ದಾವಣಗೆರೆ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿಯ ಕಾರ್ಯಕಾರಿ ಮಂಡಳಿ ಸದಸ್ಯರಾಗಿ ಆಯ್ಕೆಯಾದ ಜೈನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರಾಂಶುಪಾಲ ಹಾಗೂ ನಿರ್ದೇಶಕ ಡಾ. ಗಣೇಶ್ ಡಿ.ಬಿ ಅವರಿಗೆ ಗೌರವ ಸನ್ಮಾನ ಕಾರ್ಯಕ್ರಮ ನಡೆಯಿತು.
ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಉಪನ್ಯಾಸಕರು ಹಾಗೂ ಸಿಬ್ಬಂದಿಗಳು ಡಾ. ಗಣೇಶ್ ಡಿ.ಬಿ ಅವರಿಗೆ ಶುಭಾಶಯ ತಿಳಿಸಿ ಸನ್ಮಾನಿಸಿದರು.
Read also :ಮ್ಯಾನ್ಯುಯಲ್ ಸ್ಕಾವೇಂಜರ್ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುದಾನ ಮೀಸಲು:ಜಿಲ್ಲಾಧಿಕಾರಿ ಗಂಗಾಧರಸ್ವಾಮಿ
ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ. ಗಣೇಶ್ ಡಿ.ಬಿ, ಜೈನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಆಡಳಿತ ಮಂಡಳಿ, ಸಹೋದ್ಯೋಗಿಗಳು ಹಾಗೂ ವಿದ್ಯಾರ್ಥಿಗಳಿಗೆ ಕೃತಜ್ಞತೆ ಹೇಳಿದ ಅವರು, ಮುಂದಿನ ದಿನಗಳಲ್ಲಿ ತಾಂತ್ರಿಕ ಶಿಕ್ಷಣದ ಗುಣಮಟ್ಟವನ್ನು ಇನ್ನಷ್ಟು ಹೆಚ್ಚಿಸಲು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವುದಾಗಿ ತಿಳಿಸಿದರು.
