ದಾವಣಗೆರೆ : ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯ 04 ವರ್ಷ ಕಾರಾಗೃಹ ಶಿಕ್ಷೆ ಹಾಗೂ 10,000/- ರೂ ದಂಡ ವಿಧಿಸಿ ತೀರ್ಪು ನೀಡಿದೆ.
14.2.23 ರಂದು ನಾಗರಾಜ ಎಂಬ ವ್ಯಕ್ತಿಯು ಆಟವಾಡುತ್ತಿದ್ದ ಮಗುವಿಗೆ ಚಾಕಲೇಟ್ ಆಸೆ ತೋರಿಸಿ ನನ್ನ ಅತ್ಯಾಚಾರ ನಡೆಸಿದ್ದಾನೆ ಎಂದು ತಂದೆ ಗ್ರಾಮಾಂತರ ಠಾಣೆಗೆ ದೂರು ದಾಖಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡ ತನಿಖಾಧಿಕಾರಿ ಲಿಂಗನಗೌಡ ನೆಗಳೂರು ತನಿಖೆ ನಡೆಸಿದ್ದಾರೆ.ಸಾಕ್ಷಿದಾರರ ಹೇಳಿಕೆಗಳಿಂದ,ಇತರೆ ದಾಖಲಾತಿಗಳಿಂದ ಆರೋಪ ದೃಢಪಟ್ಟಿದ್ದರಿಂದ ಆರೋಪಿತನ ಮೇಲೆ ದೋಷರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯದಲ್ಲಿ ನ್ಯಾಯಾಧೀಶ ಶ್ರೀರಾಮ ನಾರಾಯಣ ಹೆಗಡೆ ವಿಚಾರಣೆ ನಡೆಸಿದ ವೇಳೆ ಆರೋಪಿ ನಾಗರಾಜ ಮೇಲೆ ಆರೋಪ ಸಾಬೀತಾಗಿದ್ದರಿಂದ 04 ವರ್ಷ ಕಾರಾಗೃಹ ಶಿಕ್ಷೆ ಹಾಗೂ 10,000/- ರೂ ದಂಡ ವಿಧಿಸಿದ್ದು, ಆರೋಪಿತರು ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದುದ್ದರಿAದ ಬಂಧನದ ಅವಧಿಯನ್ನು ಪರಿಗಣಿಸಿ ಶಿಕ್ಷಾ ಅವಧಿಯನ್ನು ಸೆಟ್ ಆಫ್ ಮಾಡಲಾಗಿದೆ.
ಆರೋಪಿತರಿಂದ ವಸೂಲುಮಾಡಿದ ದಂಡದ ಒಟ್ಟು ಮೊತ್ತ 10,000/-ರೂಗಳನ್ನು ಪ್ರಕರಣದ ಸಂತ್ರಸ್ಥೆಗೆ ನೀಡುವಂತೆ ಹಾಗೂ ಸಂತ್ರಸ್ಥೆಗೆ ಸರ್ಕಾರದಿಂದ 50 ಸಾವಿರ ರೂ ಪರಿಹಾರ ನೀಡುವಂತೆ ತೀರ್ಪು ನೀಡಿರುತ್ತದೆ. ಸರ್ಕಾರಿ ವಕೀಲರಾದ ಬಸವರಾಜ್ ಎ. ಎಂ ರವರು ನ್ಯಾಯ ಮಂಡನೆ ಮಾಡಿರುತ್ತಾರೆ.
Read also : ದಾವಣಗೆರೆ | ಅಂತರ್ ರಾಜ್ಯ ಕಳ್ಳರ ಬಂಧನ 01 ಲಕ್ಷ ನಗದು ವಶಕ್ಕೆ
ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ ತನಿಖಾಧಿಕಾರಿ ಸಿಪಿಐ ಲಿಂಗನಗೌಡ ನೆಗಳೂರು, ಸರ್ಕಾರಿ ವಕೀಲ ಬಸವರಾಜ್ ಎ. ಎಂ ಎಸ್ಪಿ ಉಮಾ ಪ್ರಶಾಂತ್ ಶ್ಲಾಘೀಸಿದ್ದಾರೆ.