ದಾವಣಗೆರೆ : ಪ್ರಸಕ್ತ ಸಾಲಿನ ಮೀನುಗಾರಿಕೆ ಇಲಾಖೆ ವತಿಯಿಂದ ರಾಜ್ಯವಲಯ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಗಳ ಯೋಜನೆಗಳಿಗೆ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಮೀನುಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಶೇ.50ರಷ್ಟು ಅಥವಾ ಗರಿಷ್ಠ ರೂ.3 ಲಕ್ಷ ಆರ್ಥಿಕ ನೆರವು ನೀಡಲಾಗುವುದು. ಜಿಲ್ಲೆಗೆ ಪ.ಜಾತಿ-2 ಮತ್ತು ಪ.ಪಂಗಡ-1 ಗುರಿ ನಿಗದಿಪಡಿಸಲಾಗಿದೆ.
Read also : ಶ್ರೀ ವೀರಭದ್ರೇಶ್ವರ ಸ್ವಾಮಿಯ ರುದ್ರಾಭಿಷೇಕ ಪ್ರಸಾದ ಕಾರ್ಯಕ್ರಮ
ಅರ್ಜಿಯನ್ನು ಸೆಪ್ಟೆಂಬರ್ 10 ರೊಳಗಾಗಿ ಆಯಾ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಸಬೇಕೆಂದು ಮೀನುಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.