ದಾವಣಗೆರೆ: ಮಾನಸಿಕ ಖಿನ್ನತೆಗೊಳಗಾಗಿದ್ದ ವಿದ್ಯಾರ್ಥಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸರಸ್ವತಿ ನಗರದ ಮನೆಯೊಂದರಲ್ಲಿ ನಡೆದಿದೆ.
ಎಂ.ಉಲ್ಲಾಸ್ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಕೊಠಡಿಯಲ್ಲಿ ‘ನನ್ನ ಸಾವಿಗೆ ನಾನೇ ಕಾರಣ’ ಎಂದು ಬರೆದಿಟ್ಟ ಡೆತ್ ನೋಟ್ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಳ್ಳುವ ಸಂದರ್ಭದಲ್ಲಿ ಯುವಕನ ತಂದೆ– ತಾಯಿ ನಗರದಲ್ಲಿ ಇರಲಿಲ್ಲ. ಅಜ್ಜಿ ಮಾತ್ರ ಮನೆಯಲ್ಲಿದ್ದರು ಎನ್ನಲಾಗಿದೆ. ಯುವಕ ಆತ್ಮಹತ್ಯೆಗೆ ಖಿನ್ನತೆಯೇ ಕಾರಣ ಇರಬಹುದು ಎಂದು ಶಂಕಿಸಲಾಗಿದೆ.
ಈ ಘಟನೆ ಕುರಿತು ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
