Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮುಖ್ಯಮಂತ್ರಿ ಸಿದ್ದರಾಮಯ್ಯ ಅಂದರೆ ಕೇವಲ ವ್ಯಕ್ತಿ ಅಲ್ಲ, ಒಂದು ಸಿದ್ಧಾಂತ : ಕೆ.ವಿ.ಪ್ರಭಾಕರ್
ತಾಜಾ ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅಂದರೆ ಕೇವಲ ವ್ಯಕ್ತಿ ಅಲ್ಲ, ಒಂದು ಸಿದ್ಧಾಂತ : ಕೆ.ವಿ.ಪ್ರಭಾಕರ್

Dinamaana Kannada News
Last updated: September 14, 2025 11:42 am
Dinamaana Kannada News
Share
Davanagere
SHARE
ಬೆಳಗಾವಿ ಸೆ 14: ಮುಖ್ಯಮಂತ್ರಿ ಸಿದ್ದರಾಮಯ್ಯ ಅಂದರೆ ಕೇವಲ ಒಬ್ಬ ವ್ಯಕ್ತಿಯಲ್ಲ. ಒಂದು ಸಿದ್ದಾಂತ. ಬೆವರಿನ‌ ಸಂಸ್ಕೃತಿಗೆ ಮೌಲ್ಯ ಮತ್ತು ಘನತೆ ತಂದು ಕೊಡುವ ಸಿದ್ಧಾಂತ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಜಿಲ್ಲಾ ಶಾಖೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.‌
ಪತ್ರಕರ್ತನಾಗಿ ಎರಡು ಕಣ್ಣುಗಳಿಂದ ಸಮಾಜವನ್ನು ನೋಡುತ್ತಿದ್ದ ನನಗೆ, ಸಮಾಜದ ಲಕ್ಷಾಂತರ ಕಣ್ಣುಗಳು ನನ್ನೊಬ್ಬನನ್ನು ಗಮನಿಸುತ್ತಿರುತ್ತದೆ ಎನ್ನುವ ಸಾಮಾಜಿಕ ಎಚ್ಚರವನ್ನು ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೆರಳಲ್ಲಿ ಕಲಿತುಕೊಂಡೆ.
ಒಂದು ಬಲಿಷ್ಠವಾದ ವ್ಯವಸ್ಥೆ ಏಕಲವ್ಯರ ಬೆರಳುಗಳನ್ನು, ಅವಕಾಶ ಮತ್ತು ಪ್ರತಿಭೆಗಳನ್ನು ಹೇಗೆ ಕಿತ್ತುಕೊಳ್ಳುತ್ತದೆ ಎನ್ನುವುದನ್ನು ನಾನು ಪತ್ರಕರ್ತನಾಗಿ ಕಲಿತಿದ್ದೆ. ಆದರೆ, ಏಕಲವ್ಯರ ಬೆರಳುಗಳಿಗೆ ಶಕ್ತಿ ತುಂಬಿ ಬೆವರಿನ‌ ಸಂಸ್ಕೃತಿಗೆ ಘನತೆ ತರುವುದು ಹೇಗೆ ಎನ್ನುವುದನ್ನು ನಾನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಕಲಿತೆ.
ನಾನು ಮಾನ್ಯ ಮುಖ್ಯಮಂತ್ರಿಗಳ ನೆರಳಿಗೆ ಬಂದು ಒಂದು ಡಜನ್ ವರ್ಷಗಳೇ ಕಳೆದವು. ಈ ಅವಧಿಯಲ್ಲಿ ನಾನು ಗ್ರಹಿಸಿದ್ದು ಏನೆಂದರೆ, “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇವಲ ಒಬ್ಬ ರಾಜಕೀಯ ನಾಯಕರಲ್ಲ. ಒಂದು ಸಿದ್ಧಾಂತ. ಈ ಸಿದ್ಧಾಂತಕ್ಕೆ ಒಂದು ಪರಂಪರೆ ಇದೆ. ಆ ಪರಂಪರೆ ಸೃಷ್ಟಿಸಿದ ಅವಕಾಶಗಳ ಕಾರಣಕ್ಕೇ ಇಂದು ಇಲ್ಲಿ ನಾನು ಸನ್ಮಾನಿತನಾಗುತ್ತಿದ್ದೇನೆ. ಆದ್ದರಿಂದ ಈ ಸನ್ಮಾನವನ್ನು ನಾನು ಸಿದ್ಧರಾಮಯ್ಯ ಅವರ ಪರಂಪರೆಗೆ ಅರ್ಪಿಸುತ್ತೇನೆ ಎಂದರು.
ವಿಧಾನಸೌಧದಲ್ಲಿ ಬೇರೆ ಬೇರೆ ಜನ ಸಮುದಾಯಗಳ, ದುಡಿಯುವ ವರ್ಗಗಳ ಸಭೆಗಳು ನಡೆಯುವಾಗ ಅವರೆಲ್ಲರ ಬಾಯಲ್ಲಿ ಬರುವ ಒಂದು ಮಾತು ಪದೇ ಪದೇ ನನ್ನ ಕಿವಿಗೆ ಬೀಳುತ್ತದೆ. ” ಸಾರ್, ನಮಗೆ ನ್ಯಾಯ ಸಿಕ್ಕರೆ ನಿಮ್ಮ ಅವಧಿಯಲ್ಲೇ ಸಿಗಬೇಕು ಸರ್. ಹಿಂದಿನವರೂ ಮಾಡಿಲ್ಲ, ಮುಂದೆ ಬರುವವರೂ ಮಾಡುವುದೂ ಕಷ್ಟ ಸರ್”. ಈ ಮಾತು ನನ್ನನ್ನು ಸದಾ ಎಚ್ಚರದಲ್ಲಿ ಇರುವಂತೆ ಮಾಡಿ ನನ್ನ ಕರ್ತವ್ಯ ಪ್ರಜ್ಞೆಯನ್ನು ರೂಪಿಸಿದೆ ಎಂದರು.
Read also : ದಾವಣಗೆರೆ : ಅಕ್ಕಿಯ ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಸಚಿವ ಮುನಿಯಪ್ಪ
ಎರಡು ಬಾರಿ ಮುಖ್ಯಮಂತ್ರಿ ಆಗುವುದು, ಸತತ ಮೂರು ದಶಕಗಳ ಕಾಲ ಜನ ಸಮುದಾಯಗಳ ಭರವಸೆಯ ನಾಯಕರಾಗಿ ರೂಪುಗೊಂಡಿದ್ದು ಅವರ ಸಾಮಾಜಿಕ ಬದ್ಧತೆಯನ್ನು ಎತ್ತಿ ತೋರಿಸುತ್ತದೆ. ಈ ಬದ್ಧತೆ ನೇರವಾಗಿ ನನ್ನ ಮೇಲೆ ಪ್ರಭಾವ ಬೀರಿದೆ ಎಂದು ವಿವರಿಸಿದರು.
ಪತ್ರಕರ್ತ ಸಮುದಾಯದ 20-25 ವರ್ಷಗಳ ಬೇಡಿಕೆಗೆ ನಾನು ಮುಕ್ತಿ ದೊರಕಿಸಿಕೊಟ್ಟೆ ಎಂದು ನೀವೆಲ್ಲಾ ಹೇಳುತ್ತಿದ್ದೀರಿ. ಇದೆಲ್ಲವೂ ಒಬ್ಬನಿಂದ ಆಗಿದ್ದಲ್ಲ, ಮುಖ್ಯಮಂತ್ರಿಗಳು ನನಗೆ ಕೊಟ್ಟ ಶಕ್ತಿ ಮತ್ತು ಪತ್ರಕರ್ತರ ಸಂಘದ ಸತತ ಹೋರಾಟ, ನಿರಂತರ ಪ್ರಯತ್ನ ಕೂಡ ಕಾರಣ ಎಂದು ಹೇಳಲು ಬಯಸುತ್ತೇನೆ.
ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷರಾದ ದಿಲೀಪ್ ಕುರಂದವಾಡೆ ಇಬ್ಬರೂ ಅಸಾಧ್ಯ ಸಂಘಟಕರು ಮತ್ತು ಅಷ್ಟೇ ಬದ್ಧತೆಯುಳ್ಳವರು. ನಿಮ್ಮಲ್ಲರ ಹಾರೈಕೆ ಮತ್ತು ಬೆಂಬಲದಲ್ಲಿ ನಾನು ಇಲ್ಲಿಯವರೆಗೂ ಹೆಜ್ಜೆ ಇಟ್ಟಿದ್ದೇನೆ. ನಡೆಯಬೇಕಾಗಿರುವ ಹಾದಿ ಬಹಳ ಇದೆ. ಆದರೆ, ನನಗೆ ಒದಗಿ ಬಂದಿರುವ ಈ ಅವಕಾಶದಲ್ಲಿ ನಾನು ಪತ್ರಕರ್ತರ ಬಹುತೇಕ ಸಮಸ್ಯೆಗಳಿಗೆ ಮುಕ್ತಿ ಹಾಡಬೇಕು ಎನ್ನುವ ಖಚಿತ ನಿರ್ಧಾರ ಮಾಡಿಯೇ ಕೆಲಸ ಮಾಡುತ್ತಿದ್ದೇನೆ.
ಹತ್ತಾರು ವರ್ಷಗಳಿಂದ ಜಡ್ಡುಗಟ್ಟಿರುವ ತಾಂತ್ರಿಕ‌ ಅಡೆ ತಡೆಗಳನ್ನು, ಆಡಳಿತಾತ್ಮಕ ತೊಡಕುಗಳನ್ನು ನಿವಾರಿಸಲು ಇಲಾಖೆಯ ಕಾರ್ಯದರ್ಶಿಗಳಾದ ಕಾವೇರಿ ಮೇಡಂ, ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರೂ ಸಹಕಾರ ನೀಡುತ್ತಿದ್ದಾರೆ. ಜೊತೆಗೆ ನಿಮ್ಮೆಲ್ಲರ ಒತ್ತಾಯ ಮತ್ತು ಆಗ್ರಹಗಳಿಗೂ ನಾನು ಕಿವಿಯಾಗಿದ್ದೇನೆ. ಎಲ್ಲರ ಒಟ್ಟು ಶ್ರಮದಲ್ಲಿ ಇನ್ನಷ್ಟು ಅನುಕೂಲಗಳು ಪತ್ರಕರ್ತ ಸಮುದಾಯಕ್ಕೆ ಸಿಗಲಿದೆ ಎಂದು ಹೇಳುತ್ತಾ, ಇವತ್ತಿನ‌ ಈ ಸನ್ಮಾನ ಮತ್ತು ದೀಪಕ್ ಕುರಂದವಾಡೆ ತಂಡದ ಪ್ರೀತಿ, ಅಭಿಮಾನಕ್ಕೆ ಆಭಾರಿ‌ ಆಗಿದ್ದೇನೆ ಎಂದರು.
ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷರಾದ ದೀಪಕ್ ಕುರಂದವಾಡೆ, KUWJ ಬೆಳಗಾವಿ ಜಿಲ್ಲಾ ಘಟಕದ ಗೌರವಾಧ್ಯಕ್ಷರಾದ ಡಾ.ಭೀಮಶಿ ಎಲ್. ಜಾರಕಿಹೊಳಿ, ಸಂಘದ ಮುಖಂಡರಾದ ಮದನ್ ಗೌಡ ಸೇರಿ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು, ಪದಾಧಿಕಾರಿಗಳು ಮತ್ತು ಹಲವು ಗಣ್ಯರು ಉಪಸ್ಥಿತರಿದ್ದರು.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ದಾವಣಗೆರೆ : ಅಕ್ಕಿಯ ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಸಚಿವ ಮುನಿಯಪ್ಪ
Next Article Davanagere ಅಂತರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆ : ಬೈಕ್ ರ‍್ಯಾಲಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಎಸ್ ಡಿ ಪಿ ಐ ಸಂಸ್ಥಾಪನಾ ದಿನಾಚರಣೆ : ಭಯ ಮುಕ್ತ ಸಮಾಜ ನಮ್ಮ ಗುರಿ

ದಾವಣಗೆರೆ:    ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಸಮಿತಿ ವತಿಯಿಂದ ಎಸ್‍ಡಿಪಿಐ ಜಿಲ್ಲಾ ಕಚೇರಿ ಯಲ್ಲಿ 16ನೇ…

By Dinamaana Kannada News

ಸೇತುವೆಗಳ ಬಳಿ ಮರಳುಗಾರಿಕೆ ನಡೆಸಬೇಡಿ : ಎಚ್.ಕೆ.ಕೊಟ್ರಪ್ಪ ಒತ್ತಾಯ

ಹರಿಹರ: ತಾಲ್ಲೂಕಿನ ವಿವಿಧೆಡೆ ಇರುವ ಸೇತುವೆಗಳ ಬಳಿ ಮರಳುಗಾರಿಕೆ ನಡೆಸದಂತೆ ಜಿಲ್ಲಾ, ತಾಲ್ಲೂಕು ಆಡಳಿತ ಹಾಗೂ ಗಣಿ ಮತ್ತು ಭೂ…

By Dinamaana Kannada News

Dr. F.G. Halakatti | ವಚನ ತವನಿಧಿಯ ಸಂರಕ್ಷಕ : ಡಾ. ಫ.ಗು. ಹಳಕಟ್ಟಿ

ವಚನಸಾಹಿತ್ಯ ಸಂಗ್ರಹಕಾರ, ಶರಣ ಸಾಹಿತ್ಯವನ್ನು ಜನಸಾಮಾನ್ಯರಿಗೆ ಪರಿಚಯಿಸಿ, ಶರಣ ಸಂಸ್ಕøತಿಯನ್ನು, ಶಿವಶರಣರ ವಿಚಾರದಾರೆ, ಚಿಂತನೆ, ಸಮಾಜಮುಖಿ ಕಾಳಜಿಗಳನ್ನೂ, ಶ್ರದ್ಧೆಯಿಂದ, ಪರಿಶ್ರಮದಿಂದ…

By Dinamaana Kannada News

You Might Also Like

Applications invited
ತಾಜಾ ಸುದ್ದಿ

ಪೌರಕಾರ್ಮಿಕರ ವಿಶೇಷ ನೇರ ನೇಮಕಾತಿಗೆ ಅರ್ಜಿ ಆಹ್ವಾನ

By Dinamaana Kannada News
Application for Youth Fund Scheme
ತಾಜಾ ಸುದ್ದಿ

ಯುವನಿಧಿ ಯೋಜನೆ: ನಿರುದ್ಯೋಗಿ ಭತ್ಯೆ ಪಡೆಯಲು ಅರ್ಜಿ ಆಹ್ವಾನ

By Dinamaana Kannada News
Dr. D. Francis
ಅಭಿಪ್ರಾಯ

ಕನ್ನಡಿಗರ ಹೆಮ್ಮೆಯ ಉಸಿರು: ಕನ್ನಡವೇ ನಮ್ಮಉಸಿರು|ಡಾ. ಡಿ. ಫ್ರಾನ್ಸಿಸ್

By Dinamaana Kannada News
Davanagere
ತಾಜಾ ಸುದ್ದಿ

ಸೋರಿಯಾಸಿಸ್ ಒಂದು ಸಮಗ್ರ ರೋಗ: ಡಾ.ಎಂ.ಸಿ.ರೂಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?