ದಾವಣಗೆರೆ : ಪ್ರಸಕ್ತ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯಿಂದ ಫಲಾನುಭವಿ ಆಧಾರಿತ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ಪಂಚಾಯತ್ ಯೋಜನೆಗಳಲ್ಲಿ ಪ.ಜಾತಿ ಮತ್ತು ಪ.ಪಂಗಡದ ಮೀನುಗಾರರಿಗೆ ಮೀನುಗಾರಿಕೆ ಸಲಕರಣೆ ಕಿಟ್ಟುಗಳ ವಿತರಣೆ, ಫೈಬರ್ ಗ್ಲಾಸ್ ಹರಿಗೋಲು ವಿತರಣೆ ಯೋಜನೆ, ಮತ್ಸ್ಯವಾಹಿನಿ ಮತ್ತು ಮೀನು ಮಾರಾಟಕ್ಕೆ ಸಹಾಯ, ಮೀನು ಸಾಕಾಣಿಕೆ ವಾಹನ ಖರೀದಿಗೆ ಸಹಾಯ ಯೋಜನೆಗಳ ಸೌಲಭ್ಯವನ್ನು ಪಡೆಯಬಹುದು.
ಅರ್ಜಿ ಸಲ್ಲಿಸಲು ಆಗಸ್ಟ್ 20 ರೊಳಗಾಗಿ ಆಯಾ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗಳಿಗೆ ಸಲ್ಲಿಸಲು ಮೀನುಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.
Read also : ದಾವಣಗೆರೆ | ಪಾವತಿ ಆಧಾರದ ಮೇಲೆ ಫಿಜಿಯೋಥೆರಪಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ