ದಾವಣಗೆರೆ ಸೆ.08 : ಪ್ರಸಕ್ತ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಅಕ್ಟೋಬರ್ 4 ಕೊನೆಯ ದಿನವಾಗಿರುತ್ತದೆ.
ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕಾಗಿ ಇಲಾಖೆಯ ವೆಬ್ ಸೈಟ್ http://bcwd.karnataka.gov.in ನೋಡಬಹುದು.
Read also : ಪಿಎಂ ಅವಾಸ್ ಯೋಜನೆಗೆ ಅಧಿಕಾರಿ, ಸಿಬ್ಬಂದಿ, ಮಧ್ಯವರ್ತಿಗಳಿಗೆ ಹಣ ನೀಡಬೇಡಿ : ಪಾಲಿಕೆ ಆಯುಕ್ತೆ ರೇಣುಕಾ
ಅರ್ಜಿ ಸಲ್ಲಿಸಲು ತೊಂದರೆಗಳಾದಲ್ಲಿ bcwdhelpline@gmail.com ಮುಖಾಂತರ ಅಥವಾ ಜಿಲ್ಲಾ, ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.