ದಾವಣಗೆರೆ ಡಿ.04 – ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಪ್ರಸಕ್ತ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹ ಧನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ 50 ಯುವಬರಹಗಾರರ ಹಸ್ತ ಪ್ರತಿಗಳ ಪ್ರಕಟಣೆಗೆ ಮಾತ್ರ ರೂ.15,000-00ಗಳ ಪ್ರೋತ್ಸಾಹ ಧನ ನೀಡಲಾಗುವುದು.
ಅರ್ಜಿದಾರರು 18 ರಿಂದ 40 ವರ್ಷವಯೋಮಿತಿರಾಗಿರಬೇಕು. ಸ್ವ-ವಿವರವುಳ್ಳ ಪ್ರಾಧಿಕಾರದ ಅರ್ಜಿ ನಮೂನೆಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ.ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ ಜನ್ಮದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು.ಅಲ್ಲದೆ ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ನೀಡಬೇಕು.
ಅರ್ಜಿಗಳೊಂದಿಗೆ ಹಸ್ತ ಪ್ರತಿಯನ್ನು ಡಿಸೆಂಬರ್ 24 ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡಭವನ, ಜೆ.ಸಿ.ರಸ್ತೆ, ಬೆಂಗಳೂರು – 560 002 – ಅವರಿಗೆ ಅರ್ಜಿ ನಮೂನೆಯೊಂದಿಗೆ ಡಿ.ಟಿ.ಪಿ. ಮಾಡಿದ ಹಸ್ತಪ್ರತಿಯನ್ನು ಕಳುಹಿಸಿಕೊಡಬೇಕು.
ಹೆಚ್ಚಿನ ಮಾಹಿತಿಗಾಗಿವೆಬ್ ಸೈಟ್ www.kannadapustakapradhikara. com ದೂ.ಸಂ:080-22484516, 22107704 ಸಂಪರ್ಕಿಸಬಹುದೆAದು ಆಡಳಿತಾಧಿಕಾರಿ ಕಿರಣಸಿಂಗ್ ತಿಳಿಸಿದ್ದಾರೆ.
