ದಾವಣಗೆರೆ: ಶ್ರೀ ಕಲ್ಪತರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ವತಿಯಿಂದ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 85ಕ್ಕಿಂತ ಹೆಚ್ಚು ಅಂಕ ಗಳಿಸಿದ ಷೇರುದಾರರ ಮಕ್ಕಳಿಗೆ ಹಾಗೂ ಮೊಮ್ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ.
ಅರ್ಹ ವಿದ್ಯಾರ್ಥಿಗಳು ಅಂಕಪಟ್ಟಿಯ ನಕಲು ಪ್ರತಿ, ಭಾವಚಿತ್ರ ಹಾಗೂ ಪೋಷಕರ ಹೆಸರು, ಷೇರು ಸದಸ್ಯತ್ವ ದೃಢೀಕರಣಕ್ಕಾಗಿ ಗುರುತಿನ ಚೀಟಿ,ನಕಲು ಪ್ರತಿಯೊಂದಿಗೆ ಆ.30ರೊಳಗಾಗಿ ಸೊಸೈಟಿಗೆ ಅರ್ಜಿ ಸಲ್ಲಿಸಬಹುದು. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ನೀಡಲಾಗುವುದು ಎಂದು ಅಧ್ಯಕ್ಷ ಡಿ ಎನ್ ಜಗದೀಶ್ ಮತ್ತು ಮುಖ್ಯಕಾರ್ಯನಿರ್ವಾಹಕರಾದ ಡಿ.ಆರ್.ಶ್ರೀನಿವಾಸ್ ತಿಳಿಸಿದ್ದು, ಹೆಚ್ಚಿನ ಮಾಹಿತಿಗೆ ಮೊ: 9845784338 ಸಂಪರ್ಕಿಸಬಹುದಾಗಿದೆ.
Read also : ದಾವಣಗೆರೆ : ಪ.ಜಾತಿ, ಪ.ಪಂಗಡದ ಸೈನಿಕರು ಮಾಜಿ ಸೈನಿಕರುಗಳಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ