ದಾವಣಗೆರೆ: ಕೌಟುಂಬಿಕ ಕಲಹದಿಂದ ಮನನೊಂದು ಯುವತಿಯೊಬ್ಬರು ಕಟ್ಟಡದ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ವಸಂತ ಚಿತ್ರಮಂದಿರದ ಬಳಿ ನಡೆದಿದೆ.
ದೇವಿಕಾ (18) ಮೃತಪಟ್ಟ ಯುವತಿ. ಮೂಲತಃ ಪಶ್ಚಿಮ ಬಂಗಾಳದ ಕುಟುಂಬ ಹಲವು ವರ್ಷಗಳಿಂದ ದಾವಣಗೆರೆಯಲ್ಲಿ ನೆಲೆಸಿದೆ.
Read also : ದಾವಣಗೆರೆ : ವೃತ್ತಿ ತರಬೇತಿ ಪ್ರವೇಶ ಅವಧಿ ವಿಸ್ತರಣೆ
ಮನೆಯಲ್ಲಿ ನಡೆದ ಕೌಟುಂಬಿಕ ಕಲಹದಿಂದ ಬೇಸತ್ತ ಯುವತಿ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು.
ಆದರೆ ಮಾರ್ಗ ಮಧ್ಯೆ ಯುವತಿ ಕೊನೆಯುಸಿರೆಳೆದಿದ್ದಾಳೆ ಎಂದು ಬಸವನಗರ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.
