ದಾವಣಗೆರೆ : ಒಳಮೀಸಲಾತಿ ಜಾರಿಗೆ ರಾಜ್ಯ ಸರಕಾರ ವಿಳಂಬ ನೀತಿ ಅನುಸರಿಸುವುದನ್ನು ಖಂಡಿಸಿ ಮುಖ್ಯಮಂತ್ರಿಗಳ ವಿರುದ್ದ ಅ.15 ರಂದು ಕಪ್ಪು ಬಟ್ಟೆ ಪ್ರದರ್ಶಿಸುವುದು ಶತಃಸಿದ್ಧ ಎಂದು ಮಾದಿಗ ಮಹಾಸಭಾ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷ ಆಲೂರು ನಿಂಗರಾಜ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರ ತನ್ನ ಹಳೇ ಚಾಳಿಯಂತೆ ಅದೇ ವಿಳಂಬ ಧೋರಣೆಯನ್ನು ಮುಂದುವರಿಸಿದೆ. ಆಗಸ್ಟ್ 1 ಕ್ಕೆ ಸುಪ್ರೀಂಕೋರ್ಟ್ ತೀರ್ಪು ಬಂದು ಒಂದು ವರ್ಷ ಆದರೂ ಕರ್ನಾಟಕ ಸರ್ಕಾರ ಒಳಮೀಸಲಾತಿ ಜಾರಿಯಲ್ಲಿ ವಿಫಲವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜನಾಕ್ರೋಶ ಪ್ರತಿಭಟನೆಗಳು ದೊಡಮಟ್ಟದಲ್ಲಿ ನೆಡೆದಿದ್ದವು . ಈ ಪ್ರತಿಭಟನೆಯಿಂದ ಕರ್ನಾಟಕ ಸರ್ಕಾರ ಎದ್ದು ಕುಂತಿದೆ . ಆದರೆ ನಡಿಗೆ ಶುರು ಮಾಡಿಲ್ಲ . ಕೆಲವರು ಸರ್ಕಾರವನ್ನು ಹಿಂದಕ್ಕೆ ಎಳೆಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನ್ಯಾ ನಾಗಮೋಹನ್ ದಾಸ್ ಅವರ ವರದಿಯನ್ನು ಕರ್ನಾಟಕ ಸರ್ಕಾರ ಸ್ವೀಕರಿಸಿದೆ. ಆದರೆ ವರದಿಯ ಶಿಫಾರಸ್ಸನ್ನು ಜಾರಿ ಮಾಡಲು ಮುಂದಾಗಿಲ್ಲ. ಸರ್ಕಾರದ ಈ ನೆಡೆ ಸರ್ಕಾರ ವಿಳಂಬ ನೀತಿ ಮುಂದುವರೆಸಿರುವುದನ್ನು ತೋರಿಸುತ್ತದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ನಾಯಕತ್ವದ ಛಾತಿ ತೋರಿಸುವಲ್ಲಿ ವಿಫಲರಾಗಿದ್ದಾರೆ. ಕಾಲೆಳೆಯುವವರಿಂದ ಸಿದ್ಧರಾಮಯ್ಯ ಹೊರಬಂದು ನ್ಯಾ ನಾಗಮೋಹನ್ ದಾಸ್ ಅವರ ಶಿಫಾರಸ್ಸಿನ ಅನ್ವಯ ಒಳ ಮೀಸಲಾತಿ ಜಾರಿ ಮಾಡುವ ತೀರ್ಮಾನವನ್ನು ಘೋಷಿಸಬೇಕಿತ್ತು . ಆದರೆ ಈ ನಿರೀಕ್ಷೆ ಹುಸಿಯಾಗಿದೆ ಎಂದರು.
ನ್ಯಾ ಸದಾಶಿವ ಆಯೋಗ,ಮಾಧುಸ್ವಾಮಿ ಆಯೋಗ, ಈಗ ನ್ಯಾ.ನಾಗಮೋಹನ ದಾಸ್ ಆಯೋಗ – ಎಲ್ಲ ಮೂರೂ ಆಯೋಗಗಳು ಕರ್ನಾಟಕದಲ್ಲಿ ಮಾದಿಗ ಮತ್ತು ಅದರ ಉಪಜಾತಿಗಳೆ ಪರಿಶಿಷ್ಟ ಜಾತಿಗಳಲ್ಲಿ ಅತ್ಯಂತ ದೊಡ್ಡ ಸಮೂಹ ಎಂದು ಸ್ಪಷ್ಟವಾಗಿ ಹೇಳಿವೆ . ಎಲ್ಲಾ ಆಯೋಗಗಳು ಮಾದಿಗ ಉಪ ಜಾತಿಗಳ ಗುಂಪಿಗೆ 6% ಮೀಸಲಾತಿಯನ್ನು ನಿಗದಿಪಡಿಸಿವೆ. ಹೀಗಾಗಿ ಸಿದ್ಧರಾಮಯ್ಯ ಸರ್ಕಾರ ಮಾದಿಗರ ಪಾಲಿನ 6% ಮೀಸಲಾತಿಯನ್ನು ಪ್ರತ್ಯೇಕಿಸಿ ಘೋಷಿಸಲಿ. ಉಳಿದ ಹಂಚಿಕೆಯನ್ನು ನಿಧಾನವಾಗಿ ಮಾಡಲಿ ಎಂದು ಆಗ್ರಹಿಸಿದರು.
Read also :ಹರಿಹರ|ಅಪ್ರಾಪ್ತ ಚಾಲಕ ಬೊಲೆರೊಜೀಪ್ ಚಾಲನೆ : ಮಾಲೀಕನಿಗೆ 25 ಸಾವಿರ ದಂಡ
ಕರ್ನಾಟಕ ಸರ್ಕಾರ ಮಾದಿಗರಿಗೆ ಪ್ರತ್ಯೇಕ ಶೇ 6 ರ ಮೀಸಲಾತಿಯನ್ನು ವಿಧಾನಸಭಾ ಅಧಿವೇಶನದ ಮೊದಲ ದಿನವೇ ಘೋಷಿಸಬೇಕು . ಇಲ್ಲವಾದರೆ ಮತ್ತೆ ಮಾದಿಗ ಸಂಬAಧಿತ ಜಾತಿಗಳು ಬೀದಿಗೆ ಇಳಿದು ಉಗ್ರ ಹೋರಾಟಕ್ಕೆ ಕೈ ಹಾಕಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.