ದಾವಣಗೆರೆ ಜ.03: ಪ್ರಸಕ್ತ ಸಾಲಿನ ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ, ಡಿಪ್ಲೋಮಾ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿಯನ್ನು ಜನವರಿ 15ರವರೆಗೆ ವಿಸ್ತರಿಸಲಾಗಿದೆ.
ಕೇಂದ್ರಿಯ ಸೈನಿಕ ಮಂಡಳಿ ಮತ್ತು ಇತರೆ ಸರ್ಕಾರಿ ಮೂಲಗಳಿಂದ ಯಾವುದೇ ಶಿಷ್ಯವೇತನ ಪಡೆಯದಿರುವ ಮಾಜಿ ಸೈನಿಕ ಮಕ್ಕಳು ಅರ್ಜಿ ಸಲ್ಲಿಸಬಹುದು.
Read also : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ|ಕರಡು ಮತದಾರರ ಪಟ್ಟಿ ಪ್ರಕಟ
ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಶುಲ್ಕ ರಹಿತ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಇದೇ ಜನವರಿ 15ರೊಳಗೆ ಕಚೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಕಚೇರಿ ದೂರವಾಣಿ ಸಂಖ್ಯೆ 08182-220925 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
