ಹರಿಹರ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿಸಿದ) ತಾಲ್ಲೂಕು ಘಟಕ ಹಾಗೂ ಸ್ಪೂರ್ತಿ ಛಾರಿಟೇಬಲ್ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಡಿ.22 ರಂದು ಬೆಳಿಗ್ಗೆ 10ಕ್ಕೆ ನಗರದ ಬಸ್ ನಿಲ್ದಾಣ ಸಮೀಪದ ಗುರುಭವನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಸದ್ಭಾವನ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿದೆ.
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಸಮಾರಂಭ ಉದ್ಘಾಟಿಸುವರು. ಕದಸಂಸ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಶಿವಮೊಗ್ಗ ಉಚಿತ ಆರೋಗ್ಯ ಶಿಬಿರ ಉದ್ಘಾಟಿಸುವರು. ಮಾಜಿ ಶಾಸಕ ಎಸ್.ರಾಮಪ್ಪ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವರು.
Read also : Poem|ಬಾಬಾಸಾಹೇಬ….ಬಿ.ಶ್ರೀನಿವಾಸ
ಇನ್ ಸೈಟ್ಸ್ ಸಂಸ್ಥೆ ಸ್ಥಾಪಕ ಜಿ.ಬಿ.ವಿನಯ್ ಕುಮಾರ್ ಪ್ರಶಸ್ತಿ ಪ್ರಧಾನ ಮಾಡುವರು. ಕರ್ನಾಟಕ ರಾಜ್ಯ ಮಾದರ ಚೆನ್ನಯ್ಯ ಸೇವೆ ಸಮಿತಿ ಅಧ್ಯಕ್ಷ ಹೂಡಿ ಮಂಜುನಾಥ, ಅಕ್ಷಯ ಆಸ್ಪತ್ರೆ ಮುಖ್ಯಸ್ಥ ಡಾ.ನಾಗರಜ್ ವಿ.ಟಿ., ಬೊಂಗಾಳೆ ಆಸ್ಪತ್ರೆ ಮುಖ್ಯಸ್ಥ ಡಾ.ಸಚಿನ್ ಬೊಂಗಾಳೆ, ಕದಸಂಸ ಜಿಲ್ಲಾ ಸಂಚಾಲಕ ಕುಂದುವಾಡ ಮಂಜುನಾಥ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಕದಸಂಸ ತಾಲ್ಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಅಧ್ಯಕ್ಷತೆವಹಿಸುವರು.
ಆರೋಗ್ಯ ಶಿಬಿರದಲ್ಲಿ ಇಸಿಜಿ, ಆರ್.ಬಿ.ಎಸ್., ಕಣ್ಣಿನ ಪರೀಕ್ಷೆ ಮತ್ತು ಹೃದಯ ಸ್ಥಂಭನಕ್ಕೆ ಪ್ರಥಮ ಚಿಕಿತ್ಸೆ ನೀಡುವ ಪದ್ಧತಿಯ ಪ್ರಾತ್ಯಕ್ಷಿಕೆ ನೀಡಲಾಗುವುದು. ಶಿಬಿರದಲ್ಲಿ ಬೆಂಗಳೂರಿನ ತಜ್ಞ ವೈದ್ಯರ ತಂಡ ಭಾಗವಹಿಸಲಿದೆ.
ಹೆಚ್ಚಿನ ಮಾಹಿತಿಗೆ ಮೊ.ನಂ:9900194567, 7019858689 ಸಂಪರ್ಕಿಸಲು ಕೋರಿದೆ.
