Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಜೀವನದಲ್ಲಿ ಸವಾಲು ಎದುರಿಸುವ ಕಠಿಣ ನಿರ್ಧಾರ ಮಾಡಿದರೆ ಸಾಧನೆ ಕಷ್ಟವೇನಲ್ಲ: ಜಿ. ಬಿ. ವಿನಯ್ ಕುಮಾರ್
ತಾಜಾ ಸುದ್ದಿ

ಜೀವನದಲ್ಲಿ ಸವಾಲು ಎದುರಿಸುವ ಕಠಿಣ ನಿರ್ಧಾರ ಮಾಡಿದರೆ ಸಾಧನೆ ಕಷ್ಟವೇನಲ್ಲ: ಜಿ. ಬಿ. ವಿನಯ್ ಕುಮಾರ್

Dinamaana Kannada News
Last updated: July 23, 2025 1:51 pm
Dinamaana Kannada News
Share
G. B. Vinay Kumar
SHARE

ದಾವಣಗೆರೆ: ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಎದುರಿಸಲು ಸಿದ್ಧರಾಗಬೇಕು. ನಿಮ್ಮದೇ ಆದ ಸೀಮಿತ ಚೌಕಟ್ಟಿನೊಳಗೆ ಇರದೇ ಹೊರಗೆ ಬಂದು ಸಾಧನೆ ಮಾಡಲೇಬೇಕೆಂಬ ಛಲ ಹೊಂದಿದರೆ ಯಾವುದೂ ಅಸಾಧ್ಯವಲ್ಲ ಎಂದು ಇನ್ ಸೈಟ್ಸ್ ಸಂಸ್ಥೆ ಸಂಸ್ಥಾಪಕ ನಿರ್ದೇಶಕ ಜಿ. ಬಿ. ವಿನಯ್ ಕುಮಾರ್ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ನಗರದ ಟ್ರಿನಿಟಿ ಕಾಲೇಜಿನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ತಂದೆ ತಾಯಿಗೆ ನೀವು ಉತ್ತಮ ಕೆಲಸಕ್ಕೆ ಹೋಗಬೇಕೆಂಬ ಕನಸು ಇರುತ್ತದೆ. ಆದ್ರೆ, ನೀವು ಯಾವ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದೀರೋ ಆ ಕ್ಷೇತ್ರದಲ್ಲಿ ಮುನ್ನಡೆಯಲು ಬಿಡದಿದ್ದಾಗ ರೆಬಲ್ ಆಗುತ್ತೀರಾ. ಹಾಗಾಗಿ, ಈಗಿನಿಂದಲೇ ಮುಂದೆ ಏನು ಮಾಡಬೇಕೆಂಬ ದೃಢ ನಿರ್ಧಾರಕ್ಕೆ ಬನ್ನಿ. ಸಂಕಲ್ಪ ತೊಡಿ. ಸಾಧಿಸಿಯೇ ತೀರುತ್ತೇವೆಂಬ ಕಠಿಣ ನಿರ್ಧಾರ ತಳೆದರೆ ಸಾಧನೆ ಕಷ್ಟವಾಗದು ಎಂದು ಅಭಿಪ್ರಾಯಪಟ್ಟರು.

ಇಂದು Aiನಂಥ ತಂತ್ರಜ್ಞಾನವೂ ಬಂದಿದೆ. ಇದಕ್ಕೆ ವಿದ್ಯಾರ್ಥಿ ಸಮೂಹ ಒಗ್ಗಿಗೊಳ್ಳಬೇಕು. ಎಲ್ಲವೂ ಮಾನವರಿಂದಲೇ ಆಗುತ್ತದೆ ಎಂಬುದು ಭವಿಷ್ಯದಲ್ಲಿ ಊಹಿಸಿಕೊಳ್ಳುವುದು ಕಷ್ಟ. ತಂತ್ರಜ್ಞಾನ ಬೆಳೆದಂತೆ ನಾವೂ ಆಲೋಚನಾ ಕ್ರಮದ ಜೊತೆಗೆ ಕಲಿಯಲೇಬೇಕಾದ ಅವಶ್ಯಕತೆ ಇದೆ. ಮನಸ್ಸಿದ್ದರೆ ಮಾರ್ಗ ಎಂಬಂತೆ ಕಷ್ಟಪಟ್ಟು ದುಡಿದರೆ, ಹೆಚ್ಚು ಹೆಚ್ಚು ಪುಸ್ತಕ ಓದಿದರೆ, ಜ್ಞಾನ, ಆಕರ್ಷಕ ವ್ಯಕ್ತಿತ್ವ, ಗುಣಗಳನ್ನು ಬೆಳೆಸಿಕೊಂಡರೆ ಅವಕಾಶಗಳು ನಿಮ್ಮನ್ನು ಹುಡುಕಿಕೊಂಡು ಬರುತ್ತವೆ ಎಂದು ಸಲಹೆ ನೀಡಿದರು.

ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಿ. ಕನ್ನಡ ಜೊತೆಗೆ ಇಂಗ್ಲೀಷ್ ನಲ್ಲೂ ಮಾತನಾಡಿ. ಭಾಷಾ ಜ್ಞಾನ ವಿದ್ಯಾರ್ಥಿಗಳಿಗೆ ಅತ್ಯವಶ್ಯಕ. ಪಠ್ಯಪುಸ್ತಕದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ. ಫ್ಯಾಷನ್, ಕಲೆ, ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿಯೂ ಪಾಲ್ಗೊಳ್ಳಿ. ಯಾವುದೇ ಹಿಂಜರಿಕೆಯಿಲ್ಲದೇ ನಿಮಗೆ ಇರುವ ಆಸಕ್ತಿಯನ್ನು ತೋರ್ಪಡಿಸಿ ಎಂದು ಹೇಳಿದರು.

Read also : ರಸಗೊಬ್ಬರ ಕೊರತೆಯಾಗದಂತೆ ಅಗತ್ಯ ಕ್ರಮವಹಿಸಿ, 3 ದಿನಗಳಲ್ಲಿ 2 ಸಾವಿರ ಮೆಟ್ರಿಕ್ ಟನ್ ಯೂರಿಯಾ ಪೂರೈಕೆ : ಡಿಸಿ

ಇಂದು ಸರ್ಕಾರಿ ಕೆಲಸಗಳಲ್ಲಿ ಕೆಳಹಂತದ ನೌಕರರು ಮೇಲಿನ ಅಧಿಕಾರಿಗಳಿಗಿಂತ ಬುದ್ದಿವಂತರಾಗಿದ್ದರೆ ಸ್ಯಾಡಿಸಂ ಇರುತ್ತದೆ. ಹಾಗಾಗಿ, ಎಲ್ಲಾ ಕಡೆಗಳಲ್ಲಿಯೂ ನಮ್ಮ ಪ್ರತಿಭೆ, ಕೌಶಲ್ಯ, ಬುದ್ದಿವಂತಿಕೆ ತೋರ್ಪಡಿಸಿದರೆ ಸಹಿಸಿಕೊಳ್ಳುವುದಿಲ್ಲ. ಆದ್ರೆ, ಐಎಎಸ್, ಐಪಿಎಸ್, ಕೆಎಎಸ್ ನಂಥ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಜ್ಜಾಗಿ ಯಶಸ್ವಿಯಾಗಬೇಕು. ಇದಕ್ಕಾಗಿ ಹೆಚ್ಚು ಪುಸ್ತಕಗಳನ್ನು ಓದಿ ಜ್ಞಾನ ಸಂಪಾದನೆ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಕಲೆಯ ಮೂಲಕವೂ ಯಶಸ್ಸು ಸಾಧಿಸಬಹುದು. ನಟ ಶಿವರಾಜ್ ಕುಮಾರ್, ದುನಿಯಾ ವಿಜಿ ಅವರೂ ಸೇರಿದಂತೆ ಹಲವು ನಟರು ಅದ್ಭುತ ಮಾನವೀಯತೆ ಗುಣವುಳ್ಳವರು, ಅದ್ಭುತ ನಟರು. ನಟನೆಯಿಂದ ಎಲ್ಲರ ಮನ ಗೆದ್ದವರು. ಯಾಕೆಂದರೆ ಅವರ ಪರಿಶ್ರಮ, ರೂಪಿಸಿಕೊಂಡ ವ್ಯಕ್ತಿತ್ವ, ಮೌಲ್ಯಗಳು ಕಾರಣ. ಹಾಗಾಗಿ, ವಿದ್ಯಾರ್ಥಿಗಳು ಉತ್ತಮ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.

ನೀವು ಕನಸು ಕಾಣದಿದ್ದರೆ ಈಡೇರಿಸಿಕೊಳ್ಳಲು ಸಾಧ್ಯವಿಲ್ಲ. ಸಾಧನೆ ಮಾಡದಿದ್ದರೆ ದೇಶಕ್ಕೆ, ರಾಜ್ಯಕ್ಕೆ, ಜಿಲ್ಲೆಗೆ, ಊರಿಗೆ, ಮನೆಗೂ ಭಾರ ಆಗುತ್ತೀರಾ. ಇನ್ ಸೈಟ್ಸ್ ಸಂಸ್ಥೆಯಲ್ಲಿ ಓದಿದವರು ಅತ್ಯುನ್ನತ ಹುದ್ದೆಯಲ್ಲಿದ್ದಾರೆ. ಡಿಸಿ, ಎಸ್ಪಿ, ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದಾರೆ. ನಾನಂತೂ ಐಎಎಸ್ ಆಗಲಿಲ್ಲ ಎಂದು ಹೇಳಿದರು.

ಶ್ರೀ ಗೌತಮ್ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ವಿಜಯ್, ಕಾರ್ಯದರ್ಶಿಗಳಾದ ವರ್ಷ ವಿ. ಜೈನ್, ನಿರ್ದೇಶಕರಾದ ಮೋಕ್ಷ ವಿ. ಚವ್ಹಾಣ್, ಕಾಲೇಜಿನ ಪ್ರಾಂಶುಪಾಲರಾದ ಡಾ. ರೇಖಾ ಕೆ.ಎಂ ಹಾಗೂ ಕಾಲೇಜಿನ ಅಧ್ಯಾಪಕರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಬಳಿಕ ಕಾಲೇಜ್ ನ ಆಡಳಿತ ಮಂಡಳಿ ವತಿಯಿಂದ ಜಿ. ಬಿ. ವಿನಯ್ ಕುಮಾರ್ ಅವರನ್ನು ಸನ್ಮಾನಿಸಿ ಸ್ಮರಣಿಕೆ ನೀಡಿ ಗೌರವಿಸಿದರು.

ನಾನು ಸೋತಿದ್ದರೂ ಸುಮ್ಮನೆ ಕುಳಿತಿಲ್ಲ: ಜಿಬಿವಿ

ನಾನು ಜೀವನದಲ್ಲಿ ಸವಾಲು ತೆಗೆದುಕೊಂಡೆ. ಪಕ್ಷೇತರ ಅಭ್ಯರ್ಥಿಯಾಗಿ ದಾವಣಗೆರೆ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದೆ. ನನಗೆ ಯಾವ ರಾಜಕೀಯ ಹಿನ್ನೆಲೆ ಇಲ್ಲದಿದ್ದರೂ ಸವಾಲಾಗಿ ತೆಗೆದುಕೊಂಡು ಕಣಕ್ಕಿಳಿದೆ. ಟಿಕೆಟ್ ಸಿಗದಿದ್ದರೂ ಇಡೀ ಕರ್ನಾಟಕ ರಾಜ್ಯದಲ್ಲಿ ಸ್ಪರ್ಧೆ ಮಾಡಿದ್ದ ಎಲ್ಲಾ ಪಕ್ಷೇತರ ಅಭ್ಯರ್ಥಿಗಳಿಗಿಂತ ಹೆಚ್ಚು ಮತ ಪಡೆದ ಪಕ್ಷೇತರ ಅಭ್ಯರ್ಥಿಯಾದೆ. ಕಠಿಣ ಪರಿಶ್ರಮ, ಪ್ರಾಮಾಣಿಕತೆ, ಜನರ ನಂಬಿಕೆ ಉಳಿಸಿಕೊಂಡೆ. ಲೋಕಸಭೆ ಚುನಾವಣೆ ಬಳಿಕ ಬೀದರ್, ಚಾಮರಾಜನಗರ, ಮೈಸೂರು ಸೇರಿದಂತೆ ಎಲ್ಲೆಡೆ ಕಾರ್ಯಕ್ರಮಗಳಿಗೆ ಹೋಗುತ್ತಿದ್ದೇನೆ. ಸೋಲಿಸಿದರೂ ಸುಮ್ಮನೆ ಕುಳಿತಿಲ್ಲ. ರಾಜ್ಯಾದ್ಯಂತ ಓಡಾಡುತ್ತಿದ್ದೇನೆ ಎಂದು ಜಿ. ಬಿ. ವಿನಯ್ ಕುಮಾರ್ ಹೇಳಿದರು.

TAGGED:Dinamana.comKannada Newsಕನ್ನಡ ಸುದ್ದಿಜಿ.ಬಿ.ವಿನಯ್ ಕುಮಾರ್ದಿನಮಾನ.ಕಾಂ
Share This Article
Twitter Email Copy Link Print
Previous Article District Collector G.M. Gangadharaswamy ರಸಗೊಬ್ಬರ ಕೊರತೆಯಾಗದಂತೆ ಅಗತ್ಯ ಕ್ರಮವಹಿಸಿ, 3 ದಿನಗಳಲ್ಲಿ 2 ಸಾವಿರ ಮೆಟ್ರಿಕ್ ಟನ್ ಯೂರಿಯಾ ಪೂರೈಕೆ : ಡಿಸಿ
Next Article Electrical accident: Three people die ಚಿಕ್ಕಜಾಜೂರು |ವಿದ್ಯುತ್ ಅವಘಡ: ಮೂವರ ದುರ್ಮರಣ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಬಡವರ ಕಲ್ಪತರು ಶ್ರೀನಿವಾಸ್: ದಾವಣಗೆರೆ ಕಾಂಗ್ರೆಸ್ ನಲ್ಲಿ ಗಮನ ಸೆಳೆಯುತ್ತಿರುವ ಯುವ ನಾಯಕ

ಒಳ್ಳೆಯ ಉದ್ದೇಶ, ಸತ್ಯ ಸಂಧತೆ ಮತ್ತು ಅನಂತ ಪ್ರೇಮ, ಇವು ಜಗತ್ತನ್ನೇ ಗೆಲ್ಲಬಲ್ಲವು. ಈ ಸದ್ಗುಣಗಳನ್ನು ಹೊಂದಿದ ಒಂದೇ ಒಂದು…

By Dinamaana Kannada News

DAVANAGERE | ಅಂಬೇಡ್ಕರ್ ಅಭಿವೃದ್ದಿ ನಿಗಮದ ವತಿಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ ಡಿ.19 (Davanagere) : ಅಂಬೇಡ್ಕರ್ ಅಭಿವೃದ್ದಿ ನಿಗಮದ ವತಿಯಿಂದ ಸ್ವಯಂ ಉದ್ಯೋಗ ಯೋಜನೆ,(ಕುರಿ ಸಾಕಾಣಿಕೆ) ಸ್ವಾವಲಂಭಿ ಸಾರಥಿ ಯೋಜನೆ…

By Dinamaana Kannada News

ಪೌರ ಕಾರ್ಮಿಕರ ಕಾಯಂಗೆ ಹಣ ವಸೂಲಿ : ಕ್ರಮಕ್ಕೆ ಶಾಸಕ ಕೆ.ಎಸ್.ಬಸವಂತಪ್ಪ ಆಗ್ರಹ

ದಾವಣಗೆರೆ (Davangere):  ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿರುವ ಎಲ್ಲಾ ಸಾವಿರ ಪೌರಕಾರ್ಮಿಕರನ್ನು ಕಾಯಂಗೊಳಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಆದರೆ, ಕಾಯಂಗೊಳಿಸಲು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ : ಅಕ್ಕಿಯ ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಸಚಿವ ಮುನಿಯಪ್ಪ

By Dinamaana Kannada News
MLA Basavanthappa
ತಾಜಾ ಸುದ್ದಿ

ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

By Dinamaana Kannada News
loka adlat davanagere
Blog

ದಾವಣಗೆರೆ ಲೋಕ್ ಆದಾಲತ್‌ : ಸಹಬಾಳ್ವೆ ನಡೆಸಲು 24 ಜೋಡಿಗಳು ನಿರ್ಧಾರ

By Dinamaana Kannada News
Davanagere
ತಾಜಾ ಸುದ್ದಿ

ಅನಧಿಕೃತ ಪಡಿತರ ಚೀಟಿ ಪತ್ತೆಹಚ್ಚಿ,ಹೊಸ ಪಡಿತರಕ್ಕೆಅವಕಾಶ :ಸಚಿವ ಕೆ.ಹೆಚ್.ಮುನಿಯಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?