ಹರಿಹರ:ಜನ ಸಾಮಾನ್ಯರ ಬದುಕನ್ನು ಹಸನು ಮಾಡುವ ಶಕ್ತಿ ಅಭಿಯಂತರರಿಗಿದೆ ಎಂದು ನಗರಸಭೆ ಅದ್ಯಕ್ಷೆ ಕವಿತಾ ಮಾರುತಿ ಬೇಡರ್ ಹೇಳಿದರು.
ನಗರದ ಸರ್ಕಾರಿ ಪಾಲಿಟೆಕ್ನಿಕ್‍ನಲ್ಲಿ ಆಯೋಜಿಸಿದ್ದ ವಿದ್ಯಾರ್ಥಿ ಮತ್ತು ಕ್ರೀಡಾ ಸಂಘ, ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್ ಘಟಕ ಉದ್ಘಾಟನೆ, ಶಿಕ್ಷಕರ ಹಾಗೂ ಅಭಿಯಂತರರ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ಹಲವು ದಶಕಗಳ ಹಿಂದೆ ಸರ್.ಎಂ.ವಿಶ್ವೇಶ್ವರಯ್ಯರವರು ರಚಿಸಿದ ಜಲಾಶಯ, ಸೇತುವೆ, ಕಟ್ಟಡಗಳ ಮೂಲಕ ನಾಡಿನ ಜನರಲ್ಲಿ ಇಂದಿಗೂ ಅಜರಾಮರವಾಗಿ ಉಳಿದಿದ್ದಾರೆ. ದುಡಿಮೆಯ ಜೊತೆಗೆ ಜನ ಸಾಮಾನ್ಯರ ಬದುಕನ್ನು ಹಸನು ಮಾಡುವ ದಿಕ್ಕಿನತ್ತಲೂ ಅಭಿಯಂತರರು ಆಧ್ಯತೆ ನೀಡಬೇಕೆಂದರು.
Read also : ದಾವಣಗೆರೆ|ಅಪ್ರಾಪ್ತ ಬಾಲಕಿ ಅಪಹರಣ ಪ್ರಕರಣ : ಆರೋಪಿಗಳಿಗೆ ಶಿಕ್ಷೆ
ಸಮಾಜಕ್ಕೆ ಉತ್ತಮ ಅಭಿಯಂತರರನ್ನು ನೀಡುವ ನಿಟ್ಟಿನಲ್ಲಿ ಈ ಸಂಸ್ಥೆಯ ಉಪನ್ಯಾಸಕರು ಹಾಗೂ ಸಿಬ್ಬಮದಿಗಳು ಶ್ರಮಿಸುತ್ತಿದ್ದಾರೆ ಎಂದು ಅಧ್ಯಕ್ಷತೆವಹಿಸಿದ್ದ ಪ್ರಾಚಾರ್ಯ ಶಾಂತಕುಮಾರ ನಾಯ್ಕ ಬಿ. ಹೇಳಿದರು.
ಕಾರ್ಯಕ್ರಮದಲ್ಲಿ ಕವಿತಾ ಮಾರುತಿ ಬೇಡರ್ ಹಾಗೂ ಯುವ ಮುಖಂಡ ಮಾರುತಿ ಬೇಡರ್ ಅವರನ್ನು ಸತ್ಕರಿಸಲಾಯಿತು. ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿದ್ದರು.
