ದಾವಣಗೆರೆ : ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಮತ್ತು ಎಫ್‍ಐಆರ್ ದಾಖಲಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿವಿಧ ಇಲಾಖೆಗಳೊಂದಿಗೆ ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಆಗುತ್ತಿರುವ ಕುರಿತು ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಧ್ಯವರ್ತಿಗಳು ಹಣದ ಆಮಿಷವೊಡ್ಡಿ ಬಡವರಿಂದ ಅಕ್ಕಿ ಖರೀದಿಸುತ್ತಿದ್ದಾರೆ. ಮನೆ–ಮನೆಗೆ ಹೋಗಿ ಕಡಿಮೆ ದುಡ್ಡಿಗೆ ಅಕ್ಕಿ ಸಂಗ್ರಹಿಸುವ ದಂಧೆಕೋರರು, ಅದನ್ನು ರಾಜ್ಯದ ಗಡಿಯಾಚೆ ಮಾರುತ್ತಿದ್ದಾರೆ. ನ್ಯಾಮತಿ ತಾಲ್ಲೂಕುಗಳಲ್ಲಿ ಅತಿ ಹೆಚ್ಚಾಗಿ ನ್ಯಾಯಬೆಲೆ ಅಂಗಡಿಯಿಂದ ಅಕ್ಕಿಯೂ ಕಾಳಸಂತೆಯಲ್ಲಿ ಮಾರಾಟವಾಗುತ್ತಿದ್ದು, ಅದನ್ನು ಹೊರದೇಶಗಳಿಗೆ, ರವಾನೆಯಾಗುತ್ತಿದೆ. ಗಂಜಿ ಮಾಡಲು ತೆಗೆದುಕೊಂಡು ಹೋಗುತ್ತಿದ್ದಾರೆ. ನಗರದ ಪ್ರಮುಖ ಪ್ರದೇಶಗಳಲ್ಲಿ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಬೇಕು.
ರಾಜ್ಯದಲ್ಲಿ ಬಡವರಿಗೆ ಅನ್ನಭಾಗ್ಯ ಯೋಜನೆಯಡಿ ಉಚಿತವಾಗಿ ನೀಡುತ್ತಿರುವ ಅಕ್ಕಿಯನ್ನು ಫಲಾನುಭವಿಗಳಿಂದ ಕಡಿಮೆ ಬೆಲೆಗೆ ಖರೀದಿಸಿ ಹೊರ ಜಿಲ್ಲೆಗಳಿಗೆ ಸಾಗಿಸುವ ಬಡವರ ಹೊಟ್ಟೆ ತುಂಬಿಸಬೇಕಿದ್ದ ಅನ್ನ ಭಾಗ್ಯದ ಅಕ್ಕಿ ವ್ಯವಸ್ಥಿತವಾಗಿ ರೈಸ್ ಮಿಲ್‍ಗಳ ಗೋಡೌನ್ ಸೇರುತ್ತಿದೆ ಎಂದರು.
Read also : ದಾವಣಗೆರೆ:ಗೌರವಧನ ಮೇಲೆ ನೇಮಕಾತಿಗಾಗಿ ಅರ್ಜಿ ಆಹ್ವಾನ
ವಾಹನಗಳಿಗೆ ಜಿಪಿಎಫ್ ಅಳವಡಿಸಬೇಕು. ಅನ್ನಭಾಗ್ಯದ ಸ್ಟಾಕ್ ಬಂದ ತಕ್ಷಣ ಅದನ್ನು ವಾಟ್ಸ್ಪ್ ಗ್ರೂಪ್ ನಲ್ಲಿ ವಿಡಿಯೋ ಅಳವಡಿಸಬೇಕು. ಸಾರ್ವಜನಿಕರು ನ್ಯಾಯಬೆಲೆ ಅಂಗಡಿ ಅಥವಾ ಇನ್ನಾವುದೇ ಪ್ರದೇಶಗಳಲ್ಲಿ ಅನ್ನಭಾಗ್ಯ ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವುದು ಕಂಡುಬಂದರೆ ಕೂಡಲೇ 112ಗೆ ಕರೆಮಾಡಿ ತಿಳಿಸಬೇಕು.
ಅಕ್ರಮವಾಗಿ ಆಟೋ, ಗೂಡ್ಸ್ ಗಾಡಿಗಳಲ್ಲಿ ಅಕ್ಕಿಯನ್ನು ಖರಿದೀಸುತ್ತಿದ್ದು, ಅಂತಹ ವಾಹನಗಳಿಗೆ ದಂಡ ವಿಧಿಸಬೇಕೆಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಪರಮೇಶ್ವರ ಹಗಡೆ, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಉಪವಿಭಾಗಾಧಿಕಾರಿ ಸಂತೋಷ, ಗ್ರಾಮೀಣ ಪೊಲೀಸ್ ಠಾಣೆಯ ಡಿವೈಎಸ್‍ಪಿ ಬಸವರಾಜ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಮಧುಸೂದನ್ ಉಪಸ್ಥಿತರಿದ್ದರು.
