ದಾವಣಗೆರೆ ಡಿ.04 – ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡAತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
Read also : ಚೊಚ್ಚಲ ಕೃತಿಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ಅರ್ಜಿಯನ್ನು ಉಪನಿರ್ದೇಶಕರು ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 24 ರೊಳಗಾಗಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ, ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ:08192-264056 ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.
