ದಾವಣಗೆರೆ: ಚಿತ್ರದುರ್ಗದಲ್ಲಿ ನಡೆದ ರಾಜ್ಯ ಮಟ್ಟದ 20025 – 26 ನೇ ಸಾಲಿನ ಜುಡೋ ಸ್ಪರ್ಧೆಯಲ್ಲಿ ಎಚ್.ಕೆ.ಆರ್.ನಗರದ ವಿದ್ಯಾರ್ಥಿನಿ ಕೆ.ವೈ.ಸ್ಪಂದನ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬೆಳಗಾವಿಯ ಜಗದೀಶ ಎ.ಸವದತ್ತಿ ಪದವಿ ಪೂರ್ವ ವಾಣಿಜ್ಯ ಮಹಾವಿದ್ಯಾಲಯದಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ಕೆ.ವೈ.ಸ್ಪಂದನ ದಾವಣಗೆರೆ ಮತ್ತು ಚಿತ್ರದುರ್ಗದಲ್ಲಿ ನಡೆದ ರಾಜ್ಯ ಮಟ್ಟದ ಜುಡೋ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕೆ.ವೈ.ಸ್ಪಂದನ ತಾಯಿ ಅನುರಾಧ, ತಂದೆ ಯಲ್ಲಪ್ಪ ದಂಪತಿಯ ಪುತ್ರಿಯಾಗಿದ್ದು, ವಿದ್ಯಾರ್ಥಿನಿಯ ಸಾಧನೆಗೆ ಪೋಷಕರು, ಕಾಲೇಜಿನ ಪ್ರಾಂಶುಪಾಲರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.
