Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಪರಿಹಾರ ನೀಡುವುದು ಸಾವಿಗೆ ಸಮಾನವಲ್ಲ: ಸಾಂತ್ವನ ಹೇಳಲು ನೀಡುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ
ತಾಜಾ ಸುದ್ದಿ

ಪರಿಹಾರ ನೀಡುವುದು ಸಾವಿಗೆ ಸಮಾನವಲ್ಲ: ಸಾಂತ್ವನ ಹೇಳಲು ನೀಡುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ

Dinamaana Kannada News
Last updated: September 13, 2025 8:53 am
Dinamaana Kannada News
Share
CM Siddaramay
SHARE
ಮೈಸೂರು : ಸೆ.-13:  ಸರ್ಕಾರ ಸತ್ತವರ ಕುಟುಂಬದವರಿಗೆ ಪರಿಹಾರ ನೀಡುವುದು ಸಾವಿಗೆ ಸಮಾನ ಎಂದಲ್ಲ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲು ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಹಾಸನದಲ್ಲಿ ರಸ್ತೆ ಅಪಘಾತದಲ್ಲಿ ಮಾಡಿದವರ  ಕುಟುಂಬದವರಿಗೆ 5 ಲಕ್ಷ ಪರಿಹಾರ ಘೋಷಣೆ  ಮಾಡಿದ್ದು ಬಿಜೆಪಿ ಅದನ್ನು 10 ಲಕ್ಷಕ್ಕೆ ಏರಿಸಬೇಕೆಂದು ಹೇಳಿರುವ ಬಗ್ಗೆ   ಮುಖ್ಯಮಂತ್ರಿಗಳು  ಮೇಲಿನಂತೆ ಪ್ರತಿಕ್ರಿಯೆ ನೀಡಿದರು.
ಸರ್ಕಾರ ರಸ್ತೆ ಸುರಕ್ಷತಾ ಕಾನೂನು ಜಾರಿ ಮಾಡಿದ್ದು, ಸುರಕ್ಷತಾ ಕ್ರಮಗಳನ್ನು ಗಳನ್ನು ಕೈಗೊಂಡಿದೆ.  ಚಾಲಕರ ತಪ್ಪಿನಿಂದ ಅಪಘಾತವಾಗಿದೆ. ಅದಕ್ಕೆ ಸರ್ಕಾರ ಹೇಗೆ ಹೊಣೆಯಾಗಲು ಸಾಧ್ಯ? ಎಂದರು.
ಮೃತರ ಕುಟುಂಬದವರಿಗೆ ಸಾವಿನ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು ಹಾಸನ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಅವರಿಗೆ ಮೃತರ ಸಂಬಂಧಿಕರನ್ನು ಭೇಟಿ ಮಾಡಿ ಪರಿಹಾರ ಘೋಷಣೆ ಮಾಡುವಂತೆ   ಸೂಚಿಸಿದ್ದೇನೆ ಎಂದರು.

ಆರ್ಥಿಕವಾಗಿ ಹಿಂದುಳಿದಿದ್ದಾರೆ ಎಂದೇ  ಪರಿಹಾರ ನೀಡಿದೆ

ಸತ್ತವರು ಹೆಚ್ಚಾಗಿ ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳಿದ್ದರು ಹಾಗಾಗಿ ಸರ್ಕಾರ ಹೆಚ್ಚಿನ ಪರಿಹಾರ ಒದಗಿಸುತ್ತಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಸರ್ಕಾರ  ಐದು ಲಕ್ಷ ಪರಿಹಾರ ನೀಡಿದೆ. ಮೃತರ ಕುಟುಂಬದವರು ಆರ್ಥಿಕವಾಗಿ ಹಿಂದುಳಿದಿದ್ದಾರೆ ಎಂದೇ  ಪರಿಹಾರ ನೀಡಿದೆ ಎಂದರು.

ವಿರೋಧಪಕ್ಷದವರ ಒತ್ತಡದಿಂದ ಪ್ರಧಾನಿಗಳು ಮಣಿಪುರಕ್ಕೆ 

ಮೂರು ವರ್ಷಗಳ ನಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಣಿಪುರಕ್ಕೆ ಭೇಟಿ ನೀಡುತ್ತಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿ, ಗಲಾಟೆ ಆಗುವಾಗ ಭೇಟಿ ನೀಡದೇ, ಪರಿಸ್ಥಿತಿ ಸುಧಾರಿಸಿದ ಮೇಲೆ ಭೇಟಿ ನೀಡುತ್ತಿದ್ದಾರೆ. ಇಷ್ಟು ವರ್ಷ ಆಯ್ಕೆ ಹೋಗಲಿಲ್ಲ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ವಿರೋಧಪಕ್ಷದವರ ಒತ್ತಡದಿಂದ ಈಗ ಭೇಟಿ ನೀಡುತ್ತಿದ್ದಾರೆ ಎಂದರು.

ಧರ್ಮಸ್ಥಳ ಪ್ರಕರಣ: ತನಿಖೆಯಲ್ಲಿ ವಿಳಂಬವಾಗುತ್ತಿಲ್ಲ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿ ತನಿಖೆ ವಿಳಂಬವಾಗುತ್ತಿರುವುದರ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ವಿಳಂಬವಾಗುತ್ತಿಲ್ಲ. ಎಸ್ ಐ ಟಿ ತನಿಖೆ ಮಾಡುತ್ತಿದ್ದು ಸರ್ಕಾರ ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಹಾಗೆಂದು ಅನಗತ್ಯವಾಗಿ ವಿಳಂಬ ಮಾಡುವಂತಿಲ್ಲ. ನನಗೆ ತಿಳಿದಂತೆ ವಿಳಂಬವಾಗುತ್ತಿಲ್ಲ ಎಂದು ಹೇಳಿದರು.

ದಸರಾ ಒಂದು ಧರ್ಮಕ್ಕೆ ಸೇರಿದ ಕಾರ್ಯಕ್ರಮವಲ್ಲ

ದಸರಾ ಉದ್ಘಾಟಕರ ವಿಚಾರದಲ್ಲಿ    ಉದ್ಘಾಟನೆಗೆ ಅವಕಾಶ ಕೊಡಬಾರದು ಎಂದು ನ್ಯಾಯಾಲಯಕ್ಕೆ ಅರ್ಜಿ ಹಾಕಿರುವ  ಬಗ್ಗೆ ಮಾತನಾಡಿ  ನ್ಯಾಯಾಲಯದಲ್ಲಿ ವಿಷಯ ಇತ್ಯರ್ಥವಾಗಲಿ ಎಂದರು. ದಸರಾ ಒಂದು ಧರ್ಮಕ್ಕೆ ಸೇರಿದ ಕಾರ್ಯಕ್ರಮವಲ್ಲ. ಸಾಂಸ್ಕೃತಿಕವಾಗಿ ಎಲ್ಲ ಧರ್ಮದ ಜನರು ಇದರಲ್ಲಿ ಭಾಗವಹಿಸುತ್ತಾರೆ. ದಸರಾ ನಾಡಹಬ್ಬವಾಗಿದ್ದು, ಒಂದು ಧರ್ಮದವರು ಮಾತ್ರ ಭಾಗವಹಿಸಬೇಕು ಎಂದೇನೂ ಇಲ್ಲ. ಸಾರ್ವತ್ರಿಕ ಹಬ್ಬದಲ್ಲಿ ಎಲ್ಲ ಜಾತಿ ಮತ್ತು ಧರ್ಮದವರು ಭಾಗವಹಿಸಬಹುದು ಎಂದರು.
ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ  ಶಾಂತಿಭಂಗ ಮಾಡುವ ಕೆಲಸ ಮಾಡಿದರೆ ಪೋಲಿಸಿನವರು ಕ್ರಮ ಕೈಗೊಳ್ಳುತ್ತಾರೆ ಎಂದರು.

ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಕ್ರಮ

ಬಿಜೆಪಿ ನಾಯಕರಾದ ಸಿ.ಟಿ ರವಿ,  ಬಸನಗೌಡ ಯತ್ನಾಳ್ ಅವರ ಮೇಲೆ ಎಫ್ಐಆರ್ ದಾಖಲಾಗಿರುವ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳು ಬಿಜೆಪಿಯವರು ಪ್ರಚೋದನಾ ಕಾರಿಯಾದ ಭಾಷಣ ಮಾಡಿದರೆ ಏನು ಮಾಡಬೇಕು? ಶಾಂತಿ ನೆಮ್ಮದಿಯನ್ನು ಕಾಪಾಡುವುದು ಅತ್ಯಂತ ಅವಶ್ಯಕ. ಅದಕ್ಕಾಗಿ ಪ್ರಚೋದನಾಕಾರಿಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಇದು ರಾಜಕಾರಣವಲ್ಲ ಎಂದರು. ಇದು ಹಿಂದೂಗಳನ್ನೇ ಗುರಿಯಾಗಿಸಿ ಮಾಡಿರುವ ಕೃತ್ಯ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ನಾನೂ ಕೂಡ ಒಬ್ಬ ಹಿಂದೂ. ನನ್ನ ಹೆಸರಿನಲ್ಲಿಯೇ ಈಶ್ವರ ಮತ್ತು ರಾಮ ಎರಡೂ ದೇವರ ಹೆಸರಿದೆ ಎಂದರು.
ರಾಜಕಾರಣಕ್ಕಾಗಿ ಆಕ್ಷೇಪ
ಮಹಾರಾಷ್ಟ್ರ ಮುಖ್ಯಮಂತ್ರಿಗಳು ಆಲಮಟ್ಟಿ ಅಣೆಕಟ್ಟನ್ನು  ಎತ್ತರಿಸುವ ಬಗ್ಗೆ  ಆಕ್ಷೇಪ ವ್ಯಕ್ತಪಡಿಸಿರುವ  ಬಗ್ಗೆ ಪ್ರತಿಕ್ರಿಯೆ ನೀಡಿ ನ್ಯಾಯಮಂಡಳಿಯೇ ಅಣೆಕಟ್ಟನ್ನು 519 ಮೀ.ಗಳಿಂದ 524 ಮೀ.ವರೆಗೆ ಏರಿಸಲು 2010 ರಲ್ಲಿ ಹೇಳಿದೆ. 15 ವರ್ಷಗಳಾಗಿದ್ದು ರಾಜಕಾರಣಕ್ಕಾಗಿ ಆಕ್ಷೇಪ ತೆಗೆದಿದ್ದಾರೆ ಎಂದರು.
ಬಿಜೆಪಿ ಮುಖ್ಯಮಂತ್ರಿಗಳಿಗೆ ಪ್ರಧಾನಮಂತ್ರಿ ತಿಳಿ ಹೇಳಬೇಕು
ಗೋವಾ ಮಹದಾಯಿ ಯೋಜನೆಯನ್ನು ಹಾಗೂ ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆಯನ್ನು ವಿರೋಧಿಸುತ್ತಿರುವ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳು ಬಿಜೆಪಿ ಮುಖ್ಯಮಂತ್ರಿಗಳಿಗೆ ಪ್ರಧಾನಮಂತ್ರಿ ತಿಳಿ ಹೇಳಬೇಕು ಎಂದರು.
ಜಾತಿ ಗಣತಿ: ಮತಾಂತರಗೊಂಡ ಜಾತಿಯನ್ನೇ ಪರಿಗಣಿಸಲಾಗುವುದು
ರಾಜ್ಯ ಸರ್ಕಾರ ಕೈಗೊಳ್ಳುತ್ತಿರುವ ಜಾತಿ ಗಣತಿಯಲ್ಲಿ ಹೊಸ ಜಾತಿಗಳನ್ನು ಸರಕಾರ ಸೇರ್ಪಡೆ ಮಾಡುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರ ಕೈಗೊಂಡಿರುವ ಜಾತಿ ಗಣತಿ ಬಗ್ಗೆ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು. ಯಾರಾದರೂ ಮತಾಂತರಗೊಂಡಿದ್ದರೆ ಅವರ ಈಗಿನ ಜಾತಿಯನ್ನೇ ಪರಿಗಣಿಸಲಾಗುವುದು.
Read also : ಪ್ರೊ.ಬಿ.ಕೃಷ್ಣಪ್ಪನವರು ದಲಿತರಲ್ಲಿ ಆತ್ಮಸ್ಥೈರ್ಯ ತುಂಬಿದರು :ಎಂ.ಗುರುಮೂರ್ತಿ
ಮತಾಂತರವಾಗುವುದು ಬೇಡ ಎಂದರೂ ವ್ಯವಸ್ಥೆಯ ಪರಿಣಾಮವಾಗಿ ಮತಾಂತರಗೊಳ್ಳುತ್ತಾರೆ. ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ, ಸಮಾನ ಅವಕಾಶಗಳಿದ್ದರೆ,   ಏಕೆ  ಮತಾಂತರಗೊಳ್ಳುತ್ತಾರೆ? ಅಸ್ಪೃಶ್ಯತೆ ಏಕೆ ಬಂತು, ಅದನ್ನು ನಾವು ಹುಟ್ಟುಹಾಕಿದ್ದೇವೆಯೇ? ಎಂದರು. ಅಸಮಾನತೆ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಧರ್ಮದಲ್ಲಿ ಇದ್ದರೂ ಮತಾಂತರವಾಗಿದ್ದಾರೆ. ಅದು ಅವರ ಹಕ್ಕು ಎಂದರು.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಪ್ರೊ.ಬಿ.ಕೃಷ್ಣಪ್ಪನವರು ದಲಿತರಲ್ಲಿ ಆತ್ಮಸ್ಥೈರ್ಯ ತುಂಬಿದರು :ಎಂ.ಗುರುಮೂರ್ತಿ
Next Article Davanagere ರಿಯಾಯ್ತಿ ದರದಲ್ಲಿ ಬಡ ಪತ್ರಕರ್ತರಿಗೆ ನಿವೇಶನಕ್ಕೆ ಸಿಎಂ ಜೊತೆ ಚರ್ಚಿಸುವೆ: ಕೆ.ವಿ.ಪಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಅಕ್ರಮ ಮದ್ಯ ಮಾರಾಟ ವಿರುದ್ಧ ದ್ವನಿ ಎತ್ತಿದ್ದ ಮಹಿಳೆಗೆ ನಿಂದನೆ : ಬೇಸೆತ್ತು ನೇಣಿಗೆ ಶರಣಾದ ಮಹಿಳೆ

ದಾವಣಗೆರೆ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವಿಷಯಕ್ಕೆ ಸಂಬಂಧಿಸಿದಂತೆ ಜಗಳ ನಡೆದು ಮಹಿಳೆಯೊಬ್ಬಳು ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ…

By Dinamaana Kannada News

ಮೇ 16 ರಂದು ರಾಷ್ಟ್ರೀಯ ಡೆಂಗ್ಯು ದಿನ

ದಾವಣಗೆರೆ-  ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದ ಅನ್ವಯ ಏ.25ರಂದು ವಿಶ್ವ ಮಲೇರಿಯಾ ದಿನ ಹಾಗೂ ಮೇ 16ರಂದು…

By Dinamaana Kannada News

Davanagere | ಅಪ್ರಾಪ್ತ ಬಾಲಕಿ ಅಪಹರಿಸಿ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ   

ದಾವಣಗೆರೆ (Davanagere): ಅಪ್ರಾಪ್ತ ಬಾಲಕಿ ಅಪಹರಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯ 20…

By Dinamaana Kannada News

You Might Also Like

CEO Gitte Madhava Vitthal Rao
ತಾಜಾ ಸುದ್ದಿ

ಕುಷ್ಠರೋಗ ನಿವಾರಣೆಗೆ ಅರಿವು ಮೂಡಿಸಿ : ಸಿಇಓ ಗಿತ್ತೆ ಮಾಧವ ವಿಠಲ ರಾವ್

By Dinamaana Kannada News
Davanagere
ತಾಜಾ ಸುದ್ದಿ

ಮೈಕ್ರೋ ಫೈನಾನ್ಸ್ ನವರು ಕಿರುಕುಳ ನೀಡಿದರೆ ದೂರು ನೀಡಿ : ಎಸ್ಪಿ

By Dinamaana Kannada News
vinaykumara G B
ತಾಜಾ ಸುದ್ದಿ

ಯಾರೂ ಕರೆದು ಅವಕಾಶ ಕೊಡಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು: ವಿನಯ್ ಕುಮಾರ್  

By Dinamaana Kannada News
Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?