯಾವಳಿಗಳನ್ನು ರೂಪಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ. ಈ ಅಧಿನಿಯಮಗಳನ್ನು ಸದನದಲ್ಲಿ ಮಂಡಿಸಿ, ಅನುಮೋದನೆ ಪಡೆದು, ಕಾಯ್ದೆ ಜಾರಿಗೊಳಿಸಲಾಗುವುದು ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದರು.
ಗ್ಯಾರಂಟಿ ಯೋಜನೆಗಳಿಗೆ 5 ವರ್ಷದಲ್ಲಿ 3 ಲಕ್ಷ ಕೋಟಿ ಖರ್ಚು: 
ರಾಜ್ಯದಲ್ಲಿ ಜಾರಿಗೊಳಿಸಲಾಗಿರುವ ಪಂಚ ಗ್ಯಾರಂಟಿ ಯೋಜನೆಗಳಿಗೆ ಪ್ರತಿ ವರ್ಷ 56 ರಿಂದ 60 ಸಾವಿರ ಕೋಟಿ ರೂ. ವೆಚ್ಚವಾಗುತ್ತಿದೆ. ಈ ಮೊತ್ತ 5 ವರ್ಷಗಳಲ್ಲಿ 3 ಲಕ್ಷ ಕೋಟಿ ರೂ. ತಲುಪಬಹುದು. ದೇಶದ ಯಾವುದೇ ರಾಜ್ಯದಲ್ಲಿ ಇಷ್ಟೊಂದು ಮೊತ್ತದ ಹಣವನ್ನು ನೇರವಾಗಿ ಜನರ ಕಲ್ಯಾಣಕ್ಕಾಗಿ ವ್ಯಯಿಸುತ್ತಿಲ್ಲ. ರಾಜ್ಯದಲ್ಲಿ 30 ರಿಂದ 40 ಲಕ್ಷ ಅಸಂಘಟಿತ ಕಾರ್ಮಿಕರು ಇದ್ದು, ಕಾರ್ಮಿಕ ಇಲಾಖೆ 91 ವಿವಿಧ ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಗುರುತಿಸಿದೆ. ಅಸಂಘಟಿತ ಕಾರ್ಮಿಕರನ್ನು ಉಚಿತವಾಗಿ ನೋಂದಾಯಿಸಿಕೊಂಡು ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದೆ. ಇದಕ್ಕಾಗಿ ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ ಜಾರಿ ಮಾಡಲಾಗಿದೆ. ಇದುವರೆಗೂ ರಾಜ್ಯದಲ್ಲಿ 25,45,607 ಕಾರ್ಮಿಕರು, ದಾವಣಗೆರೆ ಜಿಲ್ಲೆಯಲ್ಲಿ 89,493 ಕಾರ್ಮಿಕರು ನೊಂದಣಿಯಾಗಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.
 ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿಸಿದ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯ ಮೂಲಕ, ಚಾಲಕರು, ನಿರ್ವಾಹಕ, ಕ್ಲೀನರ್, ನಿಲ್ದಾಣ ಸಿಬ್ಬಂದಿ, ಮಾರ್ಗ ಪರಿಶೀಲನಾ ಸಿಬ್ಬಂದಿ, ಬುಕಿಂಗ್, ನಗದು, ಡಿಪೋ ಗುಮಾಸ್ತರು ಸೇರಿದಂತೆ, ಮೋಟಾರು ಕ್ಷೇತ್ರದಲ್ಲಿ ದುಡಿಯತ್ತಿರುವ ಎಲ್ಲಾ ಕಾರ್ಮಿಕರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿ ಮಾಡಲಾಗುತ್ತಿದೆ ಎಂದರು.
ಖಾಸಗಿ ವಲಯದ ಉದ್ಯೋಗಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳುವ ಉದ್ದೇಶಿತ ದೃಷ್ಠಿಯಿಂದ ‘ಆಶಾದೀಪ’ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಈ ಯೋಜನೆಯಡಿ ಉದ್ಯೋಗದಾತ ಮಾಲಿಕರು ಪಾವತಿಸಿದ ಇ.ಎಸ್.ಐ ಮತ್ತು ಇ.ಪಿ.ಎಫ್ ವಂತಿಕೆ ಮರುಪಾವತಿ, ತರಬೇತಿ ನೇಮಿಸಿಕೊಂಡ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳ ಶಿಷ್ಯವೇತನ ಮರುಪಾವತಿ, ಹೊಸ ನೇಮಕಾತಿಗೊಂಡವರಿಗೆ ಪಾವತಿಸಿದ ವೇತನದ ಎರಡು ವರ್ಷಗಳ ಅವಧಿಗೆ ಪ್ರತಿ ಉದ್ಯೋಗಿಯ ಮಾಸಿಕ ತಲಾ 6000 ರೂ. ವೇತನವನ್ನು ಉದ್ಯೋಗದಾತರಿಗೆ ಮರುಪಾವತಿ ಮಾಡಲಾಗುವುದು ಎಂದು ಸಚಿವ ಸಂತೋಷ ಎಸ್. ಲಾಡ್ ತಿಳಿಸಿದರು.
Read also : ರಾಷ್ಟ್ರೀಯ ಲೋಕ್ ಆದಾಲತ್ | 23 ವೈವಾಹಿಕ ಪ್ರಕರಣಗಳ ರಾಜೀ , ಸಹಬಾಳ್ವೆ ನಡೆಸಲು ದಂಪತಿಗಳು ನಿರ್ಧಾರ
ಸರ್ಕಾರದಿಂದ ಖಾಸಗಿ ಕಂಪನಿಗಳು ನೀಡುವ ಇ.ಪಿ.ಎಫ್‌ಗಳನ್ನು ಪ್ರತ್ಯೇಕವಾಗಿ ಬ್ಯಾಂಕ್ ಖಾತೆಗಳನ್ನು ತೆರದು ನಿರ್ವಹಣೆ ಮಾಡುವಂತೆ ನಿಯಮ ರೂಪಿಸಲಾಗಿದೆ. ಉದ್ಯೋಗಿ, ಕಂಪನಿ ತೊರೆದ ಸಂದರ್ಭದಲ್ಲಿ ಈ ಹಣ ನೇರವಾಗಿ ಉದ್ಯೋಗಿಯ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ. ಇದರಿಂದ ಕಾರ್ಮಿಕರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಹೇಳಿದರು.
 ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಮಾತನಾಡಿ, ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಅವರು ಜಿಲ್ಲೆಯಲ್ಲಿ ಅರ್ಹ ಅಸಂಘಟಿತ ಕಾರ್ಮಿಕರನ್ನು ಗುರತಿಸಿ ಸ್ಮಾರ್ಟ್ಕಾರ್ಡ್ ವಿತರಿಸಲಾಗುತ್ತಿದೆ. ಸರ್ಕಾರದ ಯೋಜನೆ, ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಜನರಿಗೆ ಯೋಜನೆ ಮತ್ತು ಸೌಲಭ್ಯಗಳನ್ನು ಸಮಪರ್ಕವಾಗಿ ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.
ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಮಾತನಾಡಿ, ಕಾರ್ಮಿಕ ಇಲಾಖೆಯಿಂದ ಬಡವರ, ಕಾರ್ಮಿಕ ವರ್ಗದವರ ಕಷ್ಟಗಳ ಬಗ್ಗೆ ಅರಿತಿರುವ ಸಚಿವ ಸಂತೋಷ್ ಲಾಡ್ ಅವರು, ಅನೇಕ ಜನಕಲ್ಯಾಣ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾರ್ಮಿಕ ಇಲಾಖೆ ಮೂಲಕ ಅರ್ಹ ಫಲಾನುಭವಿಗಳಿಗೆ ತಲುಪಿಸುತ್ತಿದ್ದಾರೆ. ಈ ಹಿಂದೆ ಕಾರ್ಮಿಕ ಇಲಾಖೆಯಲ್ಲಿ ಮಾತ್ರ ಕಾರ್ಮಿಕ ದಿನಾಚರಣೆಯನ್ನು ಆಚರಿಸಲಾಗುತ್ತಿತ್ತು. ಆದರೆ ಸಚಿವ ಲಾಡ್ ಅವರಿಂದ ಪ್ರಸ್ತುತ ಮೇ 01ರಂದು ಎಲ್ಲಾ ಇಲಾಖೆ ಹಾಗೂ ಸರ್ಕಾರಿ ಕಚೇರಿಗಳು ಸೇರಿದಂತೆ ವಿವಿಧ ಸಂಸ್ಥೆಗಳಲ್ಲಿಯೂ ಆಚರಿಸಲಾಗುತ್ತದೆ ಎಂದರು.
ವಿವಿಧ ಸೌಲಭ್ಯಗಳ ವಿತರಣೆ :
ಕಾರ್ಯಕ್ರಮದಲ್ಲಿ ಅಪಘಾತದಿಂದ ಮರಣ ಹೊಂದಿದ ಖಾಸಗಿ ವಾಣಿಜ್ಯ ಚಾಲಕರ ಅವಲಂಬಿತ ಮಹಿಳೆ ಜಗಳೂರಿನ ಗೌರಮ್ಮನವರಿಗೆ ರೂ.5 ಲಕ್ಷ ಪರಿಹಾರ ಧನ, ಅಪಘಾತದಿಂದ ಮರಣ ಹೊಂದಿದ ಖಾಸಗಿ ವಾಣಿಜ್ಯ ವಾಹನ ಚಾಲಕರ ಮಕ್ಕಳಿಗೆ ರೂ.10,000 ಶೈಕ್ಷಣಿಕ ಧನಸಹಾಯದ ಚೆಕ್ ಹಾಗೂ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡುಗಳನ್ನು ವಿತರಿಸಲಾಯಿತು.
ಕಾರ್ಮಿಕ ಆಯುಕ್ತ ಡಾ.ಎಚ್.ಎನ್. ಗೋಪಾಲಕೃಷ್ಣ ಸಂವಿಧಾನ ಪೀಠಿಕೆ ಬೋಧಿಸಿದರು. ಉಪ ಕಾರ್ಮಿಕ ಆಯುಕ್ತ ಡಾ.ವೆಂಕಟೇಶ್ ಶಿಂದಿಹಟ್ಟಿ ಸ್ವಾಗತಿಸಿದರು. ಜಂಟಿ ಕಾರ್ಮಿಕ ಆಯುಕ್ತ ಡಾ. ಎಸ್.ಬಿ. ರವಿಕುಮಾರ್ ಪ್ರಸ್ತಾವಿಕವಾಗಿ ಮಾತನಾಡಿದರು. ಚೇತನ್ ಹಾಗೂ ಸಂಡಿಗರ ಕಲಾತಂಡ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.
ಹೊನ್ನಾಳಿ ಶಾಸಕ ಡಿ.ಜಿ.ಶಾಂತನೌಡ, ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಿನೇಶ್ ಕೆ ಶೆಟ್ಟಿ, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿ.ಪಂ.ಸಿಇಓ ಗಿತ್ತೆ ಮಾಧವ ವಿಠಲ ರಾವ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
TAGGED:Dinamana.comDistribution of smart cards to workersKannada NewsMinister Santosh Ladಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article National Lok Adalat ರಾಷ್ಟ್ರೀಯ ಲೋಕ್ ಆದಾಲತ್ | 23 ವೈವಾಹಿಕ ಪ್ರಕರಣಗಳ ರಾಜೀ , ಸಹಬಾಳ್ವೆ ನಡೆಸಲು ದಂಪತಿಗಳು ನಿರ್ಧಾರ
Next Article Bhadra dam ಭದ್ರಾ ಜಲಾಶಯದಲ್ಲಿ 175.6 ಅಡಿ ನೀರು  

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

JJM Medical College : ಗ್ರಾಮೀಣ ವೈದ್ಯರ ಸೇವೆ ಎಲ್ಲರಿಗೂ ಸ್ಪೂರ್ತಿ : ಡಾ. ಸಂಪನ್ನ ಮುತಾಲಿಕ್  

ದಾವಣಗೆರೆ : ಗ್ರಾಮೀಣ ಪ್ರದೇಶಗಳಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುವ ವೈದ್ಯರು ಎಲ್ಲಾ ವೈದ್ಯರಿಗೆ ಸ್ಪೂರ್ತಿದಾಯಕವಾಗಬೇಕು, ಇಂತಹ ಸಮಾಜಮುಖಿ ವೈದ್ಯರನ್ನು ಕರೆತಂದು…

By Dinamaana Kannada News

ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಅಹ್ವಾನ

ದಾವಣಗೆರೆ :  ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮಾ ಕೋರ್ಸ್ಗಳಾದ ಡಿಪ್ಲೋಮಾ ಇನ್ ಟೂಲ್ & ಡೈ ಮೇಕಿಂಗ್,…

By Dinamaana Kannada News

ವಕ್ಫ್ ಮಸೂದೆ ಕುರಿತು ಪ್ರಚೋದನಾತ್ಮಕ ಹೇಳಿಕೆ: ಆರೋಪಿಗಳನ್ನು ಬಂಧಿಸಿದ ದಾವಣಗೆರೆ ಪೊಲೀಸ್‌

ದಾವಣಗೆರೆ: ಇತ್ತೀಚಿಗೆ ದಾವಣಗೆರೆ ನಗರದಲ್ಲಿ ವಕ್ಫ್ ಮಸೂದೆ -2025 ಬಿಲ್ ವಿರುದ್ಧವಾಗಿ ಪ್ರಚೋದನಾತ್ಮಕವಾಗಿ ಮಾತನಾಡಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ…

By Dinamaana Kannada News

You Might Also Like

bhadra-dam
ತಾಜಾ ಸುದ್ದಿ

Bhadra dam | ಭದ್ರಾ ಜಲಾಶಯ : ತುಂಬಲು ದಿನಗಣನೆ ಆರಂಭ

By Dinamaana Kannada News
Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?