ದಾವಣಗೆರೆ : ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ಡಿ.ಬಿ.ಟಿ. ಮೂಲಕ ಹಣ ಸಂದಾಯ ಮಾಡಲಾಗುತ್ತಿದ್ದು, ಫಲಾನುಭವಿಗಳಿಗೆ ನಂತರದ ತಿಂಗಳುಗಳ ಯುವನಿಧಿ ಹಣ ಸಂದಾಯವಾಗಲು ಕಡ್ಡಾಯವಾಗಿ ಪ್ರತಿ ತಿಂಗಳ 25ನೇ ತಾರೀಖಿನೊಳಗೆ ಸ್ವಯಂ ದೃಢೀಕರಣ ಮಾಡಿಕೊಳ್ಳಬೇಕಾಗಿತ್ತು.
ಆದರೆ ಡಿಸೆಂಬರ್-2025 ಮಾಹೆಯಲ್ಲಿ ಸ್ವಯಂ ಘೋಷಣೆ ಮಾಡುವ ಮುನ್ನ ಹಲವು ಹೆಚ್ಚುವರಿ ಮಾಹಿತಿಯನ್ನು ಸೇವಾ ಸಿಂಧು ಪೋರ್ಟಲ್ನಲ್ಲಿ ಆನ್ಲೈನ್ನಲ್ಲಿ ಸಲ್ಲಿಸಬೇಕಾಗಿದ್ದು, ಈ ಸಂಬಂಧ ಸ್ವಯಂ ಘೋಷಣೆ ಮಾಡುವ ಅವಧಿಯನ್ನು ದಿನಾಂಕ 25ರ ಬದಲಾಗಿ ಡಿಸೆಂಬರ್ 31ರವರೆಗೆ ವಿಸ್ತರಿಸಲಾಗಿರುತ್ತದೆ.
Read also : ನಾಳೆಯಿಂದ 3 ದಿನಗಳು ನಗರದಲ್ಲಿ ಕುಡಿಯುವ ನೀರಿನ ವಿತರಣೆಯಲ್ಲಿ ವ್ಯತ್ಯಯ
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾಡಳಿತ ಭವನ, ದಾವಣಗೆರೆ ಇವರನ್ನು ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.
