Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ ವಿಶ್ವವಿದ್ಯಾನಿಲಯ|ಜಾಗತಿಕ ನಾಗರಿಕತ್ವ ಅನಿವಾರ್ಯ: ಪ್ರೊ.ನಿರಂಜನ
ತಾಜಾ ಸುದ್ದಿ

ದಾವಣಗೆರೆ ವಿಶ್ವವಿದ್ಯಾನಿಲಯ|ಜಾಗತಿಕ ನಾಗರಿಕತ್ವ ಅನಿವಾರ್ಯ: ಪ್ರೊ.ನಿರಂಜನ

Dinamaana Kannada News
Last updated: December 18, 2025 3:29 am
Dinamaana Kannada News
Share
davanagere vv
SHARE

ದಾವಣಗೆರೆ: ವಿದ್ಯಾರ್ಥಿಗಳು ಕೇವಲ ಪದವೀಧರರಾಗದೆ, ಜಾಗತಿಕ ಅನುಭವ, ಆತ್ಮವಿಶ್ವಾಸ ಮತ್ತು ವಿಶಾಲ ವೃತ್ತಿ ಅವಕಾಶಗಳೊಂದಿಗೆ ಜಾಗತಿಕ ನಾಗರಿಕರಾಗುವಿಕೆ ಅನಿವಾರ್ಯವಾಗಿದೆ ಎಂದು ಕರ್ನಾಟಕ ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪ್ರೊ. ಎಸ್.ಆರ್. ನಿರಂಜನ ಅಭಿಪ್ರಾಯಪಟ್ಟರು.

ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಬುಧವಾರ ಏರ್ಪಡಿಸಿದ್ದ ಉನ್ನತ ಶಿಕ್ಷಣದ ಅಂತರರಾಷ್ಟ್ರೀಕರಣ : ಜಾಗತಿಕ ಸ್ಪರ್ಧಾತ್ಮಕತೆಯ ಒಂದು ನೋಟ ಕುರಿತ ಅಂತರರಾಷ್ಠ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.

ಇಂದಿನ ಉದ್ಯೋಗದಾತರು ಜಾಗತಿಕ ದೃಷ್ಟಿಕೋನ ಹೊಂದಿದ ಪದವೀಧರರನ್ನು ಹುಡುಕುತ್ತಿದ್ದಾರೆ. ಸಂವಹನ, ತಂಡ ಕಾರ್ಯ ಮತ್ತು ವಿಭಿನ್ನ ಸಂಸ್ಕೃತಿಗಳೊAದಿಗೆ ಕೆಲಸ ಮಾಡುವ ಕೌಶಲ್ಯಗಳನ್ನು ವೃದ್ಧಿಸಿಕೊಂಡಾಗ ಅವಕಾಶಗಳ ಸೃಷ್ಟಿಯಾಗುತ್ತವೆ ಹಾಗೂ ವಿದ್ಯಾರ್ಥಿಗಳು ಜಾಗತಿಕ ನಾಗರಿಕರಾಗುವಿಕೆಗೆ ಹೆದ್ದಾರಿಯಾಗುತ್ತದೆ ಎಂದು ನುಡಿದರು.

‘ಉನ್ನತ ಶಿಕ್ಷಣದ ಅಂತರರಾಷ್ಟ್ರೀಕರಣ ಎಂದರೆ ಶಿಕ್ಷಣ ವ್ಯವಸ್ಥೆಯಲ್ಲಿ ಜಾಗತಿಕ ದೃಷ್ಟಿಕೋನವನ್ನು ಅಳವಡಿಸುವುದು. ಪಠ್ಯಕ್ರಮ, ಬೋಧನೆ, ಸಂಶೋಧನೆ, ಆವಿಷ್ಕಾರಗಳಲ್ಲಿ ತೊಡಗಿಸಿಕೊಳ್ಳುವುದು. ವಿದ್ಯಾರ್ಥಿ ಮತ್ತು ಅಧ್ಯಾಪಕರ ನಡುವಿನ ಬೌದ್ಧಿಕ ವಿನಿಮಯದ ಜೊತೆಗೆ ಶಿಕ್ಷಣ ಸಂಸ್ಥೆಗಳ  ನಡುವಿನ ಸಂಶೋಧನಾ ವಿನಿಮಯಗಳು ಮುಖ್ಯವಾಗುತ್ತವೆ. ಇದು ವಿದ್ಯಾರ್ಥಿಗಳನ್ನು ವಿದೇಶಕ್ಕೆ ಕಳುಹಿಸುವುದೇ ಅಲ್ಲ, ಜಗತ್ತನ್ನೇ ನಮ್ಮ ತರಗತಿಯೊಳಗೆ ತರುವುದಾಗಿದೆ’ ಎಂದು ಹೇಳಿದರು.

‘ನಾವೀಗ ಸೀಮಾರಹಿತ ಜಗತ್ತಿನಲ್ಲಿ ಬದುಕುತ್ತಿದ್ದೇವೆ. ಜಗತ್ತಿನಲ್ಲಿ ಜ್ಞಾನ, ಕೌಶಲ್ಯ ಮತ್ತು ಆವಿಷ್ಕಾರಗಳು ವೇಗವಾಗಿ ಹರಡುತ್ತಿವೆ. ಉನ್ನತ ಶಿಕ್ಷಣದ ಅಂತರರಾಷ್ಟಿçÃಕರಣ ಐಷಾರಾಮಿ ವಿಷಯವಾಗಿಲ್ಲ. ಹೀಗಾಗಿ ವಿಶ್ವವಿದ್ಯಾಲಯಗಳು ಈಗ ಸ್ಥಳೀಯ ಅಥವಾ ರಾಷ್ಟ್ರೀಯ ಮಟ್ಟವನ್ನು ಮೀರಿ ಜಾಗತಿಕವಾಗಿ ಸ್ಪರ್ಧಿಸುತ್ತಿವೆ. ಅದಕ್ಕೆ ತಕ್ಕಂತೆ ನಮ್ಮ ಶಿಕ್ಷಣದ ಗುಣಮಟ್ಟವೂ ಬದಲಾಗಬೇಕು. ವಿದ್ಯಾರ್ಥಿಗಳಲ್ಲಿ ವಿಮರ್ಶಾತ್ಮಕ ಚಿಂತನೆ, ಸಾಂಸ್ಕೃತಿಕ ಅರಿವು ಮತ್ತು ಹೊಂದಿಕೊಳ್ಳುವ ಸಾಮರ್ಥ್ಯ ಬೆಳೆಸುವ ಶಿಕ್ಷಣ ಅತ್ಯಗತ್ಯ ಎಂದು ಹೇಳಿದರು.

ಭಾರತವು ಶ್ರೀಮಂತ ಶೈಕ್ಷಣಿಕ ಪರಂಪರೆ ಮತ್ತು ಯುವಜನ ಶಕ್ತಿಯನ್ನು ಹೊಂದಿದೆ. ರಾಷ್ಟ್ರೀಯ  ಶಿಕ್ಷಣ ನೀತಿಯ ಮೂಲಕ ಸಂಯುಕ್ತ ಕಾರ್ಯಕ್ರಮಗಳು ಮತ್ತು ವಿದೇಶಿ ವಿಶ್ವವಿದ್ಯಾಲಯಗಳ ಭಾಗವಹಿಸುವಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಭಾರತವು ಕೇವಲ ಪ್ರತಿಭೆಗಳನ್ನು ರಫ್ತು ಮಾಡುವ ರಾಷ್ಟçವಾಗದೆ, ದೃಢ ನಾಯಕತ್ವ ಮತ್ತು ಸ್ಪಷ್ಟ ದೃಷ್ಟಿಕೋನದಿಂದ ಎಲ್ಲರನ್ನೂ ಒಳಗೊಂಡ ಶಿಕ್ಷಣದ ಅಂತರರಾಷ್ಟ್ರೀಕರಣಕ್ಕೆ  ಆದ್ಯತೆ ನೀಡಬೇಕು. ಅದರೊಂದಿಗೆ ಭಾರತವು ಜಾಗತಿಕ ಶಿಕ್ಷಣ ಕೇಂದ್ರವಾಗುವ ಸಾಮರ್ಥ್ಯ ಹೊಂದಿದೆ ಎಂಬುದನ್ನು ಸಾಬೀತುಪಡಿಸಬೇಕಾಗಿದೆ ಎಂದು ತಿಳಿಸಿದರು.

ಇಂಗ್ಲೆಂಡ್‌ನ ಕಾರ್ಡಿಫ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ.ಅಂಗೇಶ್ ಅನುಪಮ್ ಮಾತನಾಡಿ, ಕೌಶಲ್ಯಗಳು ಭವಿಷ್ಯದ ಕರೆನ್ಸಿಯಾಗಿವೆ. ಯುವಜನಶಕ್ತಿ ಮತ್ತು ತಾಂತ್ರಿಕ ಪ್ರತಿಭೆ ಭಾರತ ಬಹುದೊಡ್ಡ ಬಲವಾಗಿದ್ದು, ಸರಿಯಾದ ನೈತಿಕತೆಯೊಂದಿಗೆ ಬಳಸಿದರೆ ಮಾನವ ಕಲ್ಯಾಣಕ್ಕೆ ಮಹತ್ತರ ಕೊಡುಗೆ ನೀಡಬಹುದು ಎಂದರು.

ಭಾರತವು ಕೃತಕ ಬುದ್ಧಿಮತ್ತೆ ಮತ್ತು ದತ್ತಾಂಶ ವಿಜ್ಞಾನದಲ್ಲಿ ವೇಗವಾಗಿ ಬೆಳೆಯುತ್ತದೆ. ದತ್ತಾಂಶ ಗೌಪ್ಯತೆ, ನಿಷ್ಪಕ್ಷಪಾತ, ಪಾರದರ್ಶಕತೆಗಳು ಮುಖ್ಯವಾಗಿವೆ. ತಂತ್ರಜ್ಞಾನವು ಮಾನವನ ಬಳಕೆಗೆ ಇರಬೇಕೆ ಹೊರತು ಮಾನವನನ್ನು ಬದಲಾಯಿಸಲು ಅಲ್ಲ. ಅದಕ್ಕಾಗಿ ಜವಾಬ್ದಾರಿಯುತ ಕೃತಕ ಬುದ್ಧಿಮತ್ತೆ ಅತ್ಯಂತ ಅಗತ್ಯವಾಗಿದೆ. ಭವಿಷ್ಯವು ಯಂತ್ರಗಳಿಗೆ ಸೇರಿದ್ದಲ್ಲ. ಯಂತ್ರಗಳನ್ನು ಬುದ್ಧಿವಂತವಾಗಿ ಬಳಸುವ ಮಾನವರಿಗೆ ಸೇರಿದೆ ಎಂಬುದನ್ನು ಅರಿಯಬೇಕು’ ಎಂದು ನುಡಿದರು.

‘ಇದು ದತ್ತಾಂಶ ಆಧಾರಿತ ಜಗತ್ತು. ನಾವು ಮಾಡುವ ಪ್ರತಿಯೊಂದು ಕ್ರಿಯೆಯೂ ದತ್ತಾಂಶವನ್ನು ಸೃಷ್ಟಿಸುತ್ತದೆ. ಈ ದತ್ತಾಂಶವನ್ನು ಅರ್ಥಮಾಡಿಕೊಳ್ಳುವ ಶಕ್ತಿ ದತ್ತಾಂಶ ವಿಜ್ಞಾನಕ್ಕಿದ್ದು, ಕೃತಕ ಬುದ್ಧಿಮತ್ತೆಗೆ ದತ್ತಾಂಶಗಳ ಆಧಾರದ ಮೇಲೆ ಬುದ್ಧಿವಂತ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಹೊಂದಿದೆ. ಶಿಕ್ಷಣ, ಆರೋಗ್ಯ, ಕೈಗಾರಿಕೆ, ವ್ಯಾಪಾರ, ಆಡಳಿತ ಮತ್ತು ಸಮಾಜದ ಸೇವೆಗಳ ಸುಧಾರಣೆಯಲ್ಲಿಯೂ ಪ್ರಭಾವ ಬೀರುತ್ತಿದೆ’ ಎಂದರು.

ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎ.ಎಂ. ಖಾನ್ ಮಾತನಾಡಿ, ಜಾಗತಿಕ ಸ್ಪರ್ಧಾತ್ಮಕ ಯುಗಲ್ಲಿ ಉನ್ನತ ಶಿಕ್ಷಣದ ಅಂತರರಾಷ್ಟ್ರೀಕರಣ  ಪದ್ಧತಿಯಿಂದ ಶೈಕ್ಷಣಿಕ ಗುಣಮಟ್ಟ ಹೆಚ್ಚುತ್ತದೆ. ವಿದ್ಯಾರ್ಥಿಗಳು ಹೊಸ ಸ್ಪರ್ಧೆಯಲ್ಲಿ ಸವಾಲೊಡ್ಡಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಆತ್ಮವಿಶ್ವಾಸವನ್ನು ಮೂಡಿಸುತ್ತದೆ. ತಂತ್ರಜ್ಞಾನದ ಅಳವಡಿಕೆ, ಸಂಶೋಧನೆ, ವಿಭಿನ್ನ ಸಂಸ್ಕೃತಿಯ ಜನರೊಂದಿಗೆ ಕೂಡಿ ಕೆಲಸ ಮಾಡುವ ಮತ್ತು ಬೌದ್ಧಿಕ ಜ್ಞಾನ ವಿಸ್ತರಿಸಿಕೊಳ್ಳಲು ಅತ್ಯಗತ್ಯವಾಗಿದೆ ಎಂದು ತಿಳಿಸಿದರು.

Read also : ಕರ್ನಾಟಕ ಗ್ರಾಮೀಣ ಬ್ಯಾಂಕ್ ಗ್ರಾಹಕರ ಸಭೆ

ಹವಾಮಾನ ಬದಲಾವಣೆ, ಆರೋಗ್ಯ, ತಂತ್ರಜ್ಞಾನ ಮೊದಲಾದ ಜಾಗತಿಕ ಸವಲುಗಳಿಗೆ ಜಾಗತಿಕ ಸಹಕಾರ ಅಗತ್ಯ. ಜಾಗತಿಕ ಮಾನ್ಯತೆ, ರ‍್ಯಾಂಕಿಂಗ್ ಸುಧಾರಣೆ, ಅಂತರರಾಷ್ಟಿçÃಯ ವಿದ್ಯಾರ್ಥಿಗಳು ಮತ್ತು ಸಹಕಾರಗಳನ್ನು ಆಕರ್ಷಿಸಬಹುದು. ರಾಷ್ಟ್ರೀಯ ಆರ್ಥಿಕ ಮತ್ತು ಸಾಂಸ್ಕೃತಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಿ.ಡಿ.ಕುಂಬಾರ ಮಾತನಾಡಿ, ಭಾರತದ ಅತ್ಯುನ್ನತ ಶೈಕ್ಷಣಿಕ ಹಿನ್ನೆಲೆ, ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವನ್ನು ಗುರುತಿಸಿ, ಪ್ರೋತ್ಸಾಹಿಸುವ ಶಿಕ್ಷಣ ಕ್ರಮಗಳು ಅಗತ್ಯವಾಗಿವೆ. ವೈಯಕ್ತಿಕ ಕಲಿಕೆ, ಬುದ್ಧಿವಂತ ಮೌಲ್ಯಮಾಪನ ವ್ಯವಸ್ಥೆಗಳು ಉದ್ಯೋಗ ಅವಕಾಶಗಳನ್ನು ಒದಗಿಸುತ್ತವೆ. ಆದರೆ ಸ್ಥಳೀಯ ಸಮಸ್ಯೆಗಳನ್ನು ವಿಮರ್ಶಾತ್ಮಕವಾಗಿ ಪರಿಶೀಲಿಸಿ, ಪರಿಹರಿಸುವ ಚಿಂತನೆ ಮತ್ತು ಸ್ಥಳೀಯ ಜ್ಞಾನ ಸಂರಕ್ಷಣೆಗೂ ಮನ್ನಣೆ ನೀಡುವ ಶಿಕ್ಷಣವು ಮುಖ್ಯವಾಗಿದೆ. ಇದಕ್ಕೆ ಉನ್ನತ ಶಿಕ್ಷಣದ ಅಂತರರಾಷ್ಟ್ರೀಕರಣ  ಪೂರಕವಾಗಿದೆ ಎಂದು ಹೇಳಿದರು.

ಕೃತಕ ಬುದ್ಧಿಮತ್ತೆ, ದತ್ತಾಂಶ ವಿಜ್ಞಾನ ಸೇರಿದಂತೆ ತಾಂತ್ರಿಕ ಮತ್ತು ಯಾಂತ್ರಿಕ ಸಂಶೋಧನೆಗಳು, ಮಾನವನ  ಸಮಗ್ರ ಬೆಳವಣಿಗೆಗೆ ಕೊಡುಗೆಯಾಗಬೇಕೆ ಹೊರತು ಹೊರೆಯಾಗಬಾರದು. ವಿದ್ಯಾರ್ಥಿಗಳು ಪದವಿಯ ಜೊತೆಗೆ ನೈತಿಕ ಮೌಲ್ಯಗಳು, ದೇಸಿ ಜ್ಞಾನ, ವೃತ್ತಿ ಕೌಶಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಪಿಎಂಇ ನಿರ್ದೇಶಕ ಪ್ರೊ.ಡಿ.ಜಿ. ಪ್ರಕಾಶ್ ಸ್ವಾಗತಿಸಿದರು. ಪ್ರೊ.ಎಸ್.ಎನ್. ಪ್ರಮೋದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು. ಡಾ.ಆರ್.ಕೆ.ಸತೀಶ ವಂದಿಸಿದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಾವಣಗೆರೆ ವಿಶ್ವವಿದ್ಯಾನಿಲಯ.ದಿನಮಾನ.ಕಾಂ
Share This Article
Twitter Email Copy Link Print
Previous Article Karnataka Gramin Bank ಕರ್ನಾಟಕ ಗ್ರಾಮೀಣ ಬ್ಯಾಂಕ್ ಗ್ರಾಹಕರ ಸಭೆ
Next Article job news ಹುದ್ದೆಗಳ ಭರ್ತಿಗಾಗಿ ಸಿಬ್ಬಂದಿ ನೇಮಕಾತಿ ಆಯೋಗದ (SSC) ವತಿಯಿಂದ ಅರ್ಜಿ ಆಹ್ವಾನ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಬ್ಯಾಟರಿ ಚಾಲಿತ ವ್ಹೀಲ್ ಚೇರ್ ಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ,ಜ.08 (Davanagere) : ಪ್ರಸಕ್ತ ಸಾಲಿನಲ್ಲಿ ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿ ಚಾಲಿತ ವ್ಹೀಲ್ ಚೇರ್‍ಗಳನ್ನು ವಿತರಿಸುವ ಯೋಜನೆಯಡಿ ಆನ್ ಲೈನ್…

By Dinamaana Kannada News

Davanagere Gruahalakshmi plan : ಗೃಹಲಕ್ಷ್ಮಿಗೆ ಇಕೆವೈಸಿ, ಸ್ಮಾರ್ಟ್ ಕಾರ್ಡ್ ಸುಳ್ಳು ವದಂತಿಗೆ ಕಿವಿಗೊಡಬೇಡಿ

ದಾವಣಗೆರೆ.ಆ 20 (davanagere) :  ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ 11 ಮತ್ತು 12ನೇ ಕಂತುಗಳು ಜಮೆಯಾಗಲು ಸ್ವಲ್ಪ ತಡವಾಗಿದ್ದು…

By Dinamaana Kannada News

ಸಂವಿಧಾನ ಪ್ರೀತಿಸುವವರು ಒಂದೇ ವೇದಿಕೆಗೆ ಬರಲಿ

ದಾವಣಗೆರೆ:  ದೇಶದಲ್ಲಿ ಬಹುಭಾಷೆ, ಬಹುವರ್ಣ, ಜಾತಿ, ಧರ್ಮ, ಭಾಷೆ ಇರುವ ಬಹುತ್ವ ಭಾರತದಲ್ಲಿ ಒಂದು ದೇಶ, ಒಂದು ಚುನಾವಣೆ, ಒಬ್ಬನೇ…

By Dinamaana Kannada News

You Might Also Like

Davanagere crime news
ಅಪರಾಧ ಸುದ್ದಿ

ಸೈಬರ್ ಅಪರಾಧ:ಸಿಐಡಿಗೆ ಹಸ್ತಾಂತರಿಸಿದ ದಾವಣಗೆರೆ ಎಸ್ಪಿ

By Dinamaana Kannada News
Davanagere
ತಾಜಾ ಸುದ್ದಿ

ಜೈನ್ ವಿದ್ಯಾಲಯ|ಮಕ್ಕಳು ಪ್ರತಿಭೆ ಪ್ರದರ್ಶಿಸಲು ವಸ್ತು ಪ್ರದರ್ಶನ ಉತ್ತಮ ವೇದಿಕೆ : ಗೀತಾ

By Dinamaana Kannada News
Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಸ್ವತ್ತು ಕಳವು ಪ್ರಕರಣ: 20.38 ಕೋಟಿ ರೂ ಮೌಲ್ಯದ ಸ್ವತ್ತು ಮಾಲೀಕರಿಗೆ ವಿತರಣೆ

By Dinamaana Kannada News
Davanagere
ಆರೋಗ್ಯ

ಮೈಕೊರೆಯುವ ಚಳಿ|ಆರೋಗ್ಯದ ಸಮಸ್ಯೆಗೆ ಒಳಗಾಗದೇ ಇರಲು ಮುಂಜಾಗ್ರತೆ ವಹಿಸಿ :ಡಾ.ಜಿ.ಡಿ.ರಾಘವನ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?