Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸಮಾಜದ ಹಿತಕ್ಕಾಗಿ ಸಂಘಟನೆ ಅತ್ಯಗತ್ಯ : ವಾಲ್ಮೀಕಿ ಶ್ರೀ ಅಭಿಮತ
ತಾಜಾ ಸುದ್ದಿ

ಸಮಾಜದ ಹಿತಕ್ಕಾಗಿ ಸಂಘಟನೆ ಅತ್ಯಗತ್ಯ : ವಾಲ್ಮೀಕಿ ಶ್ರೀ ಅಭಿಮತ

Dinamaana Kannada News
Last updated: January 3, 2026 11:52 am
Dinamaana Kannada News
Share
Davanagere
SHARE
ದಾವಣಗೆರೆ: ಸಮಾಜದ ಹಿತಕ್ಕಾಗಿ ಸಂಘಟನೆ ಅತ್ಯಗತ್ಯ, ಏಕೆಂದರೆ ಅದು ಸಮ ಸಮಾಜ ನಿರ್ಮಾಣ, ಆರ್ಥಿಕ ಸಬಲೀಕರಣ, ಅಭಿವೃದ್ಧಿ ಮತ್ತು ಸಮಸ್ಯೆಗಳ ಪರಿಹಾರಕ್ಕೆ ಸಹಕಾರಿಯಾಗುತ್ತದೆ. ಸಂಘಟನೆಯಿಂದ ಸಮುದಾಯ ತಮ್ಮ ಹಕ್ಕುಗಳನ್ನು ಪಡೆಯಲು ಶಕ್ತಿಯನ್ನು ನೀಡುತ್ತದೆ ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಕರೆ ನೀಡಿದರು.
ನಗರದ ಪಿ.ಬಿ.ರಸ್ತೆಯ ಹೋಟೆಲ್ ಓಷನ್ ಪಾರ್ಕ್ನ ಆನೆಕೊಂಡ ಹನುಮಂತಪ್ಪ ಕನ್‌ವೆನ್‌ಷನ್ ಹಾಲ್‌ನಲ್ಲಿ ಶನಿವಾರ ಆಯೋಜಿಸಿದ್ದ ಅಖಿಲ ಕರ್ನಾಟಕ ಮಹರ್ಷಿ ವಾಲ್ಮೀಕಿ ನಾಯಕ ಎಲ್‌ಐಸಿ ನೌಕರರ ಮತ್ತು ನಿವೃತ್ತ ನೌಕರರ ಹಿತರಕ್ಷಣಾ ವೇದಿಕೆ ಉದ್ಘಾಟನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಮಾನತೆ ಮತ್ತು ನ್ಯಾಯ ಆಧಾರಿತ ಸಮಾಜವನ್ನು ರೂಪಿಸಲು ಸಂಘಟಿತ ಹೋರಾಟ ಮುಖ್ಯ. ಸಮಾಜವನ್ನು ಆರ್ಥಿಕವಾಗಿ ಸದೃಢಗೊಳಿಸಲು, ಶಿಕ್ಷಣ ಮತ್ತು ಇತರ ಸೌಲಭ್ಯಗಳನ್ನು ಪಡೆಯಲು ಸಂಘಟನೆ ಸಹಕಾರಿ. ಈ ನಿಟ್ಟಿನಲ್ಲಿ ಎಲ್ಐಸಿ ನೌಕರರು ಸಂಘ ಸ್ಥಾಪಿಸುವ ಮೂಲಕ ಸಂಘಟಿತರಾಗುತ್ತಿರುವುದು ಸಂತಸದ ವಿಷಯವಾಗಿದೆ ಎಂದರು.
ದಾವಣಗೆರೆಯಲ್ಲಿ ಆರಂಭವಾಗಿರುವ ನಿಮ್ಮ ಸಂಘಟನೆ ಕೇವಲ ದಾವಣಗೆರೆಗೆ ಸೀಮಿತವಾಗದೆ ರಾಜ್ಯಾದ್ಯಂತ ಸಂಘಟನೆ ಆಗಬೇಕು. ಇಲ್ಲಿಂದಲೇ ನಿರ್ಣಯ ತೆಗೆದುಕೊಂಡು ರಾಜ್ಯದ ೩೦ ಜಿಲ್ಲೆಗಳಲ್ಲಿ ಸಭೆ, ಸಮಾರಂಭಗಳನ್ಬು ಅಯೋಜಿಸುವ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ಸಂಘಟನೆಯನ್ನು ತೊಡಗಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.
ನಿವೃತ್ತ ಪ್ರಾಂಶುಪಾಲ ಡಾ.ಎಂ.ಮಂಜಣ್ಣ ಮಾತನಾಡಿ, ಯಾವುದೇ ಸಂಘಟನೆ ನೊಂದವರಿಗೆ ದನಿಯಾಗಬೇಕು. ಸಂಘಟನೆ ಜೊತೆಗೆ ಮಕ್ಕಳಲ್ಲಿ ಜವಾಬ್ದಾರಿಗಳನ್ನು ಬೆಳೆಸಬೇಕೆಂದು ಸಲಹೆ ನೀಡಿದರು.

Read also : ಶಿಷ್ಯವೇತನಕ್ಕೆ ಅರ್ಜಿಆಹ್ವಾನ:ಅವಧಿ ವಿಸ್ತರಣೆ

ನಟ, ನಿರ್ದೇಶಕ ಮತ್ತು ನಿರ್ಮಾಪಕ ರಾಧಾಕೃಷ್ಣ ಪಲ್ಲಕ್ಕಿ ಮಾತನಾಡಿ, ಯೋಚನೆ ಮತ್ತು ಉದ್ದೇಶಗಳು ಸರಿಯಾಗಿದ್ದರೆ, ಯಾವುದೇ ಒಂದು ವೇದಿಕೆ ಅತ್ಯಲ್ಪ ಕಾಲದಲ್ಲಿ ಅತ್ಯುತ್ತಮ ಸ್ಥಾನ ಗಳಿಸುತ್ತದೆ ಎಂಬುದಕ್ಕೆ ಈ ಸಂಘಟನೆ ಉದಾಹರಣೆಯಾಗಿದೆ. ಸಂಘಟನೆ ಮತ್ತು ಒಗ್ಗಟ್ಟು ಇಲ್ಲದಿದ್ದರೆ ಯಾವುದೇ ಸಮಾಜ ಮತ್ತು ಪುಣ್ಯ ಪುರಷರು ಇತಿಹಾಸದಲ್ಲಿ ಮಣ್ಣಾಗಿ ಹೋಗುತ್ತಾರೆ. ಪಾಳೆಗಾರರ ಆಳ್ವಿಕೆ ಕುರಿತ ಐತಿಹಾಸಿಕ ವಿಚಾರಗಳನ್ನು ತಿಳಿಸಿದರು.
ಸಂಘದ ಸಂಸ್ಥಾಪಕ ಅಧ್ಯಕ್ಷ ಬಿ.ಟಿ.ಬಸವರಾಜ ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷ ರಾಮಚಂದ್ರಪ್ಪ, ಉಪಾಧ್ಯಕ್ಷ ಶಂಭು ನಾಯಕ, ಶ್ರೀನಿವಾಸ, ಶಿವಣ್ಣ, ವೆಂಕಟೇಶ್ ಎನ್.ಪೂಜಾರ್, ನಂದೀಶ್ ವಿ.ಬ್ಯಾಡಗಿ, ದಿವಾಕರ, ಸರಸ್ವತಿ, ಡಿ.ಬೊಮ್ಮಾಯಿ, ವೆಂಕಪ್ಪ ನಾಯಕ, ದೊರೆಸ್ವಾಮಿ ನಾಯಕ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಎಲ್‌ಐಸಿ ದಾವಣಗೆರೆ-೨ ಕಚೇರಿಯ ಅಭಿವೃದ್ಧಿ ಅಧಿಕಾರಿ ಸಿ.ರವಿ ಸೇರಿದಂತೆ ರಾಜ್ಯದಿಂದ ಆಗಮಿಸಿದ್ದ ವಿವಿಧ ಜಿಲ್ಲೆಗಳ ಎಲ್‌ಐಸಿ ಅಭಿವೃದ್ಧಿ ಅಧಿಕಾರಿಗಳನ್ನು ಸನ್ಮಾನಿಸಲಾಯಿತು. ಆರ್.ಗೌತಮಿ ಪ್ರಾರ್ಥಿಸಿದರು.
‘ಯಾವುದೇ ಸಮಾಜದ ಪ್ರಗತಿ ಮತ್ತು ಅಭಿವೃದ್ಧಿಗೆ ಸಂಘಟನೆ ಒಂದು ಮೂಲಾಧಾರ.ಸಂಘಟನೆಯಿಂದ ಸಮಾಜ ಬೆಳೆಯುತ್ತದೆ. ವ್ಯಕ್ತಿಗಳು ಹಾಗೂ ಇಲಾಖೆಗಳ ಪರಿಚಯ, ಸರ್ಕಾರದ ಯೋಜನೆಗಳು, ಸಮಾಜದಲ್ಲಿ ನಡೆಯುತ್ತಿರುವ ಕಾರ್ಯಕ್ರಮಗಳು, ಬೆಳವಣಿಗೆ ಮೊದಲಾದವುಗಳನ್ನು ಹಂಚಿಕೊಳ್ಳಬಹುದು. ಸಂಘಟನೆ ಸಮಾಜದ ಶಕ್ತಿಯಾಗಿರುತ್ತದೆ’.
-ಶ್ರೀಪ್ರಸನ್ನಾನಂದಪುರಿ ಸ್ವಾಮೀಜಿ, ಜಗದ್ಗುರು, ವಾಲ್ಮೀಕಿ ಗುರುಪೀಠ.
TAGGED:Davanagere Newsdinamaana.comKannada NewsValmiki Shri Abhimataಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article extended ಶಿಷ್ಯವೇತನಕ್ಕೆ ಅರ್ಜಿಆಹ್ವಾನ:ಅವಧಿ ವಿಸ್ತರಣೆ
Next Article Davanagere ದಾವಣಗೆರೆ:ತಜ್ಞ ಸಮಿತಿ ಸದಸ್ಯರಾಗಿ ಡಾ.ಎಸ್.ಮಂಜಪ್ಪ ನೇಮಕ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ|ಪ್ಲಾಸ್ಟಿಕ್ ಮಾನವನ ಆರೋಗ್ಯ ಹಾಗೂ ಪರಿಸರಕ್ಕೆ ಮಾರಕ

ದಾವಣಗೆರೆ : ಮಾನವನ ಆರೋಗ್ಯ ಹಾಗೂ ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ಮಾರಕವಾಗಿವೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ…

By Dinamaana Kannada News

ಶಾಸಕ ಕೆ.ಎಸ್.ಬಸವಂತಪ್ಪಗೆ ಡಿ ದರ್ಜೆ ನೌಕರರಿಂದ ಸನ್ಮಾನ

ದಾವಣಗೆರೆ:  ಅಧಿವೇಶನದಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ನೌಕರರ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದ ಮಾಯಕೊಂಡ ಶಾಸಕ…

By Dinamaana Kannada News

ಜೀವ ಉಳಿಸಲು ವರ್ಷಕ್ಕೊಂದು ಬಾರಿಯಾದರೂ ರಕ್ತದಾನ ಮಾಡೋಣ : ಡಾ. ಗೀತಾ

ದಾವಣಗೆರೆ ಜೂ.14  :  ತುರ್ತು ಸಂದರ್ಭದಲ್ಲಿ ಜೀವಗಳನ್ನುಳಿಸಲು ರಕ್ತದ ಅವಶ್ಯಕತೆ ಇರುತದೆ. ಈ ರಕ್ತವನ್ನು ಯಾರು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ,…

By Dinamaana Kannada News

You Might Also Like

jagalore
ತಾಜಾ ಸುದ್ದಿ

ವಿಜ್ಞಾನವು ಮಾನವನ ಜೀವನದ ಅವಿಭಾಜ್ಯ ಅಂಗ : ಎಂ.ಜೆ.ಶ್ರೀನಿವಾಸ್

By Dinamaana Kannada News
Davanagere
ತಾಜಾ ಸುದ್ದಿ

ಒಳ ಮೀಸಲಾತಿ ಆಧಾರದಲ್ಲಿ ಸರ್ಕಾರಿ ಹುದ್ದೆಗಳ ಭರ್ತಿಗೆ ಒತ್ತಾಯಿಸಿ ಮಾ 6 ರಂದು ದಾವಣಗೆರೆ ಬಂದ್‌

By Dinamaana Kannada News
Applications invited
ತಾಜಾ ಸುದ್ದಿ

ಡಾ.ಬಾಬುಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಲಘುಬಾರಿ ವಾಹನ ಚಾಲನಾ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?