ದಾವಣಗೆರೆ: ಶ್ರೀ ಹಿಂದೂಸ್ತಾನ್ ಕಟ್ಟಡ ಮತ್ತು ಇತರೆ ಕಾರ್ಮಿಕರ ಸಂಘದ ವತಿಯಿಂದ ನಗರದ ಭಟ್ಟಿ ಲೇಔಟ್‍ನಲ್ಲಿರುವ ಯೂನಿಯನ್ ಕಛೇರಿಯಲ್ಲಿ ವಿವಿಧ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣಾ ಕಾರ್ಯಕ್ರಮವನ್ನು ದಾವಣಗೆರೆ ದಕ್ಷಿಣ ವಿಭಾಗದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್, ಕಾರ್ಮಿಕ ಇಲಾಖೆಯ ಅಧಿಕಾರಿ ಅರವಿಂದ್. ಕಾಂಗ್ರೆಸ್ ಮುಖಂಡ ಎಸ್. ಎಲ್ ಆನಂದಪ್ಪ ಮತ್ತು ಆಜಾದ್ ನಗರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಅಶ್ವಿನ್ ಕುಮಾರ್ ಆರ್.ಜಿ. ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿದರು.
ದಕ್ಷಿಣ ವಿಭಾಗದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್ . ಕಾಂಗ್ರೆಸ್ ಮುಖಂಡರಾದ ಎಸ್.ಎಲ್. ಆನಂದಪ್ಪ. ಕೊಡಪಾನ ದಾದಾಪೀರ್ ಕಾರ್ಮಿಕ ಅಧಿಕಾರಿಗಳೊಂದಿಗೆ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ನೆರವು ಮತ್ತು ಸಹಾಯ ಕಲ್ಪಿಸುವಂತೆ ಮನವಿ ಮಾಡಿದರು.
ಅಸಂಘಟಿತ ವಲಯದ ಕಾರ್ಮಿಕರಿಗೆ ಸರಕಾರದಿಂದ ದೊರೆಯುವ ವಿವಿಧ ಸೌಲಭ್ಯಗಳ ಬಗ್ಗೆ ವಿವರವಾಗಿ ತಿಳಿಸಿದರು.
ಕಾರ್ಮಿಕ ಸಚಿವ ಸಂತೋಷ್ ಲಾಡ್, ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ , ದಾವಣಗೆರೆ ದಕ್ಷಿಣ ಭಾಗದ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಮತ್ತು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಬೆಂಬಲದಿಂದ ಕಾರ್ಮಿಕರ ಅಭಿವೃದ್ಧಿಗಾಗಿ ಸರ‍್ಕಾರ ಕೈಗೊಂಡಿರುವ ಕ್ರಮಗಳನ್ನು ಪ್ರಶಂಸಿಸಲಾಯಿತು.
ಈಸ್ಮಾರ್ಟ್ ಕಾರ್ಡ್ ಬಳಸಿಕೊಂಡು ಮುಂದಿನ ದಿನಗಳಲ್ಲಿ ಶಿಕ್ಷಣ, ಆರೋಗ್ಯ ಮತ್ತು ಪಿಂಚಣಿ ಯೋಜನೆಗಳಂತಹ ಸೌಲಭ್ಯಗಳನ್ನು ಪಡೆಯುವಂತೆ ಕಾರ್ಮಿಕರಿಗೆ ಸಲಹೆ ನೀಡಿದರು.
ಶ್ರೀಹಿಂದೂಸ್ತಾನ್ ಕಟ್ಟಡ ಮತ್ತು ಇತರೆ ಕಾರ್ಮಿಕರ ಸಂಘದ ಅಧ್ಯಕ್ಷ ಮೊಹಮ್ಮದ್ ಖಾಸೀಂ ಮತ್ತು ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ನವಾಜ್ ಮಾತನಾಡಿ, ಕಟ್ಟಡ ಕಾರ್ಮಿಕರಿಗೆ ನಕಲಿ ಕಾರ್ಡ್‌ಗಳನ್ನು ಬಳಸುತ್ತಿರುವವರು ಸ್ವಯಂಪ್ರೇರಿತವಾಗಿ ತಮ್ಮ ಕಾರ್ಡ್ ರದ್ದುಪಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.
Read also : ದಾವಣಗೆರೆ |ʼರಕ್ಷಾ ಬಂಧನ’ ಒಂದು ಹೃದಯ ಸ್ಪರ್ಶಿ ಆಚರಣೆ
ಪಾಲಿಕೆಯ ಮಾಜಿ ಸದಸ್ಯ ಎ.ಬಿ. ರಹೀಂಸಾಬ್, ದಕ್ಷಿಣ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಕೊಡಪಾನ ದಾದಾಪೀರ್ , ಭಟ್ಟಿ ಲೇಔಟ್‍ನ ಅಧ್ಯಕ ಅಕ್ಬರ್ ಅಲಿ, ಕಾಂಗ್ರೆಸ್ ಮುಖಂಡ ಜಾಕೀರ್ ಅಲಿ , ರೇಣುಕಾ ಎಲ್ಲಮ್ಮ .ಯುವ ಕಾಂಗ್ರೆಸ್ ಮುಖಂಡರಾದ ಬಾಬಾಜಾನ್ ಮತ್ತು ದಾದಾಪೀರ್ (ನೌಷದ್), ಸುಹೀಲ್ ಹಾಗೂ ಸಂಘದ ಇತರೆ ಪದಾಧಿಕಾರಿಗಳು ಉಪಸ್ಥಿತರಿದ್ದರು.