ದಾವಣಗೆರೆ : ಸಂತೆಬೆನ್ನೂರು ಠಾಣಾ ವ್ಯಾಪ್ತಿಯ ಕಾಕಾನೂರು ಗ್ರಾಮದ ಹೊರವಲಯದಲ್ಲಿರುವ ಮನೆಯೊಂದರಲ್ಲಿ ಸೆ.6 ರಂದು ರಾತ್ರಿ ದರೋಡೆಕೋರರು ಮನೆಗೆ ನುಗ್ಗಿ ವೃದ್ದರ ಮೇಲೆ ಹಲ್ಲೆ ಮಾಡಿ 8,85,000 ರೂ ಮೌಲ್ಯದ ಬೆಳ್ಳಿ & ಬಂಗಾರದ ಸಾಮಾನುಗಳನ್ನು ದರೋಡೆ ಮಾಡಿಕೊಂಡು ಹೋಗಿರುವ ಹಿನ್ನಲೆಯಲ್ಲಿ ಭಾನುವಾರ ಎಸ್ಪಿ ಉಮಾಪ್ರಶಾಂತ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆರೋಪಿತರ ಪತ್ತೆಗಾಗಿ ತನಿಖಾಧಿಕಾರಿಗಳಿಗೆ ಸೂಕ್ತ ತನಿಖಾ ಸೂಚನೆಗಳನ್ನು ನೀಡಿದರು.
Read also : ಮನೆಕಳ್ಳತನ : ರಾಜಸ್ಥಾನದಲ್ಲಿ ಆರೋಪಿಗಳ ಬಂಧನ, 15 ಲಕ್ಷ ರೂ ಮೌಲ್ಯದ ಸ್ವತ್ತು ವಶಕ್ಕೆ
ಈ ಸಂದರ್ಭದಲ್ಲಿ ಎಎಸ್ಪಿ ಪರಮೇಶ್ವರ ಹೆಗಡೆ ರವರು, ಚನ್ನಗಿರಿ ಎಎಸ್ಪಿ ಸ್ಯಾಮ್ ವರ್ಗೀಸ್, ಸಂತೇಬೆನ್ನೂರು ವೃತ್ತ ನಿರೀಕ್ಷಕ ಲಿಂಗನಗೌಡ ನೆಗಳೂರು ಸೇರಿದಂತೆ ಅಧಿಕಾರಿಗಳ ತಂಡ, ಶ್ವಾನ ದಳ, ಪೊಲೀಸ್ ಅಧಿಕಾರಿ ಸಿಬ್ಬಂದಿಗಳ ತಂಡ ಇದ್ದರು. ಉಪಸ್ಥಿತರಿದ್ದರು.
ಘಟನೆಗೆ ಸಂಬಂಧಿಸಿದಂತೆ ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ ಆರೋಪಿಗಳ ಪತ್ತೆಗಾಗಿ ಪತ್ತೆ ಕಾರ್ಯ ತಂಡ ರಚಿಸಿದ್ದು, ತನಿಖೆ ಕೈಗೊಳ್ಳಲಾಗಿದೆ.