ದಾವಣಗೆರೆ : ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆಯ ಸಹಾಯಕ ನಿರ್ದೇಶಕ ಪ್ರಭು ಜೆ ಅವರ ಮನೆ,ಕಚೇರಿ ಹಾಗೂ ಸಂಬಂಧಿಕರ ಮನೆ ಹಾಗೂ ದಾವಣಗೆರೆ ತಾಲೂಕಿನ ದೊಡ್ಡಘಟ್ಟ ಗ್ರಾಮದ ತೋಟದ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.
ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪ ಹಿನ್ನಲೆಯಲ್ಲಿ ಲೋಕಾಯುಕ್ತ ಪೊಲೀಸ್ ವರಿಷ್ಠ್ಠಾಧಿಕಾರಿ ಎಂ.ಎಸ್.ಕೌಲಾಪೋರೆ ನೇತೃತ್ವದ ತಂಡ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದೆ.
Read also : ಎನ್‌ಪಿಎಸ್ ನೌಕರರ ಸಂಘದ ಜಿಲ್ಲಾ ಕಾರ್ಯಕಾರಿಣಿ :ಎನ್‌ಪಿಎಸ್ ತೊಲಗಿಸಿ ಓಪಿಎಸ್ ಪಡೆಯಲು ಸಂದೇಶ
ಹಲವು ವರ್ಷಗಳಿಂದ ದಾವಣಗೆರೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಭು ಜೆ. ದಾವಣಗೆರೆ ನಗರದ ಆಂಜನೇಯ ಬಡಾವಣೆಯ ಸೇರಿದಂತೆ ವಿವಿಧಡೆ ಪತ್ತೆ ಕಾರ್ಯನಡೆದಿದೆ.
ದಾಳಿಯಲ್ಲಿ ಡಿವೈಎಸ್ಪಿ ಕಲಾವತಿ, ಇನ್‌ಸ್ಪೇಕ್ಟರ್ ಗುರುಬಸವರಾಜ ತಂಡ ಪರಿಶೀಲನೆ ನಡೆಸುತ್ತಿದೆ.
