ದಾವಣಗೆರೆ: ರಸಗೊಬ್ಬರದ ಬೆಲೆ ಏರಿಕೆ ವಿರುದ್ಧ ಸರ್ಕಾರದ ವಿರುದ್ಧ ಪ್ರತಿಭಟಿಸಿದ ಸಂದರ್ಭದಲ್ಲಿ ಪೋಲೀಸ್ ಗೋಲಿಬಾರ್‌ಗೆ ಬಲಿಯಾದ ರೈತ ಮುಖಂಡ ಒಬೇನಳ್ಳಿ ಕಲ್ಲಿಂಗಪ್ಪ ಮತ್ತು ಸಿದ್ದನೂರು ನಾಗರಾಜಾಚಾರ್ ಅವರುಗಳ 33ನೇ ವರ್ಷದ ದಿನಾಚರಣೆ ಹಿನ್ನೆಲೆಯಲ್ಲಿ ಆನಗೋಡಿನ ಉಳುಪಿನಕಟ್ಟೆ ಕ್ರಾಸ್, ರಾಷ್ಟ್ರೀಯ ಹೆದ್ದಾರಿ 48ರ ಪಾರ್ಕ್ ಪಕ್ಕ ಇರುವ ರೈತ ಹುತಾತ್ಮ ಸ್ಮಾರಕ ಸ್ಥಳದಲ್ಲಿ ರೈತ ಹುತಾತ್ಮರಿಗೆ ಶನಿವಾರ ಶಾಸಕ ಕೆ.ಎಸ್.ಬಸವಂತಪ್ಪ ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, 1992ರಲ್ಲಿ ಕೇಂದ್ರ ಸರ್ಕಾರದ ರಸಗೊಬ್ಬರ ಬೆಲೆ ಏರಿಕೆ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಇಬ್ಬರು ರೈತರು ಪೊಲೀಸರ ಗುಂಡೇಟಿಗೆ ಬಲಿಯಾಗಿ ಹುತಾತ್ಮರಾಗಿದ್ದರು. ಈಗಲೂ ರೈತರ ಬದುಕು ಹಸನಾಗಿಲ್ಲ ಎಂದು ಹೇಳಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಇದ್ದರು.