ದಾವಣಗೆರೆ : ಪ್ರಸಕ್ತ ಸಾಲಿನ ಮಕ್ಕಳ ದಿನಾಚರಣೆ ಪ್ರಯುಕ್ತ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಮಕ್ಕಳ ಕ್ಷೇತ್ರದಲ್ಲಿ ಸಾಧನೆ ಮಾಡಿದ ವ್ಯಕ್ತಿ, ಸಂಸ್ಥೆಗಳಿಗೆ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ನಿಗದಿತ ಅರ್ಜಿ ನಮೂನೆಗಳನ್ನು ಪಡೆದು ಕನ್ನಡ ಭಾಷೆಯಲ್ಲಿ ಭರ್ತಿಮಾಡಿ ದ್ವಿ ಪ್ರತಿಯಲ್ಲಿ ನವಂಬರ್ 3 ರೊಳಗಾಗಿ ಉಪನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯರಸ್ತೆ ಕುವೆಂಪು ನಗರ ಎಂ.ಸಿ.ಸಿ ಬಿ ಬ್ಲಾಕ್ ದವಣಗೆರೆ ದೂ.ಸಂ:08192-264056 ಇವರಿಗೆ ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕ ರಾಜಾನಾಯ್ಕ್ ತಿಳಿಸಿದ್ದಾರೆ.
Read also : ಕ್ರಿಶ್ಚಿಯನ್ ಸಮುದಾಯ ಅಭಿವೃದ್ದಿ ನಿಗಮದ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ
