ದಾವಣಗೆರೆ : ನಗರದ ದಕ್ಷಿಣ ಭಾಗದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇದರಿಂದ ಸ್ಥಳೀಯ ನಿವಾಸಿಗಳು, ಶಾಲಾ ಮಕ್ಕಳು ಮತ್ತು ಕಾರ್ಮಿಕರಿಗೆ ತೊಂದರೆಯಾಗಿದೆ. ಕೂಡಲೇ ಈ ಸಮಸ್ಯೆಯನ್ನು ಪರಿಹರಿಸುವಂತೆ ಒತ್ತಾಯಿಸಿ ಶ್ರೀ ಹಿಂದುಸ್ತಾನ್ ಕಟ್ಟಡ ಮತ್ತು ಇತರೆ ಕಾರ್ಮಿಕರ ಸಂಘದ ಅಧ್ಯಕ್ಷ ಮೊಹಮ್ಮದ್ ಖಾಸಿಂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬೀದಿ ನಾಯಿಗಳಿಂದ ಭಯದ ವಾತಾವರಣ ಉಂಟಾಗಿದೆ. ಸಾರ್ವಜನಿಕರಿಗೆ ಮತ್ತು ಶಾಲಾ ಮಕ್ಕಳಿಗೆ ಸುಗಮವಾಗಿ ಓಡಾಡಲು ಕಷ್ಟವಾಗುತ್ತಿದ್ದು, ಈ ನಾಯಿಗಳನ್ನು ಆದಷ್ಟು ಬೇಗ ಸ್ಥಳಾಂತರಿಸಲು ಕ್ರಮ ಕೈಗೊಳ್ಳುವಂತೆ ಸಂಘವು ಒತ್ತಾಯಿಸಲಾಯಿತು.
ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿಗಳು, ಸಮಸ್ಯೆಯ ಪರಿಹಾರಕ್ಕೆ ಶೀಘ್ರವಾಗಿ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.
Read also : Political analysis | ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು
ಈ ಸಂದರ್ಭದಲ್ಲಿ ಸಂಘದ ಕಾರ್ಯಕರ್ತರು, ಪದಾಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.